ಯುವ ಡಾಟ್ ಕಾಂ

ಇಸ್ರೋದಲ್ಲಿ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ೭೫ಕ್ಕೂ ಹೆಚ್ಚು ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಪದವಿ, ಡಿಪ್ಲೊಮಾ ಮತ್ತು ಐಟಿಐ ಅಪ್ರೆಂಟಿಸ್ ಹುದ್ದೆಗಳು ಲಭ್ಯವಿವೆ. ಆಸಕ್ತ ಅಭ್ಯರ್ಥಿಗಳು ಏಪ್ರಿಲ್ ೨೧ ರೊಳಗೆ isro.gov.in ಅಥವಾ
nats.edcucation.gov.in ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ಇಸ್ರೋದಲ್ಲಿ ಕೆಲಸ ಮಾಡಲು ಇಚ್ಛಿಸುವ ಅಭ್ಯರ್ಥಿಗಳಿಗೆ ಸಿಹಿ ಸುದ್ದಿ ಇಲ್ಲಿದೆ. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಒಟ್ಟು ೭೫ ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಏ.೨೧ರೊಳಗೆ ಆನ್‌ಲೈನ್ ಮೋಡ್ ಮೂಲಕ ಅರ್ಜಿ ಸಲ್ಲಿಸಬಹುದು.

ಒಟ್ಟು ಹುದ್ದೆಗಳಲ್ಲಿ ಪದವಿ ಅಪ್ರೆಂಟಿಸ್ ಟ್ರೈನಿ ೪೬ ಹುದ್ದೆಗಳು, ಡಿಪ್ಲೊಮಾ ಅಪ್ರೆಂಟಿಸ್ ಟ್ರೈನಿ ೧೫ ಹುದ್ದೆಗಳು, ವಾಣಿಜ್ಯ ಅಭ್ಯಾಸದಲ್ಲಿ ಡಿಪ್ಲೊಮಾ ೫ ಹುದ್ದೆಗಳು ಮತ್ತು ಟ್ರೇಡ್ ಐಟಿಐ ೯ ಹುದ್ದೆಗಳು ಸೇರಿವೆ.

ಅರ್ಹತಾ ಮಾನದಂಡಗಳು: ಪದವಿ ಅಪ್ರೆಂಟಿಸ್‌ಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿಇ ಅಥವಾ ಬಿ.ಟೆಕ್ ಪದವಿ ಪಡೆದಿರಬೇಕು. ಡಿಪ್ಲೊಮಾ ಅಪ್ರೆಂಟಿಸ್ ಗಾಗಿ ಅರ್ಜಿದಾರರು ಸಂಬಂಧಿಸಿದ ವಿಭಾಗದಲ್ಲಿ ಡಿಪ್ಲೊಮಾ ಪಡೆದಿರಬೇಕು. ಟ್ರೇಡ್ ಐಟಿಐ ಅಪ್ರೆಂಟಿಸ್‌ಗಾಗಿ ಅಭ್ಯರ್ಥಿಯು ಸಂಬಂಧಿಸಿದ ಟ್ರೇಡ್‌ನಲ್ಲಿ ಐಟಿಐ ಪ್ರಮಾಣಪತ್ರವನ್ನು ಹೊಂದಿರಬೇಕು. ೨೦೨೨, ೨೦೨೩ ಮತ್ತು ೨೦೨೪ನೇ ಸಾಲಿನಲ್ಲಿ ಉತ್ತೀರ್ಣರಾದವರು ಮಾತ್ರ ಅಪ್ರೆಂಟಿಸ್‌ಶಿಪ್ ಗೆ ಅರ್ಹರು.

ಅರ್ಜಿ ಸಲ್ಲಿಸುವುದು ಹೇಗೆ?

■ nats.edcucation.gov.in  ಗೆ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ.

■ ಇಲ್ಲಿ ವಿವರಗಳನ್ನು ನಮೂದಿಸುವ ಮೂಲಕ ನೋಂದಾಯಿಸಿ.

■ ಈಗ ಇಸ್ರೋ ಅಪ್ರೆಂಟಿಸ್ ಲಿಂಕ್ ಮೇಲೆ ಕ್ಲಿಕ್ ಮಾಡಿ.

■ ಅರ್ಜಿ ನಮೂನೆಯನ್ನು ಭರ್ತಿ ಮಾಡಿ,

■ ದಾಖಲೆಗಳನ್ನು ಅಪ್‌ಲೋಡ್ ಮಾಡಿ ಮತ್ತು ಸಲ್ಲಿಸಿ.

ಆಂದೋಲನ ಡೆಸ್ಕ್

Recent Posts

ಕೊಡಗು ಜಿಲ್ಲೆಯಲ್ಲಿ ಮನೆ ಗಣತಿ ಕಾರ್ಯ ಚುರುಕು

ನವೀನ್ ಡಿಸೋಜ ಜಿಲ್ಲೆಯಲ್ಲಿ ಸು.೧೭೪,೧೧೪ ಕುಟುಂಬಗಳು, ಗಣತಿ ಕಾರ್ಯಕ್ಕೆ ಗುರುತು, ೭,೩೭೯ ಕುಟುಂಬಗಳಿಂದ ಸ್ವಯಂ ಗಣತಿ ಮಡಿಕೇರಿ: ನಮ್ಮ ಗಣತಿ,…

56 mins ago

ಏರುತ್ತಿರುವ ತಾಪಮಾನ; ತಂಪು ಪಾನೀಯಗಳಿಗೆ ಮೊರೆ

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆಯಲ್ಲಿ ೩೫ರಿಂದ ೪೦ ಡಿಗ್ರಿ ಉಷ್ಣಾಂಶ, ಬಿಸಿಗಾಳಿಗೆ ಹೈರಾಣಾದ ಜನರು ಗುಂಡ್ಲುಪೇಟೆ: ಬೇಸಿಗೆಯ ಬಿಸಿಲಿನ ತಾಪ ದಿನೇದಿನೇ…

1 hour ago

ಆಗ ಟೈಲರ್ ಕಾಲ, ಈಗ ಆನ್ ಲೈನ್ ಕಾಲ…

ಮಧುಕರ ಮಳವಳ್ಳಿ (ಈ ಲೇಖನಕ್ಕೆ ಕೃತಕ ಬುದ್ಧಿಮತ್ತೆಯ ಚಿತ್ರ ಬಳಸಲಾಗಿದೆ) ಹಬ್ಬಕ್ಕೆ ಯಾರಿಗೆ ತಾನೆ ಹೊಸ ಬಟ್ಟೆ ಇಷ್ಟ ಇಲ್ಲ…

1 hour ago

ಸೈಕಲ್ಲು, ಸಿರೀಂದ್ರ ಮತ್ತು ನನ್ನ ನಟರಾಜ ಸರ್ವೀಸು

ಭಾರತಿ ಬಿ.ವಿ. ಅವನೆದುರು ಮಾನ ತೆಗೆದ ಸೈಕಲ್ಲಿನ ಸಹವಾಸ ನನಗೆ ಮತ್ತೆ ಬೇಕೆನ್ನಿಸಲಿಲ್ಲ ನಾವೆಲ್ಲ ‘ನಟರಾಜ ಸರ್ವೀಸ್’ನಲ್ಲೇ ಬದುಕು ಕಳೆದವರು.…

1 hour ago

ತರುಣ ತಲೆಮಾರಿನ ಕೈಯಲ್ಲಿ ನೆರೆಯ ನೇಪಾಳದ ಚುಕ್ಕಾಣಿ…

ಶುಭಾ ಖಟಾವಕರ ಮ್ಹೆತ್ರಸ್ ನೇಪಾಳದ ಕನಸುಗಣ್ಣಿನ ಯುವಜನಾಂಗದ ಈ ಹೊಸ ಸರ್ಕಾರ ಈಗ ಇಟ್ಟಿರುವ ಹೆಜ್ಜೆಗಳು ಯಶಸ್ವಿಯಾದರೆ ದಕ್ಷಿಣ ಏಷ್ಯಾದಲ್ಲಿ…

1 hour ago

ದೇವನೂರಿಗೆ ಆಗಮಿಸಿದ ಪಂಪ

ಪಂಪ ಪ್ರಶಸ್ತಿ ಪಡೆಯುತ್ತಿರುವ ಮಹಾದೇವರಿಗೆ ಎಲ್ಲಾ ಮನೆಗಳ ಜೋತಮ್ಮದೀರು ಹರಸಲಿ ರಾಜೇಂದ್ರ ಚೆನ್ನಿ ೧ ತಮ್ಮ ಒಟ್ಟು ಬರಹಗಳು ಇಷ್ಟು ಕಡಿಮೆ…

1 hour ago