ಆಂದೋಲನ ಪುರವಣಿ

ವಾರಾಂತ್ಯ ವಿಶೇಷ : ನಾಳೆ ‘ಸಲೀಂ ಅಲಿ-ಪಕ್ಷಿಲೋಕದ ಬೆರಗು’ ನಾಟಕ

ಮೈಸೂರಿನ ‘ಅರಿವು ರಂಗ’ ವತಿಯಿಂದ ‘ಸಲೀಂ ಅಲಿ-ಪಕ್ಷಿಲೋಕದ ಬೆರಗು’ ನಾಟಕ ಪ್ರದರ್ಶನವನ್ನು ಡಿ.4ರಂದು ಸಂಜೆ 6.30ಕ್ಕೆ ನಗರದ ಕಲಾಮಂದಿರ ಆವರಣದಲ್ಲಿರುವ ಕಿರು ರಂಗಮಂದಿರದಲ್ಲಿ ಏರ್ಪಡಿಸಲಾಗಿದೆ.
ಭಾರತದ ಹೆಸರಾಂತ ಪಕ್ಷಿತಜ್ಞ, ಪದ್ಮಭೂಷಣ ಡಾ.ಸಲೀಂ ಅಲಿ ಅವರ ಜೀವನಾಧಾರಿತ ನಾಟಕ ಇದಾಗಿದ್ದು, ಡಾ.ಎಂ.ಸಿ.ಮನೋಹರ ನಾಟಕ ರಚಿಸಿದ್ದಾರೆ. ಬರ್ಟಿ ಒಲಿವೇರಾ ನಿರ್ದೇಶನದ ಈ ನಾಟಕಕ್ಕೆ ಸಾಯಿಶಿವ್ ಸಂಗೀತ, ಯತೀಶ್ ಎನ್.ಕೊಳ್ಳೇಗಾಲ ರಂಗವಿನ್ಯಾಸ-ಬೆಳಕು, ಕಾಜು ರಂಗ ಪರಿಕರ, ರಜನಿ ವಸ್ತ್ರ ವಿನ್ಯಾಸ, ಎಂ.ಸಿ.ಗಿರಿಧರ ಸಂಗೀತ ನಿರ್ವಹಣೆ, ರಂಗನಾಥ್ ಪ್ರಸಾದನ ಮಾಡಿದ್ದಾರೆ. ಎಚ್.ತೇಜಸ್, ಡಾ.ಎಂ.ಸಿ.ಮನೋಹರ, ಡಾ.ಆರ್.ಚಲಪತಿ, ಬರ್ಟಿ ಒಲಿವೆರಾ, ಸರಳಾ ನಟರಾಜ್, ಬಿ.ಸೀಮಂತಿನಿ, ನಾಗರಾಜ್ ಮೈಸೂರು, ಪ್ರಸಾದ್ ಬಾಬು ನಟಿಸಿದ್ದಾರೆ.
ಸಲೀಂ ಅಲಿ ಅವರ ಕುರಿತು ಭಾರತದಲ್ಲಿ ಇದೇ ಮೊದಲ ಬಾರಿಗೆ, ಅದರಲ್ಲೂ ಕನ್ನಡದಲ್ಲಿ ಪೂರ್ಣ ಪ್ರಮಾಣದ ನಾಟಕ ಪ್ರದರ್ಶಿತವಾಗುತ್ತಿರುವುದು ವಿಶೇಷ.

ನಾಟಕ ಸಾರಾಂಶ: ಸಲೀಂ ಅಲಿ ಚಿಕ್ಕವರಿದ್ದಾಗ ಅವರ ಚಿಕ್ಕಪ್ಪ ಏರ್‌ಗನ್‌ವೊಂದನ್ನು ಕೊಡುಗೆಯಾಗಿ ನೀಡುತ್ತಾರೆ. ಆ ಗನ್‌ನಿಂದ ಹಕ್ಕಿಯೊಂದನ್ನು ಹೊಡೆದು ಉರುಳಿಸುವ ಸಲೀಂ ಅಲಿ, ಆ ಹಕ್ಕಿ ಯಾವುದೆಂದು ತಿಳಿಯುವ ಕುತೂಹಲದಿಂದ ಬಾಂಬೆಯ ‘ನ್ಯಾಚುರಲ್ ಹಿಸ್ಟರಿ ಸೊಸೈಟಿ’ಗೆ ಭೇಟಿ ಕೊಡುತ್ತಾರೆ. ಆ ವೇಳೆ ಸೊಸೈಟಿ ಗೌರವ ಕಾರ್ಯದರ್ಶಿಯಾಗಿದ್ದ ಡಬ್ಲ್ಯೂ.ಎಸ್.ಮಿಲ್ಲಾರ್ಡನ್ ಅವರು, ಬಾಲಕ ಸಲೀಂ ಅಲಿಗೆ ಭಾರತೀಯ ಪಕ್ಷಿ ವೈವಿಧ್ಯತೆಯನ್ನು ಪರಿಚಯಿಸುತ್ತಾರೆ. ಈ ಒಂದೇ ಘಟನೆ ಅವರನ್ನು ಜೀವಮಾನವಿಡೀ ಪಕ್ಷಿಲೋಕದತ್ತ ಕರೆದೊಯ್ದುಬಿಡುತ್ತದೆ.
ನಂತರ ಅಧ್ಯಯನ, ಸಂಶೋಧನೆ, ಕ್ಷೇತ್ರ ಪ್ರವಾಸ, ಲೇಖನ-ಪುಸ್ತಕ ಬರಹ ಇನ್ನಿತರ ಚಟುವಟಿಕೆಗಳ ಮೂಲಕ ಭಾರತದಲ್ಲಿ ಪಕ್ಷಿಲೋಕದ ಅಧ್ಯಯನವನ್ನು ಜನಪ್ರಿಯಗೊಳಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತಾರೆ. ಈ ನಡುವೆ ಗೆಳೆತನ, ನಿರುದ್ಯೋಗ, ವೃತ್ತಿ, ಕುಟುಂಬ ಸೇರಿದಂತೆ ಜೀವನದಲ್ಲಿ ಹಲವಾರು ಸಿಹಿ-ಕಹಿ ಘಟನೆಗಳನ್ನು ಅವರು ಎದುರಿಸಬೇಕಾಗುತ್ತದೆ. ಒಟ್ಟಾರೆ ಈ ನಾಟಕದಲ್ಲಿ ಸಲೀಂ ಅಲಿ ಅವರ ಬಾಲ್ಯ, ಯೌವ್ವನ, ಅಂತಿಮ ದಿನಗಳು ಸೇರಿದಂತೆ ಅವರ ಜೀವನ ಮತ್ತು ಸಾಧನೆಗಳ ಮೇಲೆ ಬೆಳಕು ಚೆಲ್ಲುವ ಪ್ರಯತ್ನ ಮಾಡಲಾಗಿದೆ. ವಿವರಗಳಿಗೆ ಮೊ.ಸಂ. 9880643458 ಸಂಪರ್ಕಿಸಬಹುದು.

