ವರ್ಷಗಳ ನಂತರ ತಾರೆ ರಮ್ಯಾ ಮತ್ತೆ ಬಣ್ಣಹಚ್ಚುತ್ತಿದ್ದಾರೆ. ನಿರ್ಮಾಪಕಿಯಾಗಿದ್ದಾರೆ. ತಮ್ಮ ನಿರ್ಮಾಣದ ‘ಸ್ವಾತಿ ಮುತ್ತಿನ ಮಳೆಹನಿಯೇ’ ಚಿತ್ರದ ಚಿತ್ರೀಕರಣ ಮುಗಿಸಿದ್ದಾರೆ. ಅವರ ಆಪಲ್ ಬಾಕ್ಸ್ ಸ್ಟುಡಿಯೋಸ್‌ಗಾಗಿ ಚಿತ್ರಕ್ಕಾಗಿ ರಾಜ್ ಬಿ ಶೆಟ್ಟಿ ನಿರ್ದೇಶಿಸಿ ನಟಿಸಿದ ಈ ಚಿತ್ರದಲ್ಲಿ ಸಿರಿ ರವಿಕುಮಾರ್ ಅವರಿಗೆ ನಟಿಸುವ ಅವಕಾಶ. ‘ಉತ್ತರಕಾಂಡ’ ಚಿತ್ರದ ಮೂಲಕ ಅಭಿನಯಕ್ಕೆ ರಮ್ಯಾ ಮರಳುತ್ತಿದ್ದಾರೆ. ಈ ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ನಡೆಯಿತು.
ಹೊಸ ಸಹಸ್ರಮಾನದ ಆರಂಭದಲ್ಲಿ ಬಂದು ಜನಪ್ರಿಯರಾದ ಮೂವರು ತಾರೆಯರು ರಮ್ಯಾ, ರಕ್ಷಿತಾ, ರಾಧಿಕಾ (ಆರ್‌ಆರ್‌ಆರ್). ಇವರಲ್ಲಿ ರಕ್ಷಿತಾ ಮತ್ತು ರಾಧಿಕಾ ಆಗಲೇ ಚಿತ್ರಗಳನ್ನು ನಿರ್ಮಿಸಿದರೆ, ರವ್ಯಾ ಈಗ ನಿರ್ಮಾಪಕಿಯಾಗುತ್ತಿದ್ದಾರೆ. ತಮ್ಮ ನಿರ್ಮಾಣ ಸಂಸ್ಥೆಗೆ ಕೆಆರ್‌ಜಿ ಸಂಸ್ಥೆಯ ಕಾರ್ತಿಕ್ ಮತ್ತು ಯೋಗಿ ಜಿ ರಾಜ್ ಅವರ ಸಹಕಾರ ಇರುವುದಾಗಿ ಹೇಳಿದ್ದರು. ಇದೀಗ ಕೆಆರ್‌ಜಿ ಸಂಸ್ಥೆ ನಿರ್ಮಿಸುತ್ತಿರುವ ಚಿತ್ರದಲ್ಲಿ ಅವರು ನಟಿಸುವ ಸುದ್ದಿ. ರೋಹಿತ್‌ಪದಕಿ ಚಿತ್ರದ ನಿರ್ದೇಶಕರು. ರವ್ಯಾ, ಧನಂಜಯ್ ಮುಖ್ಯಭೂಮಿಕೆಯ ಚಿತ್ರ.
‘ರತ್ನನ್ ಪ್ರಪಂಚ’ ಚಿತ್ರದಲ್ಲಿ ನಟಿಸಲು ಆಹ್ವಾನವಿದ್ದರೂ ಬರಲಾಗಲಿಲ್ಲ. ನನಗೆ ಅತ್ಯಂತ ಆಪ್ತವಾದ ಸಿನೆಮಾ ಅದು. ಅಂತಹ ಒಳ್ಳೆಯ ಸಿನೆಮಾ ತಂಡದ ಜೊತೆ ಕೈ ಜೋಡಿಸಿ ಬೆಳ್ಳಿಪರದೆಗೆ ಹಿಂತಿರುಗುತ್ತಿರುವುದು ಸಂತೋಷ ತಂದಿದೆ. ಇತ್ತೀಚಿನ ದಿನಗಳಲ್ಲಿ ಈ ತಂಡದ ಜೊತೆಗಿನ ಒಡನಾಟ ಮತ್ತು ತಂಡದವರೆಲ್ಲರೂ ನನ್ನ ಮೇಲೆ ತೋರುತ್ತಿರುವ ಅಭಿಮಾನ ಹಾಗೂ ಬಾಂಧವ್ಯ ಒಂದು ಒಳ್ಳೇ ಜಾಗದಲ್ಲಿದ್ದೀನಿ ಅನ್ನೋ ಭಾವನೆ ಕೊಟ್ಟಿದೆ. ಇಂತಹ ದೈತ್ಯ ಪ್ರತಿಭೆಗಳ ಜೊತೆ ಶೂಟಿಂಗ್ ಶುರು ಮಾಡೋದಕ್ಕೆ ಕಾಯುತ್ತಾ ಇದ್ದೀನಿ? ಎಂದು ಈ ಚಿತ್ರದಲ್ಲಿ ನಟಿಸುವ ಕುರಿತಂತೆ ಹೇಳಿದ್ದಾರೆ ರಮ್ಯಾ.
