ಆಂದೋಲನ ಪುರವಣಿ

ನಟಿ ರಮ್ಯಾ ನಿರ್ಮಾಣದ ‘ಸ್ವಾತಿ ಮುತ್ತಿನ ಮಳೆಹನಿಗೆ’ ಮತ್ತೆ ಸಂಕಷ್ಟ : ಶೀರ್ಷಿಕೆ ಬಳಸದಂತೆ ಕೋರ್ಟ್ ತಡೆಯಾಜ್ಞೆ

ಬೆಂಗಳೂರು : ಕನ್ನಡ ಚಿತ್ರರಂಗದ ಖ್ಯಾತ ನಟಿ ರಮ್ಯ ಅವರ   ನಿರ್ಮಾಣದಲ್ಲಿ ಮೂಡಿ ಬರುತ್ತಿರುವ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಚಿತ್ರಕ್ಕೆ ಸಂಕಷ್ಟ ಎದುರಾಗಿದೆ. ನಟ, ನಿರ್ದೇಶಕ ರಾಜ್ ಬಿ. ಶೆಟ್ಟಿ ಅವರ ಲೈಟರ್ ಬುದ್ಧ ಫಿಲ್ಮ್ಸ್ ಸಹಯೋಗದಲ್ಲಿ ರಮ್ಯಾ ಅವರ ನಿರ್ಮಾಣ ಸಂಸ್ಥೆ ಆ್ಯಪಲ್ ಬಾಕ್ಸ್ ಸ್ಟುಡಿಯೋದಲ್ಲಿ ಸಿದ್ಧವಾಗುತ್ತಿರುವ ಚಿತ್ರದ ಶೀರ್ಷಿಕೆಗೆ ನಗರದ ಪ್ರಧಾನ ಹೆಚ್ಚುವರಿ ಸಿವಿಲ್ ನ್ಯಾಯಾಲಯ ತಡೆಯಾಜ್ಞೆ ನೀಡಿದೆ.ಈ ಕುರಿತು ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಅವರು ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿರುವ 18ನೇ ಹೆಚ್ಚುವರಿ ನಗರ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶ ಪದ್ಮ ಪ್ರಸಾದ್ ಅವರು ಶೀರ್ಷಿಕೆ ಬಳಸದಂತೆ ತಡೆಯಾಜ್ಞೆ ನೀಡಿ ಆದೇಶಿಸಿದ್ದಾರೆ. ಪ್ರಕರಣದ ವಿಚಾರಣೆಯಲ್ಲಿ ರಾಜೇಂದ್ರಸಿಂಗ್ ಬಾಬು ಅವರ ಪರ ವಕೀಲರು, ನಮ್ಮ ಅರ್ಜಿದಾರರರು ಮಂಡಳಿಯಲ್ಲಿ ಈಗಾಗಲೇ ತಾವು ನಿರ್ಮಾಣ ಮಾಡುತ್ತಿರುವ ಕನ್ನಡ ಚಲನಚಿತ್ರ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಎಂಬ ಶೀರ್ಷಿಕೆ ನೋಂದಣಿ ಮಾಡಿದ್ದಾರೆ.

ಸ್ವಾತಿ ಮುತ್ತಿನ ಮಳೆ ಹನಿಯೇ’ ಪೋಸ್ಟರ್​ಈ ಚಲನಚಿತ್ರದ ತಾರಾಗಣದಲ್ಲಿ ಅಂಬರೀಶ್, ಸುಹಾಸಿನಿ ಮತ್ತು ಇತರ ಕಲಾವಿದರು ನಟಿಸಿದ್ದರು. ಶೇ 80ರಷ್ಟು ಚಿತ್ರೀಕರಣವಾಗಿದೆ. ಅಂಬರೀಶ್ ನಿಧನದಿಂದ ಚಿತ್ರೀಕರಣವು ಸ್ಥಗಿತವಾಗಿತ್ತು.

ಈ ಚಲನಚಿತ್ರದ ತಾರಾಗಣದಲ್ಲಿ ಅಂಬರೀಶ್, ಸುಹಾಸಿನಿ ಮತ್ತು ಇತರ ಕಲಾವಿದರು ನಟಿಸಿದ್ದರು. ಶೇ 80ರಷ್ಟು ಚಿತ್ರೀಕರಣವಾಗಿದೆ. ಅಂಬರೀಶ್ ನಿಧನದಿಂದ ಚಿತ್ರೀಕರಣವು ಸ್ಥಗಿತವಾಗಿತ್ತು. ಈ ಶೀರ್ಷಿಕೆಯು ರಾಜೇಂದ್ರಸಿಂಗ್ ಬಾಬು ಅವರೇ ನಿರ್ದೇಶಿಸಿರುವ ಬಣ್ಣದ ಗೆಜ್ಜೆ ಚಿತ್ರದ ಹಾಡಿನದ್ದಾಗಿದೆ. ಹಾಗಾಗಿ ಶೀರ್ಷಿಕೆ ಬಳಸಲು ಬೇರೆ ಯಾರಿಗೂ ಯಾವುದೇ ರೀತಿಯ ಹಕ್ಕು ಇರುವುದಿಲ್ಲ.
ಅಲ್ಲದೇ, ಒಂದು ವೇಳೆ ಬಳಕೆ ಮಾಡಿದಲ್ಲಿ ಶೀರ್ಷಿಕೆಯ ಕೃತಿ ಚೌರ್ಯವಾಗುತ್ತದೆ. ಈ ಶೀರ್ಷಿಕೆಯ ಹೆಸರನ್ನು ಬಳಸದಂತೆ ನಿರ್ದೇಶನ ನೀಡಬೇಕು ಎಂದು ಕೋರಿದ್ದರು. ಮನವಿ ಪರಿಗಣಿಸಿದ ನ್ಯಾಯಾಲಯ ಸ್ವಾತಿ ಮುತ್ತಿನ ಮಳೆ ಹನಿಯೇ ಚಿತ್ರದ ಶೀರ್ಷಿಕೆ ಬಳಸದಂತೆ ಪ್ರತಿವಾದಿಗಳಿಗೆ ನಿರ್ದೇಶಿಸಿ ಆದೇಶಿಸಿದ್ದಾರೆ. ಅಲ್ಲದೇ, ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿ ಕೋರ್ಟ್‌ ವಿಚಾರಣೆ ಮುಂದೂಡಿದೆ.

andolanait

Recent Posts

3,705 ಕೋಟಿ ರೂ. ಪರಿಹಾರ ಕೋರಿ ಕೇಂದ್ರಕ್ಕೆ ಮೆಮೊರಾಂಡಂ ಸಲ್ಲಿಸಿದ ರಾಜ್ಯ ಸರ್ಕಾರ

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…

7 hours ago

ಹನೂರು | ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಕಾರ್ಮಿಕ ಸಾವು

ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…

8 hours ago

ಗ್ರಾಮದ ಸ್ವಚ್ಛತೆ ನೋಡಿಕೊಳ್ಳುವವರೇ ಅನೈರ್ಮಲ್ಯಕ್ಕೆ ಕಾರಣ?

ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…

9 hours ago

ಮಹಾಪ್ರವಾಹಕ್ಕೆ ನೇಪಾಳ ತತ್ತರ: ನಾಪತ್ತೆಯಾದವರ ಸಂಖ್ಯೆ 6100ಕ್ಕೆ ಏರಿಕೆ

ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…

15 hours ago

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

21 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

22 hours ago