ಬ್ಯಾಂಕ್ ಸಿಬ್ಬಂದಿ ನೇಮಕಾತಿ ಸಂಸ್ಥೆಯು (ಐಬಿಪಿಎಸ್) ಕ್ಲರಿಕಲ್ ಕೇಡರ್ ಹುದ್ದೆಗಳ ನೇಮಕಾತಿಗಾಗಿ ಸಾಮಾನ್ಯ ಪ್ರವೇಶ ಪರೀಕ್ಷೆಗೆ ಅಧಿಸೂಚನೆ ಹೊರಡಿಸಿದೆ. ಈ ಬಾರಿ ಬರೋಬ್ಬರಿ ೧೦,೨೨೭ ಹುದ್ದೆಗಳಿಗೆ ಅಧಿಸೂಚನೆ ಪ್ರಕಟಿಸಿದೆ. ಕರ್ನಾಟಕಕ್ಕೆ ೧,೧೭೦ ಹುದ್ದೆಗಳನ್ನು ಮೀಸ ಲಿಡಲಾಗಿದೆ. ರಾಜ್ಯದಲ್ಲಿ ಅತೀ ಹೆಚ್ಚು ಎಂದರೆ ೬೨೫ ಹುದ್ದೆಗಳಿಗೆ ಕೆನರಾ ಬ್ಯಾಂಕ್ ನೇಮಕಾತಿ ಮಾಡಿಕೊಂಡರೆ, ಬ್ಯಾಂಕ್ ಆಫ್ ಬರೋಡಾ ೨೫೩ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಿವೆ. ಅಲ್ಲದೇ ಇಂಡಿಯನ್ ಓವರ್‌ಸೀಸ್ ಬ್ಯಾಂಕ್, ಯುಕೋ ಬ್ಯಾಂಕ್, ಬ್ಯಾಂಕ್ ಆಫ್ ಇಂಡಿಯಾ, ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ, ಪಂಜಾಬ್ ನ್ಯಾಷನಲ್ ಬ್ಯಾಂಕ್, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ, ಬ್ಯಾಂಕ್ ಆಫ್ ಮಹಾರಾಷ್ಟ್ರ, ಇಂಡಿಯನ್ ಬ್ಯಾಂಕ್, ಪಂಜಾಬ್ ಮತ್ತು ಸಿಂದ್ ಬ್ಯಾಂಕ್‌ಗಳಿಗೆ ನೇಮಕಾತಿ ನಡೆಯಲಿದೆ.
ಆ.೧ ರಿಂದಲೇ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಕೆ ಆರಂಭವಾಗಿದ್ದು,ಆ.೨೧ರಂದು ಕೊನೆಯ ದಿನಾಂಕ. ಅಕ್ಟೋಬರ್ ಮತ್ತು ನವೆಂಬರ್ ತಿಂಗಳಲ್ಲಿ ಕ್ರಮವಾಗಿ ಪೂರ್ವಭಾವಿ ಮತ್ತು ಮುಖ್ಯ ಪರೀಕ್ಷೆ ನಡೆಯಲಿದ್ದು, ಕನ್ನಡ ಸೇರಿದಂತೆ ವಿವಿಧ ಪ್ರಾದೇಶಿಕ ಭಾಷೆಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ. ಎಸ್‌ಸಿ, ಎಸ್‌ಟಿ ಮತ್ತು ಮೀಸಲು ವ್ಯಾಪ್ತಿಗೆ ಒಳಪಡುವ ಅಭ್ಯರ್ಥಿಗಳಿಗೆ ಐಬಿಪಿಎಸ್ ವತಿಯಿಂದ ಪರೀಕ್ಷಾ ಪೂರ್ವ ತರಬೇತಿ ಯನ್ನೂ ನೀಡಲಾಗುತ್ತದೆ. ಯಾವುದೇ ವಿಷಯದ ಪದವೀಧರರು ೨೦ರಿಂದ ೨೮ ವರ್ಷ ವಯಸ್ಸಿನ ಒಳಗಿರುವವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…
ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…
ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…
ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…
ಲೀಲಾ ಶಿವಕುಮಾರ್, ಪರಿಸರವಾದಿ ಸ್ವಚ್ಛ ನಗರಿ ಮೈಸೂರು ಮಾತ್ರವಲ್ಲ, ಇಡೀ ದೇಶವೇ ಇಂದು ಕಸದ ಸಮಸ್ಯೆಯನ್ನು ಎದುರಿಸುತ್ತಿದೆ. ರಸ್ತೆ, ಬಡಾವಣೆ,…
ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಚಿತ್ರಮಂದಿರಗಳಲ್ಲಿ ಪ್ರವೇಶ ದರ ಗರಿಷ್ಟ ಮೊತ್ತ ೨೦೦ ರೂ. ಅಸಾಧ್ಯವೇ? ಕನ್ನಡ ಚಿತ್ರರಂಗ ಮತ್ತು…