ಯುವ ಡಾಟ್ ಕಾಂ

500 ಆಫೀಸ್ ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಬ್ಯಾಂಕ್ ಆಫ್ ಬರೋಡಾ 500 ಆಫೀಸ್ ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಮೇ 23 ರವರೆಗೆ ಆನ್‌ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು. ಹತ್ತನೇ ತರಗತಿ ಪಾಸಾಗಿರುವ ಮತ್ತು ಸ್ಥಳೀಯ ಭಾಷೆಯ ಜ್ಞಾನ ಹೊಂದಿರುವ ಅಭ್ಯರ್ಥಿ ಗಳು ಅರ್ಜಿ ಸಲ್ಲಿಸಬಹುದು. ವಯೋಮಿತಿ ೧೮ ರಿಂದ 26 ವರ್ಷಗಳು. ಆನ್ ಲೈನ್ ಪರೀಕ್ಷೆ ಮತ್ತು ಸ್ಥಳೀಯ ಭಾಷಾ ಪರೀಕ್ಷೆಗಳ ಮೂಲಕ ನೇಮಕಾತಿ ನಡೆಯಲಿದೆ. ಅಭ್ಯರ್ಥಿಗಳು bank ofbaroda.in ವೆಬ್‌ಸೈಟ್‌ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಅರ್ಜಿದಾರರು ಕನಿಷ್ಠ ಹತ್ತನೇ ತರಗತಿ ಉತ್ತೀರ್ಣರಾಗಿರಬೇಕು. ಜೊತೆಗೆ ಅರ್ಜಿದಾರರು ತಾವು ಅರ್ಜಿ ಸಲ್ಲಿಸುತ್ತಿರುವ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶದ ಸ್ಥಳೀಯ ಭಾಷೆಯನ್ನು ಓದುವುದು, ಬರೆಯುವುದು, ಮಾತನಾಡುವ ಜ್ಞಾನವನ್ನು ಹೊಂದಿರಬೇಕು.

ನೇಮಕಾತಿ ಪ್ರಕ್ರಿಯೆಯು ಎರಡು ಹಂತಗಳಲ್ಲಿ ನಡೆಯಲಿದ್ದು, ಮೊದಲ ಹಂತದಲ್ಲಿ ಅಭ್ಯರ್ಥಿಗಳು ಆನ್‌ಲೈನ್ ಪರೀಕ್ಷೆಯನ್ನು ಎದುರಿಸಬೇಕಾಗುತ್ತದೆ. ಇದು ವಿವಿಧ ವಿಷಯಗಳ ಪ್ರಶ್ನೆಗಳನ್ನು ಒಳಗೊಂಡಿರುತ್ತದೆ ಮತ್ತು ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ನಿಗದಿತ ಕನಿಷ್ಠ ಅಂಕಗಳನ್ನು ಪಡೆಯಬೇಕಾಗುತ್ತದೆ. ಎರಡನೇ ಹಂತದಲ್ಲಿ ಮೊದಲ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳು ಸ್ಥಳೀಯ ಭಾಷೆಯಲ್ಲಿ ಪರೀಕ್ಷೆಯನ್ನು ತೆಗೆದುಕೊಳ್ಳ ಬೇಕಾಗುತ್ತದೆ. ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ವರ್ಗಗಳಿಗೆ ಅನುಗುಣವಾಗಿ ಶುಲ್ಕ ಪಾವತಿಸ ಬೇಕಿದೆ. ಸಾಮಾನ್ಯ, ಹಿಂದುಳಿದ ವರ್ಗಗಳು, ಇಡಬ್ಲ್ಯುಎಸ್ ವರ್ಗದ ಜನರು600ರೂ. ಶುಲ್ಕ ಪಾವತಿಸಬೇಕಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ, ಮಹಿಳೆಯರು, ವಿಶೇಷಚೇತನರು, ಮಾಜಿ ಸೈನಿಕರು 100 ರೂ. ಶುಲ್ಕ ಪಾವತಿಸಬೇಕಾಗುತ್ತದೆ.

ಆಂದೋಲನ ಡೆಸ್ಕ್

Recent Posts

ಕೊಪ್ಪಳದ ಗವಿಸಿದ್ದೇಶ್ವರ ಸ್ವಾಮಿಗಳಿಂದ ಈ ಬಾರಿ ದಸರಾ ಉದ್ಘಾಟನೆ

ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…

10 hours ago

ಕಾಡಾನೆ ದಾಳಿಗೆ 75 ತೆಂಗಿನ ಮರ ನಾಶ: ಬೆಳೆ ಪರಿಹಾರಕ್ಕೆ ರೈತ ಕುಟುಂಬದ ಮನವಿ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…

16 hours ago

ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ

ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…

16 hours ago

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್ ನೀಡಿದ ಸುಪ್ರೀಂಕೋರ್ಟ್‌

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್‌ ಸೂಚನೆ ನೀಡಿದೆ.…

17 hours ago

ಕೋಟೆ ಟಿಎಪಿಸಿಎಂಎಸ್: ನಾಳೆ ಮೈತ್ರಿ ಪಕ್ಷದ 8 ಸದಸ್ಯರ ರಾಜೀನಾಮೆ ಭವಿಷ್ಯ ನಿರ್ಧಾರ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…

18 hours ago