Mysore
25
scattered clouds

Social Media

ಸೋಮವಾರ, 26 ಜನವರಿ 2026
Light
Dark

೧೦,೨೨೭ ಬ್ಯಾಂಕ್ ಹುದ್ದೆಗಳು ಖಾಲಿ ಇವೆ

ಬ್ಯಾಂಕ್‌ ಸಿಬ್ಬಂದಿ ನೇಮಕಾತಿ ಸಂಸ್ಥೆಯು (ಐಬಿಪಿಎಸ್) ಕ್ಲರಿಕಲ್ ಕೇಡರ್ ಹುದ್ದೆಗಳ ನೇಮಕಾತಿಗಾಗಿ ಸಾಮಾನ್ಯ ಪ್ರವೇಶ ಪರೀಕ್ಷೆಗೆ ಅಧಿಸೂಚನೆ ಹೊರಡಿಸಿದೆ. ಈ ಬಾರಿ ಬರೋಬ್ಬರಿ ೧೦,೨೨೭ ಹುದ್ದೆಗಳಿಗೆ ಅಧಿಸೂಚನೆ ಪ್ರಕಟಿಸಿದೆ. ಕರ್ನಾಟಕಕ್ಕೆ ೧,೧೭೦ ಹುದ್ದೆಗಳನ್ನು ಮೀಸ ಲಿಡಲಾಗಿದೆ. ರಾಜ್ಯದಲ್ಲಿ ಅತೀ ಹೆಚ್ಚು ಎಂದರೆ ೬೨೫ ಹುದ್ದೆಗಳಿಗೆ ಕೆನರಾ ಬ್ಯಾಂಕ್ ನೇಮಕಾತಿ ಮಾಡಿಕೊಂಡರೆ, ಬ್ಯಾಂಕ್ ಆಫ್ ಬರೋಡಾ ೨೫೩ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಿವೆ. ಅಲ್ಲದೇ ಇಂಡಿಯನ್ ಓವರ್‌ಸೀಸ್ ಬ್ಯಾಂಕ್, ಯುಕೋ ಬ್ಯಾಂಕ್, ಬ್ಯಾಂಕ್ ಆಫ್ ಇಂಡಿಯಾ, ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ, ಪಂಜಾಬ್ ನ್ಯಾಷನಲ್ ಬ್ಯಾಂಕ್, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ, ಬ್ಯಾಂಕ್ ಆಫ್ ಮಹಾರಾಷ್ಟ್ರ, ಇಂಡಿಯನ್ ಬ್ಯಾಂಕ್, ಪಂಜಾಬ್ ಮತ್ತು ಸಿಂದ್ ಬ್ಯಾಂಕ್‌ಗಳಿಗೆ ನೇಮಕಾತಿ ನಡೆಯಲಿದೆ.

ಆ.೧ ರಿಂದಲೇ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಕೆ ಆರಂಭವಾಗಿದ್ದು,ಆ.೨೧ರಂದು ಕೊನೆಯ ದಿನಾಂಕ. ಅಕ್ಟೋಬರ್ ಮತ್ತು ನವೆಂಬರ್ ತಿಂಗಳಲ್ಲಿ ಕ್ರಮವಾಗಿ ಪೂರ್ವಭಾವಿ ಮತ್ತು ಮುಖ್ಯ ಪರೀಕ್ಷೆ ನಡೆಯಲಿದ್ದು, ಕನ್ನಡ ಸೇರಿದಂತೆ ವಿವಿಧ ಪ್ರಾದೇಶಿಕ ಭಾಷೆಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ. ಎಸ್‌ಸಿ, ಎಸ್‌ಟಿ ಮತ್ತು ಮೀಸಲು ವ್ಯಾಪ್ತಿಗೆ ಒಳಪಡುವ ಅಭ್ಯರ್ಥಿಗಳಿಗೆ ಐಬಿಪಿಎಸ್ ವತಿಯಿಂದ ಪರೀಕ್ಷಾ ಪೂರ್ವ ತರಬೇತಿ ಯನ್ನೂ ನೀಡಲಾಗುತ್ತದೆ. ಯಾವುದೇ ವಿಷಯದ ಪದವೀಧರರು ೨೦ರಿಂದ ೨೮ ವರ್ಷ ವಯಸ್ಸಿನ ಒಳಗಿರುವವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.

Tags:
error: Content is protected !!