ಯುವ ಡಾಟ್ ಕಾಂ

ಟೆಲಿಗ್ರಾಮ್ ಬಳಕೆದಾರರಿಗೆ ಹೊಸ ಫೀಚರ್

ವಿಶ್ವದಾದ್ಯಂತ ಮಿಲಿಯನ್ ಗಟ್ಟಲೇ ಬಳಕೆದಾರರನ್ನು ಹೊಂದಿರುವ ಟೆಲಿಗ್ರಾಮ್ ಬಳಕೆದಾರರಿಗೆ ಸಿಹಿ ಸುದ್ದಿಯೊಂದನ್ನು ನೀಡಿದ್ದು, ಹೊಸ ಫೀಚರ್ ನೀಡಲು ಮುಂದಾಗಿದೆ.

ಇಂದಿನ ದಿನಮಾನಗಳಲ್ಲಿ ಸಾಮಾಜಿಕ ಜಾಲತಾಣಗಳನ್ನು ಬಿಟ್ಟಿರುವುದು ಅಸಾಧ್ಯವಾಗಿದೆ. ಅದರಲ್ಲೂ ಯುವ ಸಮುದಾಯ ಸಾಮಾಜಿಕ ಜಾಲತಾಣವಿಲ್ಲದೆ ಯಾವ ಚಟುವಟಿಕೆಗಳನ್ನೂ ನಿರ್ವಹಣೆ ಮಾಡುವುದು ಅಸಾಧ್ಯ ಎನ್ನುವ ಮಟ್ಟಿಗೆ ಪರಿಸ್ಥಿತಿ ನಿರ್ಮಾಣವಾಗಿದೆ. ಹಾಗಾಗಿಯೇ ಟೆಲಿಗ್ರಾಮ್ ‘ಸ್ಟೋರಿಸ್’ ಎಂಬ ಫೀಚರ್ ಅನ್ನು ಪರಿಚಯಿಸಲು ಮುಂದಾಗಿದೆ.

ಸ್ಟೋರಿಸ್‌ಗಳು ನಮ್ಮ ಜೀವನಕ್ಕೆ ಹತ್ತಿರವಾಗಿದ್ದು, ನಮ್ಮ ಜೀವನದ ಸಂಗತಿಗಳ ಬಗ್ಗೆ ಪ್ರತ್ಯಕ್ಷವಾಗಿ ಹಾಗೂ ಪರೋಕ್ಷವಾಗಿ ಇವುಗಳ ಮೂಲಕ ಸ್ನೇಹಿತರು ಸೇರಿದಂತೆ ಸಂಬಂಧಿಕರು ಕೂಡ ತಿಳಿದುಕೊಳ್ಳಬಹುದಾಗಿದೆ. ಟೆಲಿಗ್ರಾಮ್ ಸಿಇಒ ಪಾವೆಲ್ ಡುರೊವ್, ಟೆಲಿಗ್ರಾಮ್ ಶೀಘ್ರದಲ್ಲೇ ಸ್ಟೋರಿಸ್ ಫೀಚರ್ ಅನ್ನು ಒಳಗೊಂಡಿರುತ್ತದೆ ಎಂದು ಹೇಳಿದ್ದಾರೆ.

ಇನ್‌ಸ್ಟಾಗ್ರಾಮ್‌ನಲ್ಲಿ ‘ಸ್ಟೋರಿಸ್’ಗಳು 24 ಗಂಟೆಗಳ ನಂತರ ಸ್ವಯಂಚಾಲಿತವಾಗಿಮುಕ್ತಾಯಗೊಳ್ಳುತ್ತವೆ, ಆದರೆ ಟೆಲಿಗ್ರಾಮ್‌ನಲ್ಲಿ ಬಳಕೆದಾರರು ತಮ್ಮ ಸ್ಟೋರಿಸ್ ಆ್ಯಪ್ ಡೌನ್ ಲೋಡ್ ಮಾಡಿದ ನಂತರ ಯಾವಾಗ ಮುಕ್ತಾಯವಾಗಬೇಕು ಎಂಬುದನ್ನು ನಿರ್ಧರಿಸಲು ನಾಲ್ಕು ಆಯ್ಕೆಗಳನ್ನು ಹೊಂದಿರುತ್ತಾರೆ. ಈ ಸ್ಟೋರಿಸ್‌ಗಳು 6, 12, 24, ಹಾಗೂ 48 ಗಂಟೆಗಳ ಮುಕ್ತಾಯ ಅವಧಿಯನ್ನು ಒಳಗೊಂಡಿರುತ್ತವೆ. ಜತೆಗೆ ಬಳಕೆದಾರರು ಟೆಲಿಗ್ರಾಮ್‌ನಲ್ಲಿ ತಮ್ಮ ಪ್ರೊಫೈಲ್ ಪುಟದಲ್ಲಿ ಸ್ಟೋರಿಸ್‌ಗಳನ್ನು ಶಾಶ್ವತವಾಗಿ ಪ್ರದರ್ಶಿಸ ಬಹುದಾಗಿದೆ.

lokesh

Recent Posts

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

2 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

2 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

2 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

5 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

5 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ:  ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…

6 hours ago