ನಿರ್ದೇಶಕ ರೋಹಿತ್ ಪದಕಿ ಅವರ ಪ್ರಕಾರ, ‘ಈ ಚಿತ್ರ ಮನುಷ್ಯನ ವಿಲಕ್ಷಣ ಮನಸ್ಸಿನ ಹೋರಾಟದ ಪ್ರತಿಬಿಂಬ. ಸರಿ ತಪ್ಪುಗಳ ಸಿದ್ಧಾಂತ, ಅಹಂಕಾರಗಳ ಗುದ್ದಾಟ. ಉತ್ತರ ಕರ್ನಾಟಕದ ಬದುಕಿನಲ್ಲಿ ನಡೆಯುವ ಕಥೆ ಹೇಳುತ್ತಿರುವುದು ನನಗೆ ದೊಡ್ಡ ಸವಾಲು ಮತ್ತು ಜವಾಬ್ದಾರಿ’. ‘ಈ ಚಿತ್ರ ನಮ್ಮ ಸಂಸ್ಥೆಗೆ ಒಂದು ಸಂಭ್ರಮ’ ಎನ್ನುತ್ತಾರೆ ನಿರ್ಮಾಪಕರಾದ ಕಾರ್ತಿಕ್ ಮತ್ತು ಯೋಗಿ. ರಮ್ಯಾ ಅವರು, ಈ ನಡುವೆ ‘ಹಾಸ್ಟೆಲ್ ಹುಡುಗರು’ ಚಿತ್ರದ ಪ್ರೊಮೋದಲ್ಲಿ ಪಾಲ್ಗೊಂಡಿದ್ದಾರೆ.
ನಂಜನಗೂಡು: ತಾಲ್ಲೂಕಿನ ಅಳಗಂಚಿ ಗ್ರಾಮದಲ್ಲಿ ಕಳೆದ ಕೆಲ ದಿನಗಳಿಂದ ಉಪಟಳ ನೀಡುತ್ತಿದ್ದ ಚಿರತೆಯೊಂದು ಸೆರೆಯಾಗಿದ್ದು, ಗ್ರಾಮಸ್ಥರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.…
ಮೈಸೂರು: ಜಿಲ್ಲೆಯಲ್ಲಿ ಹುಲಿ ದಾಳಿ ಪ್ರಕರಣಗಳು ಮುಂದುವರಿದಿದ್ದು, ಗ್ರಾಮಸ್ಥರಲ್ಲಿ ಭಾರೀ ಆತಂಕ ಮೂಡಿಸಿದೆ. ಹುಣಸೂರು ತಾಲ್ಲೂಕಿನ ಗುರುಪುರ ಕೆರೆ ಬಳಿ…
ಕರ್ನಾಟಕ ರಾಜ್ಯದಲ್ಲಿ ಕೇಂದ್ರ ಸರ್ಕಾರದಿಂದ ಆರಂಭಿಸಲ್ಪಟ್ಟಿದ್ದ ಜನ ಔಷಧ ಕೇಂದ್ರಗಳು ಹಲವು ವರ್ಷಗಳಿಂದ ರಾಜ್ಯದೆಲ್ಲೆಡೆ ಕಾರ್ಯನಿರ್ವಹಿಸುತ್ತಿವೆ. ಕಡು ಬಡಜನರಿಗೆ ಹಾಗೂ…
ಡಿ. 25ರ ಗುರುವಾರ ಮೈಸೂರು ಅರಮನೆ ಬಳಿ ಹೀಲಿಯಂ ಗ್ಯಾಸ್ ಸಿಲಿಂಡರ್ ಸ್ಛೋಟ ಸಂಭವಿಸಿದ್ದು, ಸಾರ್ವಜನಿಕ ಸುರಕ್ಷತೆಗೆ ಗಂಭೀರ ಅಪಾಯ…
‘ಸರಿಯಾಗಿ ಕೆಲಸ ಮಾಡದಿದ್ದರೆ ಜನರಿಂದ ಚಪ್ಪಲಿಯಲ್ಲಿ ಹೊಡೆಸುತ್ತೇನೆ. ನಾಚಿಕೆ ಆಗಲ್ವ ನಿಮಗೆ.. ಜನರನ್ನು ಯಾಕೆ ಹೀಗೆ ಸಾಯಿಸುತ್ತೀರಿ. ಯುವ ಅಧಿಕಾರಿಗಳಾದ…
ಮಹಿಳೆಯರು, ಮಕ್ಕಳ ಸಬಲೀಕರಣವೇ ಸಂಸ್ಥೆಯ ಧ್ಯೇಯ ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೇ ಸೇವೆ ಮಾಡುವ ಸಂಸ್ಥೆಗಳು ವಿರಳ. ಅಂತಹ ವಿರಳಾತೀತ ವಿರಳ…