ಉತ್ತರ ಭಾರತದ ಹಲವು ರಾಜ್ಯಗಳು ಚಲನಚಿತ್ರಗಳ ನಿರ್ಮಾಣಕ್ಕೆ ಸಾಕಷ್ಟು ಉತ್ತೇಜನ ನೀಡುತ್ತಿವೆ. ಆ ಮೂಲಕ ತಮ್ಮ ರಾಜ್ಯಗಳ ಪ್ರವಾಸೋದ್ಯಮವನ್ನು ಜನಪ್ರಿಯಗೊಳಿಸುವುದು ಉದ್ದೇಶ. ವಿವಿಧ ಸೌಲಭ್ಯಗಳಲ್ಲಿ ರಿಯಾಯಿತಿ ಮಾತ್ರವಲ್ಲದೆ, ಸಹಾಯಧನವನ್ನು ಕೂಡ ನೀಡುತ್ತಿವೆ. ಹಾಗಾಗಿ ಕನ್ನಡ ಚಿತ್ರಗಳೂ ಅಲ್ಲಿ ಚಿತ್ರೀಕರಣವಾಗಿ ಅಲ್ಲಿನ ಸೌಲಭ್ಯವನ್ನು ಪಡೆಯುತ್ತಿವೆ. ಇದೀಗ ಹೊಸ ಚಿತ್ರವೊಂದರ ಚಿತ್ರೀಕರಣ ಉತ್ತರಪ್ರದೇಶದಲ್ಲಿ ಆರಂಭವಾಗಿ ಮುಂದುವರಿಯುತ್ತಿರುವ ಸುದ್ದಿ.
ಚಿತ್ರದ ಹೆಸರು ‘ರೆಡ್ ರಮ್’. ಅಶೋಕ್ ದೇವನಾಂಪ್ರಿಯ, ಕಿಶೋರ್ ಎ. ವಿಜಯ್ ಕುಮಾರ್ ಹಾಗೂ ಹನಿ ಚೌಧರಿ ನಿರ್ಮಾಣದ ಚಿತ್ರ. ಇದರ ಮುಹೂರ್ತ ಸಮಾರಂಭ ಉತ್ತರ ಪ್ರದೇಶದ, ಮೋದಿನಗರದ ಶ್ರೀ ಸನಾತನ ಧರ್ಮ ದೇವಸ್ಥಾನದಲ್ಲಿ ನೆರವೇರಿತು. ಮುಖ್ಯ ಅತಿಥಿಗಳಾಗಿ ಮೋದಿ ನಗರದ ಶಾಸಕಿ ಮಂಜು ಶಿವಾಚ್, ಸ್ಥಳೀಯ ಕೌನ್ಸಿಲರ್ ರಾಜಕುಮಾರಿ ಮುನ್ನಿಜಿ ಹಾಗೂ ಅನೇಕ ಗಣ್ಯರು ಆಗಮಿಸಿ ಶುಭ ಹಾರೈಸಿದರು. ಆರ್. ಪ್ರಮೋದ್ ಜೋಯಿಸ್ ನಿರ್ದೇಶನದ ಈ ಚಿತ್ರಕ್ಕೆ ಸುಮಾರು ೨೦ ದಿನಗಳ ಕಾಲ ಉತ್ತರಪ್ರದೇಶದಲ್ಲಿ ಚಿತ್ರೀಕರಣ ನಡೆಯಲಿದೆ. ಉಳಿದ ಭಾಗವನ್ನು ಬೆಂಗಳೂರಿನಲ್ಲಿ ಎಂದು ಚಿತ್ರತಂಡದ ಪರವಾಗಿ ಅಫ್ಜಲ್ ಮಾಹಿತಿ ನೀಡಿದ್ದಾರೆ. ಶಿವಶಂಕರ್ (ಶಂಖು) ಛಾಯಾಗ್ರಹಣ ಹಾಗೂ ಆರ್.ಚೇತನ್ ಕೃಷ್ಣ ಸಂಗೀತ ಸಂಯೋಜನೆಯ ಈ ಚಿತ್ರದ ಕಾರ್ಯನಿರ್ವಾಹಕ ನಿರ್ಮಾಪಕರು ಅಫ್ಜಲ್. ಹಿಂದಿ ನಟ ರಾಜ್ ವೀರ್, ಮಧುರಾ, ಅಫ್ಜಲ್ , ಶ್ರೀದತ್ತಾ, ಪ್ರಾಚಿ ಶರ್ಮ, ಧ್ರಿತೇಶ್ ವಿನಯ್ ಸೂರ್ಯ, ಯತಿರಾಜ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಕೊಡಗಿನ ಮಧುರಾ ಹಾಗೂ ಪ್ರಾಚಿ ಶರ್ಮ (ಮುಂಬೈ) ಇಬ್ಬರು ಈ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪರಿಚಯವಾಗಲಿದ್ದಾರೆ.
