ಕೊಲೆಸ್ಟ್ರಾಲ್ ಕಡಿಮೆ ಮಾಡುವ ಸೇಬು !: ಕೊಲೆಸ್ಟ್ರಾಲ್ ನಮ್ಮ ರಕ್ತದಲ್ಲಿರುವ ಮೇಣದಂತಹ ವಸ್ತು. ಇದು ಜೀವಕೋಶಗಳು ಮತ್ತು ಹಾರ್ಮೋನುಗಳನ್ನು ತಯಾರಿಸಲು ಸಹಾಯ ಮಾಡುತ್ತದೆ. ಆದರೆ ಅದರ ಪ್ರಮಾಣವು ಸಾಮಾನ್ಯಕ್ಕಿಂತ ಹೆಚ್ಚಿದ್ದರೆ, ಅದು ರಕ್ತದ ರಕ್ತನಾಳಗಳಲ್ಲಿ ಸಂಗ್ರಹಗೊಳ್ಳುತ್ತದೆ, ಇದರಿಂದಾಗಿ ರಕ್ತದ ಹರಿವಿನ ಮೇಲೆ ಪರಿಣಾಮ ಉಂಟು ಮಾಡುತ್ತದೆ.
ಇದರಿಂದಾಗಿ, ಪಾರ್ಶ್ವವಾಯು ಮತ್ತು ಹೃದಯಾಘಾತ ಸಂಭವಿಸುವ ಅಪಾಯವು ಹೆಚ್ಚಾಗುತ್ತದೆ. ಹೀಗಾಗಿ, ಕೊಲೆಸ್ಟ್ರಾಲ್ ಅನ್ನು ನಿಯಂತ್ರಣದಲ್ಲಿಟ್ಟುಕೊಳ್ಳುವುದು ಬಹಳ ಮುಖ್ಯ.ಕೊಲೆಸ್ಟ್ರಾಲ್ ಪ್ರಸ್ತುತ ದಿನಗಳಲ್ಲಿನ ಆಹಾರ ಶೈಲಿಯಿಂದಾಗಿ ಸರ್ವೇ ಸಾಮಾನ್ಯವೆನಿಸಿದೆ.
ಒಂದು ವೇಳೆ ಯಾರಾದರೂ ಕೊಲೆಸ್ಟ್ರಾಲ್ ಸಮಸ್ಯೆಯಿಂದ ಬಳಲುತ್ತಿದ್ದರೆ ಟೆನ್ಷನ್ ತೆಗೆದುಕೊಳ್ಳುವ ಅಗತ್ಯವಿಲ್ಲ. ಬಹಳ ಸುಲಭ ಮಾರ್ಗದಿಂದ ಮನೆಯಲ್ಲಿಯೇ ಕುಳಿತು ದೇಹದಲ್ಲಿನ ಕೊಲೆಸ್ಟ್ರಾಲ್ ಮಟ್ಟವನ್ನು ಸುಲಭವಾಗಿ ಕಡಿಮೆ ಮಾಡಬಹುದು. ಅಥವಾ ನಿಯಂತ್ರಣದಲ್ಲಿಟ್ಟುಕೊಳ್ಳಬಹುದು. ದಿನ ನಿತ್ಯದ ಆಹಾರದಲ್ಲಿ ಸೇಬು ಹಣ್ಣೂ ಸಹ ಒಂದು ಭಾಗವಾಗಿರಲಿ.
ಪ್ರತಿದಿನ 2 ಸೇಬುಗಳನ್ನು ತಿನ್ನುವ ಮೂಲಕ ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಶೇ. 40 ರಷ್ಟು ಕಡಿಮೆ ಮಾಡಬಹುದು. ಹೃದಯಾಘಾತ ಮತ್ತು ಪಾರ್ಶ್ವವಾಯು ಅಪಾಯವನ್ನು ಗಮನಾರ್ಹವಾಗಿ ಕಡಿಮೆ ಮಾಡುತ್ತದೆ ಎನ್ನುತ್ತವೆ ಆಹಾರ ಶೈಲಿ ಪರಿಣತರ ಮೂಲಗಳು.
ಕೊಲೆಸ್ಟ್ರಾಲ್ ತ್ಗಗಿಸಲು ಇತರ ಮಾರ್ಗಗಳು
.ಪ್ರತಿದಿನ 30 ನಿಮಿಷಗಳ ಲೆಗ್ ವ್ಯಾಯಾಮ ಮಾಡಿ.
