ಬ್ಯಾಂಕ್ ಆಫ್ ಬರೋಡಾ 500 ಆಫೀಸ್ ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಮೇ 23 ರವರೆಗೆ ಆನ್‌ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು. ಹತ್ತನೇ ತರಗತಿ ಪಾಸಾಗಿರುವ ಮತ್ತು ಸ್ಥಳೀಯ ಭಾಷೆಯ ಜ್ಞಾನ ಹೊಂದಿರುವ ಅಭ್ಯರ್ಥಿ ಗಳು ಅರ್ಜಿ ಸಲ್ಲಿಸಬಹುದು. ವಯೋಮಿತಿ ೧೮ ರಿಂದ 26 ವರ್ಷಗಳು. ಆನ್ ಲೈನ್ ಪರೀಕ್ಷೆ ಮತ್ತು ಸ್ಥಳೀಯ ಭಾಷಾ ಪರೀಕ್ಷೆಗಳ ಮೂಲಕ ನೇಮಕಾತಿ ನಡೆಯಲಿದೆ. ಅಭ್ಯರ್ಥಿಗಳು bank ofbaroda.in ವೆಬ್‌ಸೈಟ್‌ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಅರ್ಜಿದಾರರು ಕನಿಷ್ಠ ಹತ್ತನೇ ತರಗತಿ ಉತ್ತೀರ್ಣರಾಗಿರಬೇಕು. ಜೊತೆಗೆ ಅರ್ಜಿದಾರರು ತಾವು ಅರ್ಜಿ ಸಲ್ಲಿಸುತ್ತಿರುವ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶದ ಸ್ಥಳೀಯ ಭಾಷೆಯನ್ನು ಓದುವುದು, ಬರೆಯುವುದು, ಮಾತನಾಡುವ ಜ್ಞಾನವನ್ನು ಹೊಂದಿರಬೇಕು.
ನೇಮಕಾತಿ ಪ್ರಕ್ರಿಯೆಯು ಎರಡು ಹಂತಗಳಲ್ಲಿ ನಡೆಯಲಿದ್ದು, ಮೊದಲ ಹಂತದಲ್ಲಿ ಅಭ್ಯರ್ಥಿಗಳು ಆನ್‌ಲೈನ್ ಪರೀಕ್ಷೆಯನ್ನು ಎದುರಿಸಬೇಕಾಗುತ್ತದೆ. ಇದು ವಿವಿಧ ವಿಷಯಗಳ ಪ್ರಶ್ನೆಗಳನ್ನು ಒಳಗೊಂಡಿರುತ್ತದೆ ಮತ್ತು ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ನಿಗದಿತ ಕನಿಷ್ಠ ಅಂಕಗಳನ್ನು ಪಡೆಯಬೇಕಾಗುತ್ತದೆ. ಎರಡನೇ ಹಂತದಲ್ಲಿ ಮೊದಲ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳು ಸ್ಥಳೀಯ ಭಾಷೆಯಲ್ಲಿ ಪರೀಕ್ಷೆಯನ್ನು ತೆಗೆದುಕೊಳ್ಳ ಬೇಕಾಗುತ್ತದೆ. ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ವರ್ಗಗಳಿಗೆ ಅನುಗುಣವಾಗಿ ಶುಲ್ಕ ಪಾವತಿಸ ಬೇಕಿದೆ. ಸಾಮಾನ್ಯ, ಹಿಂದುಳಿದ ವರ್ಗಗಳು, ಇಡಬ್ಲ್ಯುಎಸ್ ವರ್ಗದ ಜನರು600ರೂ. ಶುಲ್ಕ ಪಾವತಿಸಬೇಕಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ, ಮಹಿಳೆಯರು, ವಿಶೇಷಚೇತನರು, ಮಾಜಿ ಸೈನಿಕರು 100 ರೂ. ಶುಲ್ಕ ಪಾವತಿಸಬೇಕಾಗುತ್ತದೆ.





