ಆಂದೋಲನ ಪುರವಣಿ

ಯುವ ಡಾಟ್‌ ಕಾಂ : ವಿಶ್ವಕ್ಕೆ ರಾಗಿಯ ಮಹತ್ವ ಸಾರಿದ ಪ್ರೀತಿ ಕಾಂಬಳೆ

ಅಮೇರಿಕಾದ ಕ್ಯಾಲಿಫೋರ್ನಿಯಾ ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ಮಂಡ್ಯದ ಕೃಷಿ ಮಹಾವಿದ್ಯಾಲಯದ ವಿದ್ಯಾರ್ಥಿನಿ ಪ್ರೀತಿ ಕಾಂಬಳೆ, ರಾಗಿಯಲ್ಲಿರುವ ಅಪೂರ್ವ ಪೌಷ್ಟಿಕಾಂಶ ಕುರಿತು ಫೆ.12 ರಿಂದ 17ರ ವರೆಗೆ ಸಂಶೋಧನಾ ಪ್ರಬಂಧ ಮಂಡಿಸಿ ಕರ್ನಾಟಕದ ಹೆಮ್ಮೆಯೆನಿಸಿದ್ದಾರೆ.
2020-21ನೇ ಸಾಲಿನಲ್ಲಿ ಮಂಡ್ಯದ ಕೃಷಿ ಮಹಾವಿದ್ಯಾಲಯದ ಸ್ನಾತಕೋತ್ತರ ಪದವಿ ವಿದ್ಯಾರ್ಥಿನಿ ಪ್ರೀತಿ ಕಾಂಬಳೆ ಅವರು, ವಿಜ್ಞಾನಿಗಳಾದ ಡಾ.ಎಚ್.ಬಿ.ಮಹೇಶ್, ಡಾ.ಎಸ್.ಎಸ್.ಪ್ರಕಾಶ್, ಡಾ.ಎಸ್.ಬಿ ಯೋಗಾನಂದ ಮತ್ತು ಡಾ.ಪಿ.ಮಹದೇವು ಮಾರ್ಗದರ್ಶನದಲ್ಲಿ ಸಂಶೋಧನೆ ನಡೆಸಿ ರಾಗಿಯಲ್ಲಿ ‘ನ್ಯೂಟ್ರೀಷಿಯನ್ ಜೀನ್’ ಎಂಬ ಅಂಶವಿರುವುದನ್ನು ಕಂಡುಕೊಂಡು ಸಮ್ಮೇಳನದಲ್ಲಿ ಮಂಡಿಸಿದ್ದಾರೆ.
ಮೂಲತಃ ಬೆಳಗಾವಿ ಜಿಲ್ಲೆಯ ರಾಯಭಾಗ ತಾಲ್ಲೂಕಿನ ಕುಡಚಿ ಹೋಬಳಿಯ ಹಾಲಶಿರಗೂರು ಗ್ರಾಮದ ಆರ್ಥಿಕವಾಗಿ ಹಿಂದುಳಿದ ಕುಟುಂಬದಿಂದ ಬಂದಿರುವ ಪ್ರೀತಿ ಕಾಂಬಳೆ,ಮೂಡಿಗೆರೆಯಲ್ಲಿ ತೋಟಗಾರಿಕೆ ವಿಷಯದಲ್ಲಿ ಬಿಎಸ್‌ಸಿ ಪದವಿ ಪಡೆದು, ವಿ.ಸಿ.ಫಾರಂ ಕೃಷಿ ವಿದ್ಯಾಲಯದಲ್ಲಿ 2ನೇ ವರ್ಷದ ಎಂಎಸ್‌ಸಿ (ಕೃಷಿ) ಓದುತ್ತಿದ್ದಾರೆ. ಅನುವಂಶೀಯತೆ ಮತ್ತು ಸಸ್ಯ ತಳಿ ಅಭಿವೃದ್ಧಿ ವಿಭಾಗದಲ್ಲಿ ಸ್ನಾತಕ ಪದವಿ ಪಡೆಯಲು ರಾಗಿ ಬೆಳೆ ಕುರಿತ ಸಂಶೋಧನೆಯಲ್ಲಿ ತೊಡಗಿಸಿಕೊಂಡಿದ್ದಾರೆ.