andolanait

Recent Posts

ಸಿಇಸಿ ಜ್ಞಾನೇಶ್​ ಕುಮಾರ್​ರನ್ನು ಹುದ್ದೆಯಿಂದ ಕೆಳಗಿಳಿಸುವ ನಿರ್ಣಯ; ಕೇರಳಂ ವಿಧಾನಸಭೆಯಲ್ಲಿ ಪಾಸ್​​

ಕೇರಳಂ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ಕೆಳಗಿಳಿಸುವಂತೆ ಆಗ್ರಹಿಸಿ ಕೇರಳಂ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಗಿದೆ. ಎಸ್‌ಐಆರ್‌…

14 hours ago

ಧನಂಜಯ ಆನೆಯ ಹೆಗಲಿಗೆ ಶ್ರೀರಂಗಪಟ್ಟಣ ದಸರಾ ಜವಾಬ್ದಾರಿ

ಶ್ರೀರಂಗಪಟ್ಟಣ: ಇಲ್ಲಿ ನಡೆಯುವ ದಸರಾ ಮಹೋತ್ಸವದಲ್ಲಿ ಭಾಗವಹಿಸುವ ಆನೆಗಳನ್ನು ಆಯ್ಕೆ ಮಾಡಲಾಗಿದೆ. ಧನಂಜಯ, ಲಕ್ಷ್ಮಿ ಹಾಗೂ ರೂಪ ಆನೆಗಳು ಈ…

16 hours ago

ದಸರಾ ಗಜಪಡೆಗೆ 3ನೇ ಹಂತದ ಕುಶಾಲತೋಪು ಸಿಡಿಸುವ ತಾಲೀಮು ಯಶಸ್ವಿ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ 2026ರ ಸಿದ್ಧತೆಗಳು ಬಿರುಸುಗೊಂಡಿವೆ. ದಸರಾ ಗಜಪಡೆ ಹಾಗೂ ಅಶ್ವಪಡೆಗೆ ನಡೆದ ಮೂರನೇ ಹಂತದ ಕುಶಾಲತೋಪು…

16 hours ago

ಸತ್ಯಕ್ಕೆ ಅಂತಿಮ ಗೆಲುವಾಗಲಿದೆ: ರಾಹುಲ್‌ ಗಾಂಧಿ

ನವದೆಹಲಿ: ಸತ್ಯಕ್ಕೆ ಅಂತಿಮ ಗೆಲುವಾಗಲಿದೆ. ಈ ಹೋರಾಟದಿಂದ ಯಾವುದೇ ಕಾರಣಕ್ಕೂ ಹಿಂಜರಿಯುವುದಿಲ್ಲ” ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್…

16 hours ago

ತಾಯಿ ಜೊತೆ ಸುತ್ತೂರು ಮಠಕ್ಕೆ ಭೇಟಿ ನೀಡಿದ ನಟ ಪ್ರಭುದೇವ್

ಮೈಸೂರು: ಬಹುಭಾಷಾ ನಟ ಪ್ರಭುದೇವ್‌ ಅವರು ತಮ್ಮ ತಾಯಿಯೊಂದಿಗೆ ಸುತ್ತೂರು ಮಠಕ್ಕೆ ಭೇಟಿ ನೀಡಿ ಶ್ರೀಗಳ ದರ್ಶನ ಪಡೆದರು. ನಾಳೆ…

16 hours ago

ಹೆಣ ಹಾಕಬೇಕಿದ್ದು ತೋಪಿನಲ್ಲಿ; ಬಿಸಾಕಿದ್ದು…?

ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ಮಾಗಡಿ ರಸ್ತೆಯಲ್ಲಿತ್ತು ದೊಡ್ಡ ಮೋರಿ, ಮರಗಳ ತೋಪು, ಸುತ್ತಲೂ ಕತ್ತಲಿನಿಂದ ಕೂಡಿದ್ದ ನಿರ್ಜನ ಪ್ರದೇಶ…

20 hours ago