ಧರ್ಮ ಕೀರ್ತಿರಾಜ್ ಹೊಸ ಚಿತ್ರ ‘ಬುಲೆಟ್’
ಹಿಂದಿ ಮತ್ತು ತಮಿಳು ಚಿತ್ರಗಳನ್ನು ನಿರ್ದೇಶಿಸಿರುವ ಸತ್ಯಜಿತ್ ಇದೀಗ ಕನ್ನಡ ಚಿತ್ರವೊಂದನ್ನು ನಿರ್ಮಿಸಿ, ನಿರ್ದೇಶಿಸುತ್ತಿದ್ದಾರೆ. ಚಿತ್ರದ ಹೆಸರು ‘ಬುಲೆಟ್’ ಧರ್ಮ ಕೀರ್ತಿರಾಜ್ ಮುಖ್ಯ ಭೂಮಿಕೆಯ ಈ ಚಿತ್ರದ ಮುಹೂರ್ತ ಸಮಾರಂಭ ಬೆಂಗಳೂರಿನ ಆರ್ ಟಿ ನಗರದಲ್ಲಿರುವ ವಿನಾಯಕ ದೇವಸ್ಥಾನದಲ್ಲಿ ನಡೆಯಿತು. ಮೊದಲ ಚಿತ್ರಿಕೆಗೆ ಶಾಸಕ ಭೈರತಿ ಸುರೇಶ್, ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷ ಪ್ರವೀಣ್ ಶೆಟ್ಟಿ ಆರಂಭ ಫಲಕ ತೋರಿಸಿದರೆ, ಮಹಿಮ್ ಕ್ಯಾಮೆರಾ ಚಾಲನೆ ಮಾಡಿ ಶುಭ ಕೋರಿದರು. ಸತ್ಯಜಿತ್ ಪ್ರಕಾರ, ಒಂದೇ ಹಂತದಲ್ಲಿ ಚಿತ್ರೀಕರಣ ನಡೆಯಲಿದೆ. ಬೆಂಗಳೂರು, ಗೋವಾ, ಮಂಗಳೂರಿನಲ್ಲಿ ಚಿತ್ರೀಕರಣ ನಡೆಯಲಿದೆ. ಈ ಚಿತ್ರದ ನಾಯಕನಾಗಿ ಧರ್ಮ ಕೀರ್ತಿರಾಜ್ ನಟಿಸುತ್ತಿದ್ದಾರೆ. ಮುಂಬೈನ ಶ್ರೀಯಾ ಶುಕ್ಲಾ ಹಾಗೂ ಅಜಿತಾ ಜಾ ನಾಯಕಿಯರು. ಶ್ರೀಯಾ ಸುಶಾಂತ್ ಸಿಂಗ್ ಬೋಂಪಿಕ್ ಚಿತ್ರದಲ್ಲಿ ನಟಿಸಿದ್ದಾರೆ. ಅಜಿತಾ ವೆಬ್ ಸೀರಿಸ್‌ಗಳಲ್ಲಿ ನಟಿಸಿದ್ದಾರೆ. ಧರ್ಮ ಕೀರ್ತಿರಾಜ್ ಅವರ ತಂದೆಯ ಪಾತ್ರವನ್ನು ಸತ್ಯಜಿತ್ ನಿರ್ವಹಿಸಲಿದ್ದಾರೆ. ಪಿ.ವಿ.ಆರ್ ಸ್ವಾಮಿ ಛಾಯಾಗ್ರಹಣ, ರಾಜ್ ಭಾಸ್ಕರ್ ಸಂಗೀತ ಸಂಯೋಜನೆ ಚಿತ್ರಕ್ಕಿದೆ.
ರಾಗಿಣಿ ದ್ವಿವೇದಿ ಮುಖ್ಯಪಾತ್ರದ ‘ಬಿಂಗೊ’
‘ಇದು ನನ್ನ ನಿರ್ದೇಶನದ ಎರಡನೇ ಚಿತ್ರ. ಮೊದಲ ಚಿತ್ರ ‘ಶಂಭೋ ಶಿವ ಶಂಕರ’ ಸದ್ಯದಲ್ಲೇ ಬಿಡುಗಡೆಾಂಗಲಿದೆ. ‘ಬಿಂಗೊ’ ಪದಕ್ಕೆ ಹಲವು ಅರ್ಥಗಳಿದೆ. ಆರು ಮುಖ್ಯಪಾತ್ರಗಳಲ್ಲಿ ಅತಿ ಮುಖ್ಯಪಾತ್ರದಲ್ಲಿ ರಾಗಿಣಿ ನಟಿಸುತ್ತಿದ್ದಾರೆ. ಅರ್ ಕೆ ಚಂದನ್, ರಕ್ಷಾ ನಿಂಬರ್ಗಿ, ರಾಜೇಶ್ ನಟರಂಗ, ಪವನ್ (ಮಜಾ ಟಾಕೀಸ್), ಮುರಳಿ ಪೂರ್ವಿಕ್, ಅಪೂರ್ವ, ಆಶಾ ಸುಜ್‌ಂ, ಶ್ರವಣ್, ವಿದ್ಯಾ, ಕುವಾರ್ ಮುಂತಾದ ಕಲಾವಿದರು ‘ಬಿಂಗೊ’ನಲ್ಲಿರುತ್ತಾರೆ. ಬೆಂಗಳೂರಿನಲ್ಲೇ ಚಿತ್ರೀಕರಣ ನಡೆುಂಲಿದೆ’ ಇದು ‘ಬಿಂಗೋ’ ನಿರ್ದೇಶಕ ಶಂಕರ್ ಕೋನವಾನಹಳ್ಳಿ ಚಿತ್ರದ ಕುರಿತಂತೆ ಹೇಳಿದ ವಾತು. ಆರ್.ಕೆ ಸ್ಟುಡಿೋಂಸ್ ಮತ್ತು ಮುತರಾ ವೆಂಚರ್ಸ್ ಲಾಂಛನದಲ್ಲಿ ಲಲಿತಾಸ್ವಾಮಿ ಮತ್ತು ಆರ್ ಪರಾಂಕುಶ ನಿರ್ಮಿಸುತ್ತಿರುವ, ಈ ಚಿತ್ರ ಬೆಂಗಳೂರಿನ ನಾಗರಭಾವಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಸೆಟ್ಟೇರಿತು. ಮೊದಲ ಚಿತ್ರಿಕೆಗೆ ನಟ ವಸಿಷ್ಠ ಸಿಂಹ ಆರಂಭ ಫಲಕ ತೋರಿಸಿದರೆ, ಸಚಿವ ವಿ.ಸೋಮಣ್ಣ ಕ್ಯಾಮೆರಾ ಚಾಲನೆ ವಾಡಿದರು. ಸಚಿವರಾದ ಮುನಿರತ್ನ ಮುಂತಾದ ಗಣ್ಯರು ಚಿತ್ರತಂಡಕ್ಕೆ ಶುಭ ಕೋರಿದರು. ಪುನೀತ ಹಾಗೂ ಆರ್ ಪರಾಂಕುಶ್ ನಿರ್ಮಿಸುತ್ತಿರುವ ಈ ಚಿತ್ರಕ್ಕೆ ಹಿತನ್ ಹಾಸನ್ ಸಂಗೀತ ಸಂೋಂಜನೆ, ನಟರಾಜ್ ಮುದ್ದಾಲ್ ಛಾಾಂಗ್ರಹಣ ಇದೆ.
ಕೆರೆಬೇಟೆಯ ಹಿನ್ನೆಲೆಯಲ್ಲೊಂದು ಚಿತ್ರ
ಕೆರೆಬೇಟೆ ಅಂದರೆ ಮಲೆನಾಡು ಭಾಗದಲ್ಲಿ ಬಹು ಜನಪ್ರಿಯ. ಕೆರೆಗಳಲ್ಲಿ ಅರ್ಧಕ್ಕಿಂತ ಹೆಚ್ಚು ನೀರು ಬತ್ತಿದಾಗ ಮೀನು ಹಿಡಿಯುವುದನ್ನು ಅಲ್ಲಿ ಕೆರೆಬೇಟೆ ಎಂದು ಕರೆಯುತ್ತಾರೆ. ಇದೀಗ ಅದೇ ಹೆಸರಿನಲ್ಲಿ ಚಿತ್ರವೊಂದು ತಯಾರಾಗಲಿದೆ. ‘ರಾಜಹಂಸ’ ಖ್ಯಾತಿಯ ನಟ ಗೌರಿಶಂಕರ್, ಕೆರೆಬೇಟೆ ಸಂಸ್ಕೃತಿ ಹಿನ್ನೆಲೆಯಲ್ಲಿ ತಾಂರಾಗುತ್ತಿರುವ ಚಿತ್ರದ ಮುಖ್ಯಪಾತ್ರಧಾರಿ. ಜನಮನ ಸಿನಿಮಾಸ್ ಲಾಂಛನದಲ್ಲಿ ಜೈಶಂಕರ್ ಪಟೇಲ್ ನಿರ್ಮಿಸುತ್ತಿರುವ ಈ ಚಿತ್ರವನ್ನು ಗುರುಶಿವ ಹಿತೈಷಿ ಕಥೆ ಬರೆದು ನಿರ್ದೇಶಿಸುತ್ತಿದ್ದಾರೆ. ಇದೊಂದು ಪ್ರೇಮಕಥೆಯಾದರೂ, ಕೆರೆಬೇಟೆ ಚಿತ್ರಕಥೆಯ ಒಂದು ಮುಖ್ಯ ಭಾಗವಾಗಿ ಮೂಡಿಬರಲಿದೆ ಎನ್ನುತ್ತಿದೆ ಚಿತ್ರತಂಡ. ಇತ್ತೀಚೆಗೆ ಸಾಗರದಲ್ಲಿ ಇದರ ಮುಹೂರ್ತ ಸಮಾರಂಭ ನಡೆಯಿತು. ಮೊದಲ ಹಂತದ ಚಿತ್ರೀಕರಣ ಸಿಗಂದೂರು, ಕೋಗಾರ್ ಘಾಟ್ ಹಾಗೂ ಶಿವಮೊಗ್ಗ ಜಿಲ್ಲೆಯ ಕೆಲವು ಪ್ರಮುಖ ಭಾಗಗಳಲ್ಲಿ ನಡೆಯಲಿದೆ. ಈ ಚಿತ್ರದ ಮೂಲಕ ಬಿಂದು ಶಿವರಾಮ್ ಪರಿಚಯವಾಗಲಿದ್ದಾರೆ. ಹಿತೈಷಿ ಹಾಗೂ ಗೌರಿಶಂಕರ್ ಚಿತ್ರಕಥೆ, ಕೀರ್ತನ್ ಪೂಜಾರಿ ಛಾಯಾಗ್ರಹಣ, ಗಗನ್ ಬಡೇರಿಯಾ ಸಂಗೀತ ಸಂಯೋಜನೆ, ಜ್ಞಾನೇಶ್ ಸಂಕಲನ, ಡಿಫರೆಂಟ್ ಡ್ಯಾನಿ ಸಾಹಸ ಸಂಯೋಜನೆ, ಕಂಬಿರಾಜು ನೃತ್ಯನಿರ್ದೇಶನ ಈ ಚಿತ್ರಕ್ಕಿದೆ.
ಮೈಸೂರು : ಪ್ರವಾಸಿಗರ ದಂಡೇ ನೆರೆಯುತ್ತಿದ್ದ ಸ್ಥಳದಲ್ಲೇ ಹೀಲಿಯಂ ಬಲೂನ್‌ಗಾಗಿ ಬಳಸುತ್ತಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ,…
ಕೆ.ಆರ್.ಪೇಟೆ : ರಸ್ತೆಯಲ್ಲಿ ರಾಗಿ ಒಕ್ಕಣೆ ಮಾಡುತ್ತಿದ್ದ ಸಂದರ್ಭದಲ್ಲಿ ರಾಗಿಯ ಮೇಲೆ ಕಾರು ಚಲಿಸಿದಾಗ ಕಾರು ಮಗುಚಿ ಬಿದ್ದ ಪರಿಣಾಮ…
ಮೈಸೂರು : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ವಿಜಯನಗರದ ಕೊಡವ…
ಮೈಸೂರು : ಮೈಸೂರು ಜಿಲ್ಲೆಯಾದ್ಯಂತ ಕ್ರೈಸ್ತ ಭಾಂದವರು ಕ್ರಿಸ್‌ಮಸ್ ಹಬ್ಬವನ್ನು ಸಡಗರ, ಸಂಭ್ರಮದಿಂದ ಆಚರಿಸಿದರು. ಕ್ರಿಸ್‌ಮಸ್ ಹಿನ್ನೆಲೆಯಲ್ಲಿ ನಗರದ ಐತಿಹಾಸಿಕ…
ಕೆ.ಆರ್.ಪೇಟೆ : ತಾಲ್ಲೂಕಿನ ತೆಂಡೇಕೆರೆ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಬಿ.ಎಸ್.ರಾಜು ಅವರು ತಮ್ಮ ಒಂದು ತಿಂಗಳ ವೇತನದಲ್ಲಿ…
ಬೆಂಗಳೂರು : ಸಾರ್ವಜನಿಕ ಸಾರಿಗೆಗಾಗಿ ಬಳಸುವ ವಾಹನಗಳಿಗೆ ತುರ್ತು ನಿರ್ಗಮನದ ಬಾಗಿಲುಗಳು ಇಲ್ಲದೆ ಇದ್ದರೆ ಭೌತಿಕ ಕ್ಷಮತೆಯ ದೃಢೀಕರಣ ಪತ್ರ…