ಆಂದೋಲನ ಪುರವಣಿ

‘ಅನ್‌ಲಾಕ್ ರಾಘವ’ ಚಿತ್ರದ ಶೀರ್ಷಿಕೆ, ಮೊದಲ ನೋಟ ಬಿಡುಗಡೆ

ನನಗೆ ಬಹಳ ದೊಡ್ಡ ಕನಸಿದೆ, ನಮ್ಮ ಸಂಸ್ಥೆಯ ಮೂಲಕ ತುಂಬಾ ಚಿತ್ರಗಳು ತಯಾರಾಗಬೇಕು, ಒಂದಷ್ಟು ಮಂದಿ ನಿರ್ದೇಶಕರು, ಛಾಯಾಗ್ರಾಹಕರು, ತಂತ್ರಜ್ಞರು, ಕಲಾವಿದರು ನಿರಂತರ ಕೆಲಸ ಮಾಡುತ್ತಿರಬೇಕು. ವಿಭಿನ್ನ ರೀತಿಯ ಚಿತ್ರಗಳನ್ನು ನೀಡಬೇಕು ಎನ್ನುವ ನಿರ್ದೇಶಕ ಸತ್ಯಪ್ರಕಾಶ್ ಅವರ ಹಿಂದಿನ ಚಿತ್ರ ‘ಮ್ಯಾನ್ ಆಫ್ ದ ಮ್ಯಾಚ್’ ಚಿತ್ರಕ್ಕೆ ಪುನೀತ್ ರಾಜಕುಮಾರ್ ಅವರ ಪಿಆರ್‌ಕೆ ಪ್ರೊಡಕ್ಷನ್ ಜೊತೆಗಿತ್ತು. ಅದು ಅವರ ನಿರ್ಮಾಣದ ಚಿತ್ರವೂ ಹೌದು. ಅವರ ಜೊತೆ ಡಿ ಮಂಜುನಾಥ್ ನಿರ್ಮಾಪಕರಾಗಿ ಜೊತೆಗಿದ್ದರು. ‘ರಾಮಾ ರಾಮ ರೇ’, ‘ಒಂದಲ್ಲ ಎರಡಲ್ಲ’ ಚಿತ್ರಗಳ ಮೂಲಕ ತಮ್ಮದು ಚಿತ್ರರಂಗದ ಮಾಮೂಲಿ ಹಾದಿಯಲ್ಲ ಎನ್ನುವುದನ್ನು ಹೇಳಿದ್ದ ಸತ್ಯಪ್ರಕಾಶ್ ಅವರ ಹೊಸ ಚಿತ್ರದ ಶೀರ್ಷಿಕೆ ಮತ್ತು ಮೊದಲ ನೋಟವನ್ನು ಅಶ್ವಿನಿ ಪುನೀತ್ ರಾಜಕುಮಾರ್ ಲೋಕಾರ್ಪಣೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದರು. ಪುನೀತ್ ಅಗಲಿಕೆಯ ನಂತರ ಪಿಆರ್‌ಕೆ ಸಂಸ್ಥೆಯ ಆಶಯದೊಂದಿಗೆ ಮುಂದುವರಿಯುತ್ತಿರುವ ಅಶ್ವಿನಿ ಅವರು ಸಿನಿಮಾ ಸಮಾರಂಭದಲ್ಲಿ ಪಾಲ್ಗೊಂಡದ್ದು ಇದೇ ಮೊದಲು.

ಸತ್ಯ ಮೂವೀಸ್ ಮತ್ತು ಮಯೂರ ಪಿಕ್ಚರ್ಸ್ ಜೊತೆಯಾಗಿ ನಿರ್ಮಿಸುತ್ತಿರುವ ಹೊಸ ಚಿತ್ರ ‘ಅನ್‌ಲಾಕ್ ರಾಘವ’. ಈ ಚಿತ್ರದ ರಚನೆ ಸತ್ಯಪ್ರಕಾಶ್ ಅವರದಾದರೆ, ನಿರ್ದೇಶಿಸುವುದು ದೀಪಕ್ ಮಧುವನಹಳ್ಳಿ. ಸತ್ಯಪ್ರಕಾಶ್ ಪ್ರಕಾರ ಇದು ನಿಜವಾದ ಕಮರ್ಶಿಯಲ್ ಚಿತ್ರ. ಇದು ಹಾಸ್ಯ ಪ್ರಧಾನ ಪ್ರೇಮಕಥೆಯಾಗಿದ್ದು, ಇದರ ಮುಖ್ಯಪಾತ್ರಧಾರಿ ನಿರ್ಮಾಪಕ ಮಂಜುನಾಥ್ ಅವರ ಮಗ, ‘ವೀಕೆಂಡ್’ ಚಿತ್ರದಲ್ಲಿ ಕಾಣಿಸಿಕೊಂಡಿದ್ದ ಮಿಲಿಂದ್. ಅವರ ಜೋಡಿಯಾಗಿ ರೇಚಲ್ ಡೇವಿಡ್, ಜೊತೆಗೆ ಸಾಧುಕೋಕಿಲ, ಅವಿನಾಶ್, ರಮೇಶ್ ಭಟ್, ಸುಂದರ್ ವೀಣಾ, ಧರ್ಮಣ್ಣ ಕಡೂರು, ಭೂಮಿಶೆಟ್ಟಿ ಮೊದಲಾದವರಿದ್ದಾರೆ. ಅನೂಪ್ ಸೀಳಿನ್ ಸಂಗೀತ ಸಂಯೋಜನೆ, ಲವಿತ್ ಛಾಯಾಗ್ರಹಣ ಹಾಗೂ ಅಜಯ್ ಕುಮಾರ್ ಸಂಕಲನ ಇರಲಿದೆ.

andolana

Recent Posts

ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಲು ಯತ್ನಿಸಿದ್ದರು: ಸಿಎಂ ಡಿಕೆಶಿ ಬಾಂಬ್

ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…

4 hours ago

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್!

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…

5 hours ago

ಎಸ್‌ಐಆರ್‌ ವಿರುದ್ಧ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…

6 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ಗೆ ಮತ್ತೆ ಶಾಕ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…

6 hours ago

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ನಿಧನ

ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…

9 hours ago

ಓದುಗರ ಪತ್ರ: ಪಿಎಚ್‌ಸಿಗಳಲ್ಲಿ ಬಿಪಿ, ಶುಗರ್ ಮಾತ್ರೆಗಳು ಸಿಗುವಂತೆ ಕ್ರಮ ಕೈಗೊಳ್ಳಿ

ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…

10 hours ago