ಸಂಶೋಧನೆಗೆ ಕಾರಣವೇನು?
ಜಗತ್ತಿನಲ್ಲಿ ಪ್ರತಿ ವರ್ಷ 5 ಬಿಲಿಯನ್ ಜನರು ಪೌಷ್ಟಿಕಾಂಶ ಮತ್ತು ಲವಣಾಂಶಗಳ ಕೊರತೆಯಿಂದಾಗಿ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ. ರೈತರ ಬೆಳೆಗಳ ನಷ್ಟ ಮತ್ತು ಜನಸಾಮಾನ್ಯರ ಆರೋಗ್ಯದ ಸಮಸ್ಯೆಗಳನ್ನು ಗಮನಿಸಿ, ಮಂಡ್ಯ ವಿ.ಸಿ. ಫಾರಂನ ಕೃಷಿ ವಿಜ್ಞಾನಿಗಳು ಮತ್ತು ವಿದ್ಯಾರ್ಥಿಗಳು ಹಮ್ಮಿಕೊಂಡ ವಿಚಾರ ಸಂಕಿರಣದಲ್ಲಿ ಅತಿ ಹೆಚ್ಚು ಲವಣಾಂಶಗಳ ಲಭ್ಯತೆ ಇರುವ, ಹೆಚ್ಚು ತಾಪಮಾನ ಸಹಿಸಿಕೊಳ್ಳಬಲ್ಲ ಹಾಗೂ ಕಡಿಮೆ ನೀರು ಬಳಕೆ ಮಾಡಬಲ್ಲ ವಂಶವಾಹಿ ಧಾತುಗಳನ್ನು ಕಂಡುಹಿಡಿದು, ಅವುಗಳನ್ನು ಜನಪ್ರಿಯ ಮತ್ತು ಲಾಭದಾಯಕ ತಳಿಗಳೊಂದಿಗೆ ಸಂಕೀರ್ಣ ಮಾಡುವ ವೈಜ್ಞಾನಿಕ ವಿಷಯ ಹೊಳೆದಿದೆ. ಕೊನೆಗೆ ಅದು ಸಂಶೋಧನೆಗೆ ದಾರಿ ಮಾಡಿಕೊಟ್ಟಿದೆ.

 

andolanait

Recent Posts

ಇಂದು ಪೋಲೀಯೋ ಲಸಿಕಾ ಅಭಿಯಾನ

ನವೀನ್ ಡಿಸೋಜ ೧,೯೪೬ ಲಸಿಕೆದಾರರು, ೮೫ ಮೇಲ್ವಿಚಾರಕರು ೯೭೩ ಮನೆ ಭೇಟಿ ನೀಡುವ ತಂಡ ರಚನೆ ಪ್ರವಾಸಿಗರು, ವಲಸೆ ಕಾರ್ಮಿಕರ…

20 mins ago

ಮರುಳಯ್ಯನ ಕೊಪ್ಪಲು ಕೊಂತನಾಯಕರಿಗೆ ಬೇಡರ ಕಣ್ಣಪ್ಪನೇ ದೇವರು

ಸೂರ್ಯಪುತ್ರ ಯಾರಾದ್ರೂ ಮತ್ತೆ ಮತ್ತೆ ಸಿಗ್ತಾನೆ ಇದ್ರೆ ‘ಭೂಮಿ ದುಂಡಗಿದೆ, ಅದ್ಕೆ ಮತ್ತೆ ಮತ್ತೆ ಎದುರುಬದುರಾಗೋದು’ ಅನ್ನೋ ಮಾತು ಕೇಳಿರ್ತೇವೆ.…

26 mins ago

ಮೈಸೂರಲ್ಲಿ ಎಸ್.ಎಲ್. ಭೈರಪ್ಪನವರ ಸ್ಮಾರಕ ಹೇಗಿರಬೇಕು?

ತೀರಿಹೋದ ಕನ್ನಡದ ಹಿರಿಯ ಸಾಹಿತಿ ಡಾ.ಎಸ್.ಎಲ್.ಭೈರಪ್ಪನವರಿಗೆ ಮೈಸೂರಿನಲ್ಲಿ ಸ್ಮಾರಕ ನಿರ್ಮಿಸಲಾಗುವುದು ಎಂದು ರಾಜ್ಯದ ಮುಖ್ಯಮಂತ್ರಿಗಳು ಘೋಷಿಸಿದ್ದಾರೆ. ಈ ಉದ್ದೇಶಿತ ಸ್ಮಾರಕದ…

30 mins ago

ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರು ಬದಲಾವಣೆ : ಸಂಸದ ಯದುವೀರ್‌

ಮೈಸೂರು : ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದೆ. ಆದರೆ, ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಯಾವ…

9 hours ago

ತಂತ್ರಜ್ಞಾನ ಅಳವಡಿಸಿಕೊಂಡು ಉತ್ತಮ ಇಳುವರಿ ಜೊತೆಗೆ ಹೆಚ್ಚಿನ ಆದಾಯ ಪಡೆಯರಿ : ರೈತರಿಗೆ ಸಿಎಂ ಕರೆ

ಬೆಳಗಾವಿ : ರಾಜ್ಯ ಸರ್ಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ…

10 hours ago