Mysore
34
scattered clouds

Social Media

ಶುಕ್ರವಾರ, 28 ಮಾರ್ಚ್ 2025
Light
Dark

ಅವಿವಾಹಿತ ಹಾಗೂ ವಿಚ್ಛೇದಿತ ಮಹಿಳೆಯರಿಗೆ ಮನಸ್ವಿನಿ ಯೋಜನೆ

ಕರ್ನಾಟಕ ರಾಜ್ಯ ಸರ್ಕಾರ ಸಾಮಾಜಿಕವಾಗಿ ಹಾಗೂ ಆರ್ಥಿಕವಾಗಿ ಸಂಕಷ್ಟದಲ್ಲಿರುವ ಅವಿವಾಹಿತ ಹಾಗೂ ವಿಚ್ಛೇದಿತ ಮಹಿಳೆಯರಿಗೆ ಆರ್ಥಿಕ ಭದ್ರತೆ ಒದಗಿಸಲು ಮನಸ್ವಿನಿ  ಯೋಜನೆಯನ್ನು ಜಾರಿ ಮಾಡಿದೆ. ಈ ಯೋಜನೆಯಡಿ ಅವಿವಾಹಿತ ಹಾಗೂ ವಿಚ್ಛೇ ದನ ಪಡೆದಿರುವ ಮಹಿಳೆಯರಿಗೆ ಪ್ರತಿ ತಿಂಗಳು ೫೦೦ ರೂಪಾಯಿ ಮಾಸಾಶನ ನೀಡಲಾಗುತ್ತದೆ.

ಅರ್ಹ ಫಲಾನುಭವಿಗಳು ಯಾರ್ಯಾರು?
೧.ಫಲಾನುಭವಿಯು ೪೦ರಿಂದ ೬೫ ವರ್ಷ ವಯಸ್ಸಿನೊಳಗಿರಬೇಕು.
೨.ಗ್ರಾಮೀಣ ಪ್ರದೇಶದಲ್ಲಿ ವಾರ್ಷಿಕ ೧೨ ಸಾವಿರ ರೂಪಾಯಿ ಹಾಗೂ ನಗರ ಪ್ರದೇಶದಲ್ಲಿ ಬಡತನ ರೇಖೆಗಿಂತ ಕೆಳಗಿರುವ ಕುಟುಂಬದ ಮಹಿಳೆಯರು ಈ ಯೋಜನೆಯ ಫಲಾನುಭವಿಗಳಾಗಲು ಅರ್ಹರಾಗಿದ್ದಾರೆ.

ಬೇಕಾಗಿರುವ ಅಗತ್ಯ ದಾಖಲೆಗಳು
೧.ಅವಿವಾಹಿತರು ವಿವಾಹ ಆಗಿಲ್ಲವೆಂದು ಹಾಗೂ ವಿಚ್ಛೇ ದಿತರು ವಿಚ್ಛೇದನ ಪಡೆದಿರುವ ಬಗ್ಗೆ ಸ್ವಯಂ ಪ್ರಮಾಣ ಪತ್ರ ಸಲ್ಲಿಸಬೇಕು.
೨. ಆದಾಯ ಪ್ರಮಾಣ ಪತ್ರ, ಚುನಾವಣ ಗುರುತಿನ ಚೀಟಿ ಅಥವಾ ವಯಸ್ಸಿನ ಬಗ್ಗೆ ವೈದ್ಯಕೀಯ ಪ್ರಮಾಣ ಪತ್ರ ಸಲ್ಲಿಸಬೇಕು.

ಈ ಮಾಸಾಶನವನ್ನು ಫಲಾನುಭವಿಯ ಬ್ಯಾಂಕ್ ಖಾತೆಗೆ ಅಥವಾ ಅಂಚೆ ಕಚೇರಿಯ ಖಾತೆಗೆ ನೇರ ನಗದು ವರ್ಗಾವಣೆ ಮೂಲಕ ಜಮೆ ಮಾಡಲಾಗುತ್ತದೆ. ಈ ಯೋಜನೆಯ ಫಲಾನುಭವಿಗಳಾಗಲು ಬಯಸುವವರು ತಮ್ಮ ವ್ಯಾಪ್ತಿಯಲ್ಲಿ ಬರುವ ಅಟಲ್‌ಜೀ ಜನಸ್ನೇಹಿ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬೇಕು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