job alert
ಭಾರತೀಯ ವಾಯುಸೇನೆ (ಐಎಎ-)ಯಲ್ಲಿ ಗ್ರೂಪ್ ‘ಸಿ’ ೧೫೩ ನಾಗರಿಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಮೇ ೧೭ರಿಂದಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಜೂನ್೧೫ರವರೆಗೂ ಅರ್ಜಿ ಸಲ್ಲಿಸಬಹುದು. ಎಲ್‌ಡಿಸಿ, ಟೈಪಿಸ್ಟ್, ಮೆಕ್ಯಾನಿಕ್‌ಗಳಂತಹ ಹಲವು ಹುದ್ದೆಗಳಿದ್ದು, ಅರ್ಹತೆ ಮತ್ತು ಆಯ್ಕೆ ಪ್ರಕ್ರಿಯೆಯ ವಿವರಗಳನ್ನು ಭಾರತೀಯ ವಾಯು ಸೇನೆಯ ಅಧಿಕೃತ ವೆಬ್‌ಸೈಟ್… indian airforce.nic.in ನಲ್ಲಿ ಪಡೆಯಬಹುದು. ಹತ್ತನೇ ತರಗತಿ, ಪಿಯುಸಿ ಉತ್ತೀರ್ಣರಾಗಿರುವ ಆಸಕ್ತರು ಆನ್‌ಲೈನ್ ಮತ್ತು ಆ-ಲೈನ್ ಮೂಲಕವೂ ಅರ್ಜಿ ಸಲ್ಲಿಸಬಹುದಾಗಿದೆ.
ಕಿರಿಯ ದರ್ಜೆ ಗುಮಾಸ್ತ (ಎಲ್‌ಡಿಸಿ), ಸ್ಟೋರ್ ಕೀಪರ್, ಹಿಂದಿ ಟೈಪಿಸ್ಟ್, ಮೆಕ್ಯಾನಿಕಲ್ ಟ್ರಾನ್ಸ್‌ಪೋರ್ಟ್, ಚಾಲಕರು, ಅಡುಗೆಯವರು, ಬಡಗಿ, ಪೇಂಟರ್, ಹೌಸ್ ಕೀಪಿಂಗ್ ಮತ್ತಿತರೆ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಒಟ್ಟು ೧೫೩ ಹುದ್ದೆಗಳಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಸಾಮಾನ್ಯ ವರ್ಗ, ಇತರೆ ಹಿಂದುಳಿದ ವರ್ಗಗಳು ಹಾಗೂ ಆರ್ಥಿಕವಾಗಿ ದುರ್ಬಲ ವರ್ಗ(ಇಡಬ್ಲ್ಯುಎಸ್)ಗಳವರಿಗೆ ಹುದ್ದೆಗಳನ್ನು ಕಾಯ್ದಿರಿಸಲಾಗಿದೆ. ಅರ್ಜಿದಾರರ ವಯೋಮಿತಿ ೧೮ರಿಂದ ೨೫ರೊಳಗಿರಬೇಕು. ಮೀಸಲು ಅಭ್ಯರ್ಥಿಗಳಿಗೆ ಸರ್ಕಾರಿ ನಿಯಮಗಳ ಪ್ರಕಾರ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ. ಅರ್ಜಿ ಕರೆಯಲಾಗಿರುವ ವಿವಿಧ ಹುದ್ದೆಗಳಿಗೆ ಲಿಖಿತ ಪರೀಕ್ಷೆ, ವೃತ್ತಿ ಕೌಶಲ ಪರೀಕ್ಷೆಗಳ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವವರು ವಾಯುಸೇನೆಯ ಅಧಿಕೃತ ವೆಬ್‌ಸೈಟ್ನಿಂದ ಅರ್ಜಿಯನ್ನು ಡೌನ್‌ಲೋಡ್ ಮಾಡಿಕೊಂಡು ಸಮೀಪದ ವಾಯುಸೇನೆ ಕಚೇರಿಗೆ ಅಂಚೆ ಮೂಲಕ ಸಲ್ಲಿಸಬಹುದು.
ಮೈಸೂರು : ಮಾದಕ ವ್ಯಸನ ಮುಕ್ತ ಮೈಸೂರು ವಿಮುಕ್ತಿ ಅಭಿಯಾನದ ಮುಂದುವರಿದ ಕಾರ್ಯಾಚರಣೆಯಲ್ಲಿ ಸಿಸಿಬಿ ಪೊಲೀಸರು ನಾಲ್ವರನ್ನು ಬಂಧಿಸಿ ಸುಮಾರು…
ಹೊಸದಿಲ್ಲಿ : ಭಾರತೀಯ ದಂಗೆಕೋರ ಗುಂಪುಗಳೊಂದಿಗೆ ಸಂಬಂಧ ಹೊಂದಿರುವ ಜನಾಂಗೀಯ ಯುದ್ಧ ಗುಂಪುಗಳನ್ನು ಸಂಪರ್ಕಿಸಲು ಮತ್ತು ತರಬೇತಿ ನೀಡಲು ಅಕ್ರಮವಾಗಿ…
ಮೈಸೂರು : ಸ್ಥಗಿತಗೊಂಡಿದ್ದ ಚಿತ್ರಮಂದಿರದ ಆವರಣದಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಅಲ್ಲಿನ ವಾಚ್‌ಮನ್ ಒಬ್ಬರು ಸಜೀವ ದಹನಗೊಂಡ ದಾರುಣ…
ಬೆಂಗಳೂರು : 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾ.18ರಿಂದ ಪ್ರಾರಂಭವಾಗುತ್ತಿದ್ದು, ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…
ಹನೂರು : ರಾಜ್ಯದ ಪ್ರಸಿದ್ದ ಧಾರ್ಮಿಕ ಯಾತ್ರಸ್ಥಳ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಯುಗಾದಿ ಜಾತ್ರಾ ಮಹೋತ್ಸವ ಹಿನ್ನೆಲೆ ಮಂಗಳವಾರ…
ಹನೂರು : ತಾಲೂಕು ವ್ಯಾಪ್ತಿಯ ಒಂಬತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಶಾಶ್ವತ ಪರಿಹಾರಕ್ಕೆ ಸರ್ಕಾರ…