ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ (ಎಎಐ) 309 ಏರ್ ಟ್ರಾಫಿಕ್ ಕಂಟ್ರೋಲರ್ (Air Traffic Controller) (ಜೂನಿಯರ್ ಎಕ್ಸಿಕ್ಯುಟಿವ್) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.
ಏ. 25ರಿಂದ ಮೇ 25ರವರೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಬಿ.ಎಸ್ಸಿ ಅಥವಾ ಬಿ. ಟೆಕ್, ಬಿಇ ಪದವೀಧರರು ಅರ್ಜಿ ಸಲ್ಲಿಸಬಹುದು. ಅರ್ಜಿ ಶುಲ್ಕ ಮತ್ತು ಇತರೆ ವಿವರಗಳು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಲಭ್ಯವಿದೆ.
ಈ 309 ಏರ್ ಟ್ರಾಫಿಕ್ ಕಂಟ್ರೋಲರ್ ಹುದ್ದೆಗಳಲ್ಲಿ 125 ಮೀಸಲಾತಿ ರಹಿತ ವರ್ಗಕ್ಕೆ, 30 ಇಡಬ್ಲ್ಯುಎಸ್, 72 ಒಬಿಸಿ, 55 ಎಸ್‌ಸಿ ಮತ್ತು 72 ಎಸ್‌ಟಿ ವರ್ಗಕ್ಕೆ ಮೀಸಲಾಗಿದೆ. ನೇಮಕಾತಿ ಪ್ರಕ್ರಿಯೆಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಗಾಗಿ ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್ aai.aero ಅನ್ನು ನೋಡಬಹುದು.





