ಕರ್ನಾಟಕ ರಾಜ್ಯ ಸರ್ಕಾರ ಸಾಮಾಜಿಕವಾಗಿ ಹಾಗೂ ಆರ್ಥಿಕವಾಗಿ ಸಂಕಷ್ಟದಲ್ಲಿರುವ ಅವಿವಾಹಿತ ಹಾಗೂ ವಿಚ್ಛೇದಿತ ಮಹಿಳೆಯರಿಗೆ ಆರ್ಥಿಕ ಭದ್ರತೆ ಒದಗಿಸಲು ಮನಸ್ವಿನಿ ಯೋಜನೆಯನ್ನು ಜಾರಿ ಮಾಡಿದೆ. ಈ ಯೋಜನೆಯಡಿ ಅವಿವಾಹಿತ ಹಾಗೂ ವಿಚ್ಛೇ ದನ ಪಡೆದಿರುವ ಮಹಿಳೆಯರಿಗೆ ಪ್ರತಿ ತಿಂಗಳು ೫೦೦ ರೂಪಾಯಿ ಮಾಸಾಶನ ನೀಡಲಾಗುತ್ತದೆ.
ಅರ್ಹ ಫಲಾನುಭವಿಗಳು ಯಾರ್ಯಾರು?
೧.ಫಲಾನುಭವಿಯು ೪೦ರಿಂದ ೬೫ ವರ್ಷ ವಯಸ್ಸಿನೊಳಗಿರಬೇಕು.
೨.ಗ್ರಾಮೀಣ ಪ್ರದೇಶದಲ್ಲಿ ವಾರ್ಷಿಕ ೧೨ ಸಾವಿರ ರೂಪಾಯಿ ಹಾಗೂ ನಗರ ಪ್ರದೇಶದಲ್ಲಿ ಬಡತನ ರೇಖೆಗಿಂತ ಕೆಳಗಿರುವ ಕುಟುಂಬದ ಮಹಿಳೆಯರು ಈ ಯೋಜನೆಯ ಫಲಾನುಭವಿಗಳಾಗಲು ಅರ್ಹರಾಗಿದ್ದಾರೆ.
ಬೇಕಾಗಿರುವ ಅಗತ್ಯ ದಾಖಲೆಗಳು
೧.ಅವಿವಾಹಿತರು ವಿವಾಹ ಆಗಿಲ್ಲವೆಂದು ಹಾಗೂ ವಿಚ್ಛೇ ದಿತರು ವಿಚ್ಛೇದನ ಪಡೆದಿರುವ ಬಗ್ಗೆ ಸ್ವಯಂ ಪ್ರಮಾಣ ಪತ್ರ ಸಲ್ಲಿಸಬೇಕು.
೨. ಆದಾಯ ಪ್ರಮಾಣ ಪತ್ರ, ಚುನಾವಣ ಗುರುತಿನ ಚೀಟಿ ಅಥವಾ ವಯಸ್ಸಿನ ಬಗ್ಗೆ ವೈದ್ಯಕೀಯ ಪ್ರಮಾಣ ಪತ್ರ ಸಲ್ಲಿಸಬೇಕು.
ಈ ಮಾಸಾಶನವನ್ನು ಫಲಾನುಭವಿಯ ಬ್ಯಾಂಕ್ ಖಾತೆಗೆ ಅಥವಾ ಅಂಚೆ ಕಚೇರಿಯ ಖಾತೆಗೆ ನೇರ ನಗದು ವರ್ಗಾವಣೆ ಮೂಲಕ ಜಮೆ ಮಾಡಲಾಗುತ್ತದೆ. ಈ ಯೋಜನೆಯ ಫಲಾನುಭವಿಗಳಾಗಲು ಬಯಸುವವರು ತಮ್ಮ ವ್ಯಾಪ್ತಿಯಲ್ಲಿ ಬರುವ ಅಟಲ್‌ಜೀ ಜನಸ್ನೇಹಿ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬೇಕು.
ಮೈಸೂರು ವಿಶ್ವವಿದ್ಯಾನಿಲಯದ ರಾಜ್ಯಶಾಸ್ತ್ರ ವಿಭಾಗದ ವಿಶ್ರಾಂತ ಮುಖ್ಯಸ್ಥರು ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ವೈಚಾರಿಕ ಚಿಂತನೆಯ ಉಪನ್ಯಾಸವನ್ನು ನೀಡುವುದರ ಮೂಲಕ ಪ್ರಖ್ಯಾತಿ…
ಕೀರ್ತಿ ಸಾಹಿತ್ಯ ಸಮ್ಮೇಳನದ ಮೂರೂ ದಿನಗಳು ಇವರನ್ನು ಭೇಟಿಯಾಗುತ್ತಲೇ ಇದ್ದೆ. ತಿಂದವರ ಊಟದ ಎಲೆಗಳನ್ನು ತೆಗೆಯುತ್ತಾ, ತಮಿಳು ಭಾಷೆಯಲ್ಲಿ ಮಾತಾಡಿಕೊಳ್ಳುತ್ತಿದ್ದರು.…
ಪ್ರೊ. ಆರ್.ಎಂ. ಚಿಂತಾಮಣಿ ನಾವು ಸ್ವಾತಂತ್ರ್ಯ ಪಡೆದು ನೂರು ವರ್ಷಗಳಾಗುವ ಹೊತ್ತಿಗೆ ಭಾರತ ವಿಕಸಿತ ದೇಶವಾಗುತ್ತದೆ ಎಂದು ನಮ್ಮ ಪ್ರಧಾನಿಗಳು…
ಪ್ರಶಾಂತ್. ಎಸ್ ಮೈಸೂರು: ಚಳಿಗಾಲ ಪ್ರಾರಂಭವಾಗುತ್ತಿದ್ದಂತೆ ಹುಲಿ-ಮಾನವ ಸಂಘರ್ಷ ಹೆಚ್ಚಾಗುತ್ತದೆ. ಇದು ಅಚ್ಚರಿಯಾದರೂ ಸತ್ಯ. ನವೆಂಬರ್‌ನಿಂದ ಪ್ರಾರಂಭವಾಗಿ ಫೆಬ್ರವರಿ ತಿಂಗಳ…
ಬೆಂಗಳೂರು: ರಾಜ್ಯದಲ್ಲಿ ಎಚ್‌ಎಂಪಿವಿ ವೈರಸ್‌ನ ಎರಡು ಪ್ರಕರಣ ಪತ್ತೆಯಾದ ಹಿನ್ನೆಲೆಯಲ್ಲಿ ಸೋಂಕು ಹರಡದಂತೆ ಸರ್ಕಾರ ಸೂಕ್ತ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಲಿದೆ…
ನವದೆಹಲಿ: ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೋ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಈ…