ಯುವ ಡಾಟ್ ಕಾಂ

ರೈಲು ನಿಲ್ದಾಣಗಳಲ್ಲಿ ಉಚಿತ ವೈರ್ ವೈಫೈ

ಡಿಜಿಟಲ್ ಇಂಡಿಯಾ ಹೆಸರಿನಲ್ಲಿ ರೈಲ್ವೆ ನಿಲ್ದಾಣಗಳಲ್ಲಿ ಈಗಾಗಲೇ ಉಚಿತ ವೈಫೈ ಸೌಲಭ್ಯ ಒದಗಿಸುತ್ತಿರುವ ಭಾರತ ಸರ್ಕಾರ, ಈಗ ಅದನ್ನು ಇನ್ನಷ್ಟು ವೇಗಗೊಳಿಸುವ ಮೂಲಕ ದೇಶದ ರೈಲು ಪ್ರಯಾಣಿಕರಿಗೆ ಮತ್ತೊಂದು ಸಿಹಿ ಸುದ್ದಿ ನೀಡಿದೆ.

ಪ್ರಯಾಣಿಕರು ರೈಲ್ವೆ ನಿಲ್ದಾಣಗಳಲ್ಲಿ ಲಭ್ಯವಿರುವ ಉಚಿತ ವೈಫೈಗೆ ಸಂಪರ್ಕ ಸಾಧಿಸುವ ಮೂಲಕ ಹೈ ಸ್ಪೀಡ್ ಇಂಟರ್‌ನೆಟ್ ಪಡೆಯಬಹುದು. ಈ ವೈಫೈ ಬಳಸಿ ಪ್ರಯಾಣಿಕರು ತಮಗೆಬೇಕಾದ ಎಲ್ಲಾ ಚಲನಚಿತ್ರಗಳು, ಗೇಮ್ಸ್, ಹಾಡುಗಳನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು. ಕ್ರಿಕೆಟ್ ಪಂದ್ಯವನ್ನು ಕೂಡ ಆನ್ ಲೈನ್‌ನಲ್ಲಿ ಲೈವ್ ಆಗಿ ವೀಕ್ಷಿಸಬಹುದು.

ಸಂಸತ್ ಅಧಿವೇಶನದಲ್ಲಿ ರಾಜ್ಯಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಈ ವಿಷಯ ಬಹಿರಂಗಪಡಿಸಿರುವ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್, ಇನ್ನು ಮುಂದೆ ದೇಶಾದ್ಯಂತ ಸುಮಾರು ೬,೧೧೫ ರೈಲ್ವೆ ನಿಲ್ದಾಣಗಳಲ್ಲಿ ಪ್ರಯಾಣಿಕರಿಗೆ ಅತ್ಯಂತ ವೇಗದ ಹೈಸ್ಪೀಡ್ ವೈಫೈ ಸೌಲಭ್ಯ ದೊರೆಯಲಿದೆ ಎಂದು ಹೇಳಿದ್ದಾರೆ.

ಉಚಿತ ವೈಫೈ ಪಡೆಯುವುದು ಹೇಗೆ: ಮೊದಲು ನಿಮ್ಮ ಸ್ಮಾರ್ಟ್ ಫೋನ್‌ಗಳಲ್ಲಿ ವೈಫೈ ಮೋಡ್ ಅನ್ನು ಆನ್ ಮಾಡಿ, ನೀವು ವೈಫೈ ಆಯ್ಕೆಯ ಮೇಲೆ ಕ್ಲಿಕ್ ಮಾಡಿದರೆ, ಅಲ್ಲಿ ನಿಮಗೆ ರೈಲ್‌ವೈರ್ ವೈಫೈ ನೆಟ್‌ವರ್ಕ್ ಕಾಣಿಸುತ್ತದೆ. ಅದನ್ನು ಆಯ್ಕೆ ಮಾಡಿಕೊಳ್ಳಿ. ಅದರ ಮೇಲೆ ಕ್ಲಿಕ್ ಮಾಡಿದ ನಂತರ ನಿಮ್ಮ ಮೊಬೈಲ್ ಸಂಖ್ಯೆಯೊಂದಿಗೆ ನೋಂದಾಯಿಸಿಕೊಳ್ಳಲು ಕೇಳುತ್ತದೆ.

ಅಲ್ಲಿ ನಿಮ್ಮ ಮೊಬೈಲ್ ಫೋನ್ ಸಂಖ್ಯೆಯನ್ನು ನಮೂದಿಸಿದಾಗ ನಿಮ್ಮ ಮೊಬೈಲ್ಗೆ ಬರುವ ಒಟಿಪಿಯ ಆರು ಅಂಕಿಗಳನ್ನು ನಮೂದಿಸಿದ ಕೂಡಲೇ ನೀವು ಹೈಸ್ಪೀಡ್ ಉಚಿತ ವೈಫೈಗೆ ಸಂಪರ್ಕ ಸಾಧ್ಯವಾಗುತ್ತದೆ.

ಆಂದೋಲನ ಡೆಸ್ಕ್

Recent Posts

ಹನೂರು| ಕಾಡಾನೆ ದಾಳಿ: ಆಟೋ ಜಖಂ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಂಚಾಪುರ ಗ್ರಾಮದಿಂದ ಒಡೆಯರ ಪಾಳ್ಯ ಗ್ರಾಮಕ್ಕೆ ವ್ಯಾಪಾರ ಮಾಡಲು…

11 mins ago

ಪಶ್ಚಿಮ ಏಷ್ಯಾದಲ್ಲಿ ಹೆಚ್ಚಾದ ಉದ್ವಿಗ್ನತೆ: ಮನ್‌ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ ಹೇಳಿದ್ದಿಷ್ಟು.!

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವಂತೆ ಭಾರತೀಯ ನಾಗರಿಕರು ಒಗ್ಗಟ್ಟಾಗಿರುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಪ್ರಧಾನಿ ನರೇಂದ್ರ…

27 mins ago

ಆರೋಗ್ಯ ಕೇಂದ್ರದ ಮುಂಭಾಗವೇ ವಾಹನಗಳ ಪಾರ್ಕಿಂಗ್:‌ ಸಾರ್ವಜನಿಕರಿಗೆ ಕಿರಿಕಿರಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ಪ್ರಾಥಮಿಕ ಆರೋಗ್ಯ ಕೇಂದ್ರದ…

39 mins ago

ಹನೂರು: ಸಮರ್ಪಕ ಕುಡಿಯುವ ನೀರು ಪೂರೈಸುವಂತೆ ನಿವಾಸಿಗಳಿಂದ ಪ್ರತಿಭಟನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಹೂಗ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭೋವಿ ಸಮುದಾಯದ ಕಾಲೋನಿಗೆ…

46 mins ago

ನ್ಯಾಯ ವಿತರಣೆಯಲ್ಲಿ ಪೊಲೀಸರು ರಾಜಿಯಾಗಬಾರದು: ಸಿಎಂ ಸಿದ್ದರಾಮಯ್ಯ

ಮೈಸೂರು: ನ್ಯಾಯ ವಿತರಣೆಯಲ್ಲಿ ಪೊಲೀಸರು ರಾಜಿಯಾಗಬಾರದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರು ಘಟಕದ 46ನೇ ತಂಡದ ಸಿವಿಲ್‌ ಪೊಲೀಸ್‌…

1 hour ago

ಅಮೇರಿಕಾದಲ್ಲಿ ಡೊನಾಲ್ಡ್‌ ಟ್ರಂಪ್‌ ವಿರುದ್ಧವೇ ಭುಗಿಲೆದ್ದ ಆಕ್ರೋಶ

ಅಮೇರಿಕಾದಲ್ಲಿ ಡೊನಾಲ್ಡ್‌ ಟ್ರಂಪ್‌ ವಿರುದ್ಧವೇ ಭುಗಿಲೆದ್ದ ಆಕ್ರೋಶ 80 ಲಕ್ಷ ಜನರಿಂದ ನೋ ಕಿಂಗ್ಸ್‌ ಚಳುವಳಿ ಟ್ರಂಪ್‌ ನೀತಿ ವಿರೋಧಿಸಿ…

2 hours ago