ಕಬಡ್ಡಿ ಕ್ರೀಡೆಯಲ್ಲಿ ತೊಡಗಿಸಿಕೊಂಡಿದ್ದ ನಿವೃತ್ತ ಪೊಲೀಸ್ ಅಧಿಕಾರಿಯ ಮಗಳೊಬ್ಬಳು ತನ್ನ ವ್ಯಕ್ತಿತ್ವ ಹಾಗೂ ಪ್ರತಿಭೆಯನ್ನು ವೈಯಕ್ತಿಕವಾಗಿ ರೂಪಿಸಿಕೊಳ್ಳಲು ಕಿಕ್ ಬಾಕ್ಸಿಂಗ್ ಕ್ರೀಡೆಯನ್ನು ಆಯ್ಕೆ ಮಾಡಿಕೊಂಡು ರಾಷ್ಟ್ರೀಯಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿ ಚಿನ್ನ, ಬೆಳ್ಳಿ ಪದಕ ಪಡೆದು ಸಾಧನೆಗೈದಿದ್ದಾರೆ.
ಮೂಲತಃ ಮೈಸೂರಿನ ಸರ್ದಾರ್ ವಲ್ಲಭಭಾಯಿ ಪಟೇಲ್ ನಗರದ ಪೊಲೀಸ್ ಲೇಔಟ್‌ನ ನಿವಾಸಿ ನಿವೃತ್ತ ಎಎಸ್‌ಐ ಕೆ.ಮಹದೇವಯ್ಯ ಮತ್ತು ಎಸ್. ಪುಷ್ಪಕುಮಾರಿ ದಂಪತಿಯ ಪುತ್ರಿ ಎಂ.ಸಹನ ಕಿಕ್ ