ಆಂದೋಲನ ಪುರವಣಿ

‘ನೀನೇ ರಾಜಕುಮಾರ’ 4ನೇ ಆವೃತ್ತಿ ಬಿಡುಗಡೆ ಮಾಡಿದ ಅಶ್ವಿನಿ ಪುನೀತ್ ರಾಜ್ ಕುಮಾರ್

ಬೆಂಗಳೂರು : ಕನ್ನಡ ಚಿತ್ರರಂಗದ ನಟ ದಿವಂಗತ  ಪುನೀತ್ ರಾಜ್ ಕುಮಾರ್  ರವರ ಕುರಿತು ಪತ್ರಕರ್ತ ಡಾ.ಶರಣು ಹುಲ್ಲೂರು ಅವರು ಬರೆದಿರುವ ‘ನೀನೇ ರಾಜಕುಮಾರ’ ಬಯೋಗ್ರಫಿಯು ಹನ್ನೊಂದು ತಿಂಗಳಲ್ಲಿ ನಾಲ್ಕನೇ ಮರುಮುದ್ರಣ ಕಂಡಿದ್ದು ಇದನ್ನು ಇಂದು ಪುನೀತ್ ರಾಜ್ ಕುಮಾರ್ ಪತ್ನಿ ಅಶ್ವಿನಿ ಪುನೀತ್ ರಾಜಕುಮಾರ್  ಅವರು ಬಿಡುಗಡೆ ಮಾಡಿದರು.

ಬೆಂಗಳೂರಿನ ಪಿ.ಆರ್.ಕೆ ಕಚೇರಿಯಲ್ಲಿ ಬಿಡುಗಡೆ ಮಾಡಿ ಮಾತನಾಡಿದ ಅವರು. ಪುಸ್ತಕದ ಬಗ್ಗೆ ಮೆಚ್ಚುಗೆಯನ್ನು ವ್ಯಕ್ತ ಪಡಿಸಿದರು. ಪುಸ್ತಕ ಬಿಡುಗಡೆ ಸಂದರ್ಭದಲ್ಲಿ ಲೇಖಕ ಡಾ.ಶರಣು ಹುಲ್ಲೂರು, ಪ್ರಕಾಶಕ ಜಮೀಲ್ ಸಾವಣ್ಣ ಮತ್ತು ಪಿ.ಆರ್.ಕೆಯ ಸತೀಶ್ ಅವರು ಕೂಡ ಹಾಜರಿದ್ದರು.
15 ಮಾರ್ಚ್ 2022ರಂದು ಮೊದಲ ಬಾರಿಗೆ ಈ ಪುಸ್ತಕವನ್ನು ಕಿಚ್ಚ ಸುದೀಪ್ ಅವರು ಬಿಡುಗಡೆ ಮಾಡಿದ್ದರು. ಆನಂತರ ಈ ಪುಸ್ತಕವು ಅಮೆಜಾನ್, ಸಪ್ನಾ ಸೇರಿದಂತೆ ಹಲವು ಕಡೆ ಟಾಪ್ ಪಟ್ಟಿಯಲ್ಲಿ ದಾಖಲಾಗಿತ್ತು. ಅಲ್ಲಿಂದ ಈವರೆಗೂ ಸತತ ನಾಲ್ಕು ಮುದ್ರಣಗಳನ್ನು ಕಂಡು ಇನ್ನೂ ದಾಖಲೆ ರೀತಿಯಲ್ಲೇ ಮಾರಾಟವಾಗುತ್ತಿದೆ. ಅಲ್ಲದೇ, ಈ ಪುಸ್ತಕದೊಂದಿಗೆ ಪುನೀತ್ ಅವರ ಸಹಿ ಇರುವಂತಹ ಫೋಟೋ ಮತ್ತು ಬುಕ್ ಮಾರ್ಕ್ ಕೂಡ ಉಚಿತವಾಗಿ ಕೊಡಲಾಗುತ್ತಿದೆ.
ಈ ವರ್ಷದಲ್ಲಿ ಕನ್ನಡದಲ್ಲಿ ಬಂದ ಬಯೋಗ್ರಫಿಯಲ್ಲಿ ಹೆಚ್ಚು ಮಾರಾಟಕಂಡ ಪುಸ್ತಕ ಎನ್ನುವ ಹೆಗ್ಗಳಿಕೆ ‘ನೀನೇ ರಾಜಕುಮಾರ್’ ಪುಸ್ತಕದ್ದು. ಪುನೀತ್ ಅವರ ಬಾಲ್ಯದಿಂದ ಅವರ ನಿಧನದವರೆಗೂ ಅವರ ಬದುಕನ್ನು ಲೇಖಕರು ಸೊಗಸಾಗಿ ಕಟ್ಟಿಕೊಟ್ಟಿದ್ದಾರೆ. ಪುನೀತ್ ಅವರ ಸಿನಿಮಾ, ಅವರ ಸಮಾಜಸೇವೆ, ಅವರ ಜೀವನದಲ್ಲಿ ನಡೆದ ಘಟನೆಗಳು ಮತ್ತು ಪುನೀತ್ ಅವರ ಜೀವನದ ಜೊತೆಗೆ ಕನ್ನಡ ಸಿನಿಮಾ ರಂಗದ ಸಂಕ್ಷಿಪ್ತ ಚರಿತ್ರೆ ಕೂಡ ಈ ಪುಸ್ತಕದಲ್ಲಿದೆ. ಅಲ್ಲದೇ, ಅಪರೂಪದ ಫೋಟೋಗಳನ್ನು ನೋಡಬಹುದಾಗಿದೆ.
ಪುನೀತ್ ಅವರ ಸಾಕಷ್ಟು ಸಂದರ್ಶನಗಳನ್ನು ಮಾಡಿದ್ದ ಪತ್ರಕರ್ತ ಶರಣು ಹುಲ್ಲೂರು, ಪುನೀತ್ ಅವರ ಕುರಿತಾಗಿ ಅನೇಕ ಅಪರೂಪದ ಸಂಗತಿಗಳನ್ನು ಈ ಪುಸ್ತಕದಲ್ಲಿ ಬರೆಯುತ್ತಾ ಹೋಗಿದ್ದಾರೆ. ಖ್ಯಾತ ಪತ್ರಕರ್ತರಾದ ಮುರಳಿಧರ ಖಜಾನೆ ಅವರು ಈ ಪುಸ್ತಕಕ್ಕೆ ಮುನ್ನುಡಿ ಬರೆದಿದ್ದರೆ, ಜೋಗಿ ಅವರು ಹಿನ್ನುಡಿ ಬರೆದಿದ್ದಾರೆ

andolanait

Recent Posts

ಐತಿಹಾಸಿಕ ಸಂಸತ್ ಅಧಿವೇಶನಕ್ಕೆ ದಿನಗಣನೆ!

ಶಾಸನ ಸಭೆಗಳಲ್ಲಿ ಮಹಿಳೆಯರಿಗೆ ಶೇ.೩೩ರಷ್ಟು ಮೀಸಲಾತಿ ಕಲ್ಪಿಸುವ ಕುರಿತು ನಿರ್ಧಾರ  ಏಪ್ರಿಲ್ ೧೬ರಿಂದ ೧೮ರವರೆಗೆ ಮೂರು ದಿನಗಳ ಕಾಲ ಸಂಸತ್ತಿನ…

3 mins ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಕಾಂಗ್ರೆಸ್, ಬಿಜೆಪಿ ಪಾಳೆಯದಲ್ಲಿ ಮಿಶ್ರಭಾವನೆ ಹುಟ್ಟು ಹಾಕಿದ ಉಪಚುನಾವಣೆ

ಅಭ್ಯರ್ಥಿಗಳ ಗೆಲುವಿಗಾಗಿ ಸ್ವತಃ ಫೀಲ್ಡಿಗಿಳಿದಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆ ಆಡಳಿತಾರೂಢ ಕಾಂಗ್ರೆಸ್ ಮತ್ತು…

10 mins ago

ಬಿಸಿಲ ಝಳಕ್ಕೆ ನೀರಿಗಿಳಿಯುವ ಮುನ್ನಇರಲಿ ಎಚ್ಚರ..!

ನವೀನ್ ಡಿಸೋಜ ಕೊಡಗು ಜಿಲ್ಲೆಯಲ್ಲಿ ಇವೆ ಅಪಾಯಕಾರಿ ಸ್ಥಳಗಳು; ಅಗತ್ಯ ಮುನ್ನೆಚ್ಚರಿಕೆ ವಹಿಸಲು ಸಲಹೆ ಮಡಿಕೇರಿ:ಬೇಸಿಗೆಯಲ್ಲಿ ಬಿಸಿಲ ಝಳಕ್ಕೆ ನೀರಿಗಿಳಿದು…

3 hours ago

ಹಾಲಿ-ಮಾಜಿ ಶಾಸಕರಿಗೆ ಕ್ಷೇತ್ರ ಪುನರ್‌ವಿಂಗಡಣೆ ಗುಮ್ಮ!

ಕೆ.ಬಿ.ರಮೇಶನಾಯಕ ಶೇ.೩೩ ಮಹಿಳಾ ಮೀಸಲು ಜಾರಿಯಾದರೆ ಐದು ಸ್ಥಾನ ಮೀಸಲು  ಚಾಮುಂಡೇಶ್ವರಿ, ಕೃಷ್ಣರಾಜ, ನರಸಿಂಹರಾಜ ಕ್ಷೇತ್ರದ ಕೆಲ ಭಾಗಗಳನ್ನು ಬೇರ್ಪಡಿಸಿ…

3 hours ago

150 ವರ್ಷಕ್ಕೆ ಸಾಕ್ಷಿಯಾದ ಸರ್ಕಾರಿ ಶಾಲೆ!

ಹೇಮಂತ್‌ಕುಮಾರ್ ಮಂಡ್ಯ: ಜಿಲ್ಲೆಯ ಮೇಲುಕೋಟೆ ಪ್ರಖ್ಯಾತ ಧಾರ್ಮಿಕ ಮತ್ತು ಐತಿಹಾಸಿಕ ಕ್ಷೇತ್ರವಾಗಿದ್ದು, ಹತ್ತಾರು ಶತಮಾನಗಳ ವಿಶೇಷತೆಗಳನ್ನು ಒಳಗೊಂಡಿದೆ. ಈ ಪಟ್ಟಿಯಲ್ಲಿ…

3 hours ago

ಸರಸ್ವತಿಪುರಂ ಕಲ್ಯಾಣಿಗೆ ಪುನಶ್ಚೇತನ

ಎಚ್.ಎಸ್.ದಿನೇಶ್‌ಕುಮಾರ್ ಮೈಸೂರು: ಮೈಸೂರು ಸಂಸ್ಥಾನದ ಕೊನೆಯ ಅರಸ, ದೇಶ ಸ್ವತಂತ್ರಗೊಂಡ ನಂತರ ರಾಜ ಪ್ರಮುಖರಾಗಿ ಸೇವೆ ಸಲ್ಲಿಸಿದ್ದ ಜಯಚಾಮರಾಜ ಒಡೆಯರ್…

3 hours ago