.ನಾನ್ ವೆಜ್ ಕನಿಷ್ಠವಾಗಿ ಸೇವಿಸಬೇಕು.
.ಆಹಾರದಲ್ಲಿ ಹಣ್ಣುಗಳು ಮತ್ತು ಹಸಿರು ತರಕಾರಿ ಸೇವನೆ.
. ಜೀವನಶೈಲಿಯನ್ನು ಆರೋಗ್ಯಕರವಾಗಿರಿಸಿಕೊಳ್ಳಿ.
.ಕಾಲಕಾಲಕ್ಕೆ ದೇಹವನ್ನು ಪರೀಕ್ಷಿಸಿಕೊಳ್ಳಿ.
. ಆಹಾರ ಸೇವಿಸಿದ ನಂತರ, ಪ್ರತಿದಿನ 40 ನಿಮಿಷ ವಾಕ್ ಮಾಡಬೇಕು.
. ಪ್ರತಿದಿನ 8 ರಿಂದ 9 ಗಂಟೆಗಳ ನಿದ್ದೆ ಮಾಡಬೇಕು, ಇದು ಫಿಟ್ ಹಾಗೂ ಚಟುವಟಿಕೆಯಿಂದಿರಲು ಇದು ಸಹಕಾರಿ.
ಪ್ರತಿದಿನ ಬೆಳಗಿನ ಜಾವ ದಿನ ದಿನಪತ್ರಿಕೆಗಳನ್ನು ಬಹುತೇಕ ಮಕ್ಕಳೇ ವಿತರಿಸುತ್ತಿದ್ದಾರೆ. ಹವಾಮಾನ ವೈಪರೀತ್ಯದಿಂದ ವಿಪರೀತ ಚಳಿ ಇರುವುದರಿಂದ ಆರೋಗ್ಯದ ಮೇಲೆ…
ಪ್ರಾದೇಶಿಕ ಸಾರಿಗೆ ಕಚೇರಿಗಳಲ್ಲಿ ಸಾರ್ವಜನಿಕ ಕೆಲಸಗಳಿಗೆ ಮಧ್ಯವರ್ತಿಗಳು ಹಾಗೂ ಚಾಲನಾ ತರಬೇತಿ ಶಾಲೆಗಳವರಿಗೆ ಅವಕಾಶ ನೀಡದಂತೆ ಅಧಿಕಾರಿಗಳು ಹಾಗೂ ಸಿಬ್ಬಂದಿ…
ಬೀದಿ ನಾಯಿಗಳ ಹಾವಳಿಯನ್ನು ತಡೆಗಟ್ಟಲು ರಾಜ್ಯದ ಎಲ್ಲಾ ನಗರ ಪಾಲಿಕೆಗಳು, ಪುರಸಭೆಗಳು ಮತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ…
ಕಳೆದ ವಾರ ಕೊಚ್ಚಿಯಲ್ಲಿ ನಾಲ್ಕು ದಿನಗಳ ಕಾಲ ನಡೆದ ಕಲೆ ಮತ್ತು ಸಾಹಿತ್ಯ ಉತ್ಸವದಲ್ಲಿ ಸಿನಿಮಾ ಕುರಿತಂತೆ ಪ್ರಮುಖರು ಆಡಿರುವ…
ಲಕ್ಷ್ಮಿಕಾಂತ್ ಕೊಮಾರಪ್ಪ ಬ್ರಿಟಿಷರ ಕಾಲದ ಕಬ್ಬಿಣದ ಸೇತುವೆ ತೆರವು; ನೂತನ ಸೇತುವೆ ನಿರ್ಮಾಣ ಕಾರ್ಯ ಶುರು ಸೋಮವಾರಪೇಟೆ: ಮಡಿಕೇರಿ- ಹಾಸನ…
ಕಾಲುವೆಗೆ ಸೇರುತ್ತಿದೆ ಕಲ್ಯಾಣ ಮಂಟಪಗಳ ತ್ಯಾಜ್ಯ ರಾಸಾಯನಿಕ ನೀರಿನಿಂದ ಬೆಳೆ ಹಾಳು, ಜಾನುವಾರು ಸಾವು ಈಗಲಾದರೂ ಸಮಸ್ಯೆ ಬಗೆಹರಿಸಲು ಸಂಬಂಧಪಟ್ಟವರು…