ನಟ ಡಾಲಿ ಧನಂಜಯ್ ನಿರ್ಮಾಣದ ಹೊಸ ಚಿತ್ರದಲ್ಲಿ ನೆನಪಿರಲಿ ಪ್ರೇಮ್ ಮಗಳು ಅಮೃತಾ ಮುಖ್ಯಪಾತ್ರ ನಿರ್ವಹಿಸಲಿದ್ದಾರೆ. ಆ ಮೂಲಕ ಅಮೃತಾ ಬೆಳ್ಳಿತೆರೆಗೆ ದೊಡ್ಡ ಪ್ರೊಡಕ್ಷನ್ ಹೌಸ್ ಮೂಲಕ ಎಂಟ್ರಿ ತೆಗೆದುಕೊಳ್ಳುತ್ತಿದ್ದಾರೆ.
ಚಿತ್ರದ ಮುಹೂರ್ತ ಈಗಾಗಲೇ ನಡೆದಿದ್ದು, ಇದರ ಬಗ್ಗೆ ಪ್ರೇಮ್ ಮಾತನಾಡಿದ್ದು, ಮೊದಲು ನಟನೆಗೆ ನೊ ಎನ್ನುತ್ತಿದ್ದ ಮಗಳು ಅಮೃತ ಒಮ್ಮೆಗೆ ಯಸ್ ಎಂದಳು. ಹೀಗಾಗಿ ಕತೆ ಓದಿ ಇಬ್ಬರಿಗೂ ಇಷ್ಟವಾಯ್ತು. ಡಾಲಿ ಚಿತ್ರ ನಿರ್ಮಿಸುತ್ತಿದ್ದಾನೆ ಎಂದು ಗೊತ್ತಾಗಿ ತುಂಬಾ ಖುಷಿ ಆಯ್ತು. ಇಲ್ಲಿಯವರೆಗೆ ನಮಗೆ ನೀಡಿದಂತೆ ನನ್ನ ಮಗಳಿಗೂ ಪ್ರೋತ್ಸಾಹ ನೀಡಿ ಎಂದು ಕೋರಿಕೊಂಡಿದ್ದಾರೆ.
ಟಗರು ಪಲ್ಯ
ಅಮೃತಾ ಅಭಿನಯಿಸಲಿರುವ ಮೊದಲ ಚಿತ್ರದ ಹೆಸರು ‘ಟಗರು ಪಲ್ಯ’. ಚಿತ್ರವನ್ನು ಉಮೇಶ್ ಕೆ. ಕೃಪ ನಿರ್ದೇಶನ ಮಾಡುತ್ತಿದ್ದಾರೆ. ಸೆಟ್ ಬಾಯ್ ಆಗಿ ಕೆಲಸ ಆರಂಭಿಸಿ, ನಿರ್ದೇಶನ ವಿಭಾಗದಲ್ಲಿ ಕೆಲಸ ಮಾಡಿ ಈಗ ನಿರ್ದೇಶಕರಾಗಿ ಭಡ್ತಿ ಪಡೆದಿರುವುದು ಅವರ ವಿಶೇಷತೆ.
ನಾಗಭೂಷಣ್ ನಾಯಕ
‘ಇಕ್ಕಟ್’ ಖ್ಯಾತಿಯ ನಾಗಭೂಷಣ್ ಚಿತ್ರದಲ್ಲಿ ನಾಯಕರಾಗಿ ನಟಿಸಲಿದ್ದಾರೆ. ಅವರ ಊರಿನ ಹೆಸರು ಟಗರುಪುರ ಆಗಿರುವುದಕ್ಕೂ ಚಿತ್ರದ ಹೆಸರಿಗೂ ಸಂಬಂಧವಿಲ್ಲ. ಇದು ಮಂಡ್ಯದ ಹಳ್ಳಿಯಲ್ಲಿ ನಡೆಯುವ ಆಚರಣೆ ಸುತ್ತ ನಡೆಯುವ ಕಥೆ ಇದಾಗಿದೆ.
ವಾಸುಕಿ ವೈಭವ್ ಸಂಗೀತ ಸಂಯೋಜನೆ, ಎಸ್.ಕೆ. ರಾವ್ ಛಾಯಾಗ್ರಹಣ, ವಿನೋದ್ ಮಾಸ್ಟರ್ ಸಾಹಸ ಸಂಯೋಜನೆ ಚಿತ್ರಕ್ಕಿದೆ. ತಾರಾ, ಶರತ್ ಲೋಹಿತಾಶ್ವ, ರಂಗಾಯಣ ರಘು ತಾರಾ ಬಳಗದಲ್ಲಿದ್ದಾರೆ.
ಮೈಸೂರು : ಮೇಲ್ವರ್ಗದ ಯುವತಿಯೊಬ್ಬಳು ದಲಿತ ಯುವಕನನ್ನು ಪ್ರೀತಿಸಿ ಮದುವೆಯಾದ ಕಾರಣಕ್ಕೆ ಸ್ವಂತ ಮಗಳನ್ನೆ ಹೆತ್ತ ಅಪ್ಪ-ಅಮ್ಮ-ಅಣ್ಣಂದಿರು ಕೊಲೆ ಮಾಡುವ…
ಚಾಮರಾಜನಗರ : ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರು ಮನುಸ್ಮೃತಿಯನ್ನು ಸುಟ್ಟ ಹಾಕಿದ ದಿನದ ಅಂಗವಾಗಿ ವಿವಿಧ ಸಂಘಟನೆಗಳ ಮುಖಂಡರು…
ಹೊಸದಿಲ್ಲಿ : ಕೇಂದ್ರ ಸಚಿವರಾದ ಅಶ್ವಿನ್ ವೈಷ್ಣವ್ ಮತ್ತು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರ ನಡುವೆ ಕರ್ನಾಟಕದಲ್ಲಿ ಉದ್ಯೋಗ…
ಬೆಂಗಳೂರು : ಚಿತ್ರದುರ್ಗದ ಹಿರಿಯೂರು ಬಳಿ ಇಂದು ಬೆಳಗಿನ ಜಾವ ಸಂಭವಿಸಿದ ರಸ್ತೆ ಅಪಘಾತದ ಮಾರ್ಗದಲ್ಲಿ ಶಾಲಾ ಮಕ್ಕಳು ಪ್ರಯಾಣಿಸುತ್ತಿದ್ದ…
ಬೆಂಗಳೂರು: ನಾನು ಪಕ್ಷದ ಅಧ್ಯಕ್ಷನಾಗಿ ಬಾವುಟ ಕಟ್ಟಿದ್ದೇನೆ, ಕಸ ಗುಡಿಸಿದ್ದೇನೆ. ಪಕ್ಷಕ್ಕಾಗಿ ಎಲ್ಲವನ್ನೂ ಮಾಡಿದ್ದೇನೆ. ನಾನು ಸ್ಟೇಜ್ ಮೇಲೆ ಕೂತು…
ಬೆಂಗಳೂರು: ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಭಾಗಿಯಾಗಲು ಸಿಎಂ ಸಿದ್ದರಾಮಯ್ಯ ಅವರು ನಾಳೆ ದೆಹಲಿಗೆ ತೆರಳಲಿದ್ದಾರೆ. ಡಿಸೆಂಬರ್.27ರಂದು ದೆಹಲಿಯ ಇಂದಿರಾ…