ಯುವ ಡಾಟ್ ಕಾಂ

ಇಲ್ಲೊಬ್ಬ ಪರೋಪಕಾರಿ ತರುಣ ಪೊಲೀಸ್‌

 

ಪೊಲೀಸ್‌ ಎಂದರೆ ಸಾರ್ವಜನಿಕರಲ್ಲಿ ಏನೋ ಒಂದು ಭಯ. ಅವರ ಸಹವಾಸ ನಮಗೇಕೆ ಎನ್ನುವವರೇ ಹೆಚ್ಚು. ಪೊಲೀಸ್‌ ಎಂದರೆ ಕೈಯಲ್ಲಿ ಲಾಠಿ ಹಿಡಿದುಕೊಂಡು ತಪ್ಪಿತಸ್ಥರನ್ನು ಎಚ್ಚರಿಸುವ ಕೆಲಸ ಮಾಡುವವರು ಎಂಬ ಮನೋಭಾವನೆ ಇದೆ. ಆದರೆ ಪೊಲೀಸ್ ಎಂದರೆ ಭಯವಲ್ಲ ಅವರು ಭರವಸೆ ಎಂಬುದನ್ನು ತಮ ಸಮಾಜಮುಖಿ ಕಾರ್ಯಗಳಿಂದ ತೋರಿಸಿಕೊಟ್ಟಿದ್ದಾರೆ ಯುವ ಪೊಲೀಸ್ ಸಿಬ್ಬಂದಿ ಎಸ್.ಎಸ್.ಗೋವಿಂದರಾಜು.

ಗೋವಿಂದರಾಜು ಸರಗೂರು ತಾಲ್ಲೂಕಿನ ಸಾಗರ ಗ್ರಾಮದ ನಾರಾಯಣಚಾರ್ ಮತ್ತು ನಾಗಮಣಿ ದಂಪತಿಗಳ ಪುತ್ರ, ಮೈಸೂರು ಜಿಲ್ಲಾ ವ್ಯಾಪ್ತಿಯ 112 ಪೊಲೀಸ್‌ ಸಹಾಯವಾಣಿ ವಾಹನದ ಸಿಬ್ಬಂದಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇವರು ತಮ್ಮ ಕರ್ತವ್ಯದ ಜೊತೆ ಜೊತೆಗೆ ಸಮಾಜಮುಖಿ ಕೆಲಸ ಕಾರ್ಯಗಳಿಂದ ಮತ್ತು ಮೂಲ ಸೌಕರ್ಯದಿಂದ ವಂಚಿತರಾದ ಅದಿವಾಸಿ ಸಮುದಾಯದವರ ಬಗ್ಗೆ ಕಾಳಜಿ ವಹಿಸುತ್ತಾ ಜನಸ್ನೇಹಿಯಾಗಿಯೂ ಕರ್ತವ್ಯ ನಿರ್ವಹಿಸಬಹುದು ಎಂಬುದನ್ನು ತೋರಿಸಿಕೊಡುವ ಮೂಲಕ ಯುವ ಪೊಲೀಸ್ ಸಿಬ್ಬಂದಿಗಳಿಗೆ ಮಾದರಿಯಾಗಿದ್ದಾರೆ.

ಇತ್ತೀಚೆಗಷ್ಟೇ ತಾಲ್ಲೂಕಿನ ಎನ್.ಬೇಗೂರು ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಹದಗೆಟ್ಟು ಗುಂಡಿಗಳು ನಿರ್ಮಾಣವಾಗಿದ್ದವು. ಈ ವೇಳೆ ಗೋವಿಂದರಾಜು ಅವರು ಆ ಭಾಗದ ಪಂಚಾಯಿತಿ ಸದಸ್ಯರು ಹಾಗೂ ಗ್ರಾಮಸ್ಥರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಾರ್ವಜನಿಕ ಶ್ರಮದಾನದ ಮೂಲಕ ರಸ್ತೆಯನ್ನು ದುರಸ್ತಿ ಪಡಿಸುವ ಮೂಲಕ ಸಾರ್ವಜನಿಕ ವಲಯದ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಗೋವಿಂದರಾಜು 112 ಪೊಲೀಸ್ ಸಹಾಯವಾಣಿ ವಾಹನದ ಸಿಬ್ಬಂದಿಯಾಗಿದ್ದು ಅವರು ಕರ್ತವ್ಯ ನಿರ್ವಹಿಸುವಾಗ ಯಾವುದೇ ಅಪಘಾತಗಳು ಸಂಭವಿಸಿದಾಗ ಕೂಡಲೇ ಸ್ಥಳಕ್ಕೆ ಆಗಮಿಸಿ ಗಾಯಾಳು ಗಳನ್ನು ಆಸ್ಪತ್ರೆಗೆ ಸಾಗಿಸುವ ಮೂಲಕ ಸಾಕಷ್ಟು ಜೀವಗಳನ್ನು ಉಳಿಸಿದ್ದಾರೆ. ತಮ್ಮ ಈ ಸೇವಾ ಮನೋಭಾವನೆಯಿಂದಲೇ ಇಂದು ಗೋವಿಂದರಾಜು ತಾಲ್ಲೂಕಿನ ಮನೆ ಮಾತಾಗಿದ್ದಾರೆ. ಇವರು ಪೊಲೀಸ್‌ ಇಲಾಖೆಗೆ ಸೇರಿದಾಗಿನಿಂದಲೂ ಕರ್ತವ್ಯದಲ್ಲಿ ಬದ್ಧತೆ ಮತ್ತು ಸಾಮಾಜಿಕ ಸೇವಾಕಾರ್ಯಗಳಿಂದಲೇ ತಾಲ್ಲೂಕಿನ ಜನರ ವಿಶ್ವಾಸ ಗಳಿಸಿದ್ದು, ಸಾಕಷ್ಟು ಪ್ರಕರಣದಲ್ಲಿ ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಮತ್ತು ತನಿಖೆಯಲ್ಲಿ ಕೌಶಲವನ್ನು ತೋರಿಸುವ ಮೂಲಕ ಇತರ ಯುವ ಪೊಲೀಸ್ ಸಿಬ್ಬಂದಿಗೆ ಮಾದರಿಯಾಗಿದ್ದಾರೆ.

ಪ್ರಶಾಂತ್‌ ಎಸ್

ಮೈಸೂರಿನವನಾದ ನಾನು ಪದವಿಯಲ್ಲಿ ಪತ್ರಿಕೋದ್ಯಮ ‌ಮಾಡಿದ್ದು 2015ರಿಂದ ನ್ಯೂಸ್ 1 ಕನ್ನಡದಿಂದ(ಟಿವಿ) ಪ್ರಾರಂಭಿಸಿ ,ಯಶ್ ಟೆಲ್ (ಟಿವಿ) ಇಂಡಿಯನ್ (ಟಿ ವಿ) ಪ್ರಜಾನುಡಿ ಪತ್ರಿಕೆ, ಪ್ರತಿನಿಧಿ ಪತ್ರಿಕೆ ಸಂಸ್ಥೆಯಲ್ಲಿ ವರದಿಗಾರನಾಗಿ ಕೆಲಸ ನಿರ್ವಹಿಸಿದ್ದೇನೆ. ಕಳೆದ ಎರಡು ವರ್ಷಗಳಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ನನಗೆ ಹಾಡುಗಳನ್ನು ಕೇಳುವುದು, ಅರಣ್ಯಗಳನ್ನು ಸುತ್ತುವುದು ಹಾಗೂ ಅರ್ಥಶಾಸ್ತ್ರದ ಕಡೆ ಹೆಚ್ಚು ಒಲವು ಇದ್ದು ಪತ್ರಿಕಾ ರಂಗದಲ್ಲಿ ಅರಣ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿದ್ದೇನೆ.

Recent Posts

ಹನೂರು| ಕಾಡಾನೆ ದಾಳಿ: ಆಟೋ ಜಖಂ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಂಚಾಪುರ ಗ್ರಾಮದಿಂದ ಒಡೆಯರ ಪಾಳ್ಯ ಗ್ರಾಮಕ್ಕೆ ವ್ಯಾಪಾರ ಮಾಡಲು…

1 hour ago

ಪಶ್ಚಿಮ ಏಷ್ಯಾದಲ್ಲಿ ಹೆಚ್ಚಾದ ಉದ್ವಿಗ್ನತೆ: ಮನ್‌ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ ಹೇಳಿದ್ದಿಷ್ಟು.!

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವಂತೆ ಭಾರತೀಯ ನಾಗರಿಕರು ಒಗ್ಗಟ್ಟಾಗಿರುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಪ್ರಧಾನಿ ನರೇಂದ್ರ…

1 hour ago

ಆರೋಗ್ಯ ಕೇಂದ್ರದ ಮುಂಭಾಗವೇ ವಾಹನಗಳ ಪಾರ್ಕಿಂಗ್:‌ ಸಾರ್ವಜನಿಕರಿಗೆ ಕಿರಿಕಿರಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ಪ್ರಾಥಮಿಕ ಆರೋಗ್ಯ ಕೇಂದ್ರದ…

2 hours ago

ಹನೂರು: ಸಮರ್ಪಕ ಕುಡಿಯುವ ನೀರು ಪೂರೈಸುವಂತೆ ನಿವಾಸಿಗಳಿಂದ ಪ್ರತಿಭಟನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಹೂಗ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭೋವಿ ಸಮುದಾಯದ ಕಾಲೋನಿಗೆ…

2 hours ago

ನ್ಯಾಯ ವಿತರಣೆಯಲ್ಲಿ ಪೊಲೀಸರು ರಾಜಿಯಾಗಬಾರದು: ಸಿಎಂ ಸಿದ್ದರಾಮಯ್ಯ

ಮೈಸೂರು: ನ್ಯಾಯ ವಿತರಣೆಯಲ್ಲಿ ಪೊಲೀಸರು ರಾಜಿಯಾಗಬಾರದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರು ಘಟಕದ 46ನೇ ತಂಡದ ಸಿವಿಲ್‌ ಪೊಲೀಸ್‌…

2 hours ago

ಅಮೇರಿಕಾದಲ್ಲಿ ಡೊನಾಲ್ಡ್‌ ಟ್ರಂಪ್‌ ವಿರುದ್ಧವೇ ಭುಗಿಲೆದ್ದ ಆಕ್ರೋಶ

ಅಮೇರಿಕಾದಲ್ಲಿ ಡೊನಾಲ್ಡ್‌ ಟ್ರಂಪ್‌ ವಿರುದ್ಧವೇ ಭುಗಿಲೆದ್ದ ಆಕ್ರೋಶ 80 ಲಕ್ಷ ಜನರಿಂದ ನೋ ಕಿಂಗ್ಸ್‌ ಚಳುವಳಿ ಟ್ರಂಪ್‌ ನೀತಿ ವಿರೋಧಿಸಿ…

3 hours ago