ಆಂದೋಲನ ಪುರವಣಿ

ಯೋಗ ಕ್ಷೇಮ : ವರ್ಷದಿಂದ ವರ್ಷಕ್ಕೆ ಇಳಿಯುತ್ತಿದೆ ಸೋಂಕಿನ ಪ್ರಮಾಣ

ಯುವಜನರಿಗೆ ಎಚ್‌ಐವಿ ಬಗ್ಗೆ ಅರಿವು, ಸುರಕ್ಷಿತ ಲೈಂಗಿಕತೆ ಕುರಿತು ವಿಶೇಷ ಕಾರ್ಯಕ್ರಮಗಳನ್ನು ರೂಪಿಸುತ್ತಿರುವ ಪರಿಣಾಮ ಮೈಸೂರು ಜಿಲ್ಲೆಯಲ್ಲಿ ಎಚ್‌ಐವಿ ಸೋಂಕಿನ ಪ್ರಕರಣಗಳು ವರ್ಷದಿಂದ ವರ್ಷಕ್ಕೆ ಇಳಿಮುಖವಾಗುತ್ತಿವೆ. ಎರಡು-ಮೂರು ವರ್ಷಗಳಲ್ಲಿ ಪ್ರಕರಣಗಳ ಸಂಖ್ಯೆ ಇನ್ನೂ ಕಡಿಮೆಯಾಗಲಿದೆ.

ಹತ್ತು ವರ್ಷಗಳ ಸರಾಸರಿ ಪ್ರಮಾಣ ನೋಡಿದರೆ ಸೋಂಕು ಪ್ರಕರಣಗಳು ೫೦೦ರ ಒಳಗೆ ಬಂದಿರುವುದು ಸಂತಸದ ಸಮಾಚಾರ. ಬೆಳಗಾವಿ, ಧಾರವಾಡ, ವಿಜಯಪುರ, ಚಿತ್ರದುರ್ಗ, ರಾಯಚೂರು, ಗುಲ್ಬರ್ಗಾ, ಬಾಗಲಕೋಟೆ, ಕೊಪ್ಪಳ ಜಿಲ್ಲೆಗಳಲ್ಲಿ ಅತಿ ಹೆಚ್ಚು ಎಚ್‌ಐವಿ ಫ್ರಿವೆಲೆನ್ಸ್ ಗಳಿದ್ದು, ಮೈಸೂರಿನಲ್ಲಿ ಸೋಂಕಿತರ ಪ್ರಮಾಣ ತುಂಬಾ ಕಡಿಮೆ ಇದೆ. ಜಿಲ್ಲೆಯಲ್ಲಿ ೨೦೨೦-೨೧ನೇ ಸಾಲಿನಲ್ಲಿ ೯೧,೯೫೩ ಸಾಮಾನ್ಯ ಜನರನ್ನು ಎಚ್‌ಐವಿ ಪರೀಕ್ಷೆ ಮಾಡಲಾಗಿದ್ದು, ಅದರಲ್ಲಿ ೫೨೧ ಮಂದಿಯಲ್ಲಿ ಸೋಂಕು ಪತ್ತೆಯಾಗಿತ್ತು. ಇದೇ ವೇಳೆ ೪೫,೬೩೬ ಗರ್ಭಿಣಿಯರನ್ನು ಪರೀಕ್ಷಿಸಿದ್ದು, ಅದರಲ್ಲಿ ೨೦ ಮಂದಿಗೆ ಸೋಂಕು ಇರುವುದು ದೃಢವಾಗಿತ್ತು.

೨೦೨೧-೨೨ನೇ ಸಾಲಿನಲ್ಲಿ ೧,೩೧,೯೬೪ ಸಾಮಾನ್ಯ ಜನರನ್ನು ಪರೀಕ್ಷಿಸಿದ್ದು, ಅದರಲ್ಲಿ ೭೨೨ ಮಂದಿಗೆ, ೫೦,೧೦೩ ಗರ್ಭಿಣಿಯರಲ್ಲಿ ೨೪ಮಂದಿಗೆ ಸೋಂಕು ಇರುವುದು ಪತ್ತೆಯಾಗಿತ್ತು.  ೨೦೨೨-೨೩ನೇ ಸಾಲಿನ ಈತನಕ ೧,೩೮,೬೭೬ ಮಂದಿಯನ್ನು ತಪಾಸಣೆ ಮಾಡಿದ್ದು, ೪೫೩ ಮಂದಿಗೆ ಸೋಂಕು ಇರುವುದು ದೃಢವಾಗಿದೆ.

ಮಕ್ಕಳಲ್ಲಿ ಪತ್ತೆಯಾಗದ ಸೋಂಕು

ಮೈಸೂರಿನಲ್ಲಿ ಎಲ್ಲ ಐಸಿಟಿಸಿ ಕೇಂದ್ರಗಳಲ್ಲಿಯೂ ಡಿಎನ್‌ಎ, ಪಿಸಿಆರ್ ಪರೀಕ್ಷಾ ಕೇಂದ್ರಗಳಿದ್ದು, ಇಲ್ಲಿ ಮಾರ್ಚ್ ೨೦೧೦ರಿಂದ ೨೦೨೨ ಅಕ್ಟೋಬರ್ ತನಕ ಎಚ್‌ಐವಿ ಸೋಂಕಿತ ತಾಯಂದಿರಿಗೆ ಹುಟ್ಟಿದ ಮಕ್ಕಳಲ್ಲಿ ೪೭ ಮಕ್ಕಳಿಗೆ ಸೋಂಕು ತಗುಲಿರುವುದು ಕಂಡುಬಂದಿತ್ತು. ೨೦೨೨-೨೩ರಲ್ಲಿ ಒಟ್ಟು ಮಕ್ಕಳಿಗೆ ೧೧೪ ಮಕ್ಕಳಿಗೆ ಪರೀಕ್ಷೆ ನಡೆಸಿದ್ದು, ಯಾವ ಮಕ್ಕಳಲ್ಲಿಯೂ ಎಚ್‌ಐವಿ ಸೋಂಕು ಪತ್ತೆಯಾಗಿಲ್ಲ. ಇದು ಎಚ್‌ಐವಿ ನಿಯಂತ್ರಣದಲ್ಲಿ ಹೊಸ ಮೈಲುಗಲ್ಲಿ ಎನ್ನಬಹುದು.

ಉಚಿತ ರಕ್ತನಿಧಿ ಕೇಂದ್ರಗಳು

ಮೈಸೂರಿನಲ್ಲಿ ಲೈಂಗಿಕ ವೃತ್ತಿನಿರತ ಮಹಿಳೆಯರು ಮತ್ತು ವಲಸೆಗಾರರಿಗೆ ಎಚ್‌ಐವಿ ಪರೀಕ್ಷಾ ಸೌಲಭ್ಯವನ್ನು ಒದಗಿಸುವ ಸಲುವಾಗಿ ಮೂರು ಟಿಐ ಕೆಲಸಮಾಡುತ್ತಿದ್ದು, ಅಶೋದಯ ಸಂಸ್ಥೆಯು ಎಫ್‌ಎಸ್‌ಡಬ್ಲ್ಯೂ ಜೊತೆ ಕಾರ್ಯ ನಿರ್ವಹಿಸುತ್ತಿದ್ದಾರೆ. ಜಿಲ್ಲೆಯಲ್ಲಿ ಒಟ್ಟು ೧೧ ರಕ್ತನಿಧಿ ಕೇಂದ್ರಗಳು ಕಾರ್ಯ ನಿರ್ವಹಿಸುತ್ತಿದ್ದು, ಕೆ.ಆರ್.ಆಸ್ಪತ್ರೆ, ಜೀವಧಾರ, ಜೆಎಸ್ ಎಸ್, ರೋಟರಿ ಚಂದ್ರಕಲಾ, ಕಾಮಾಕ್ಷಿ, ಅಪೋಲೋ, ಸಂತ ಜೋಸೆಫ್, ಕಾವೇರಿ, ಜಯದೇವ, ನಾರಾಯಣ ಹೃದಯಾಲಯ ಆಸ್ಪತ್ರೆಗಳಲ್ಲಿ ಸುರಕ್ಷಿತ ರಕ್ತದಾನದ ಬಗ್ಗೆ ಒತ್ತು ನೀಡುತ್ತಿದ್ದು, ಎಚ್‌ಐವಿ ಸೋಂಕಿತರಿಗೆ ಉಚಿತವಾಗಿ ರಕ್ತವನ್ನು ನೀಡಲಾಗುತ್ತದೆ.

andolanait

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

2 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

3 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

4 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

4 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

5 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

6 hours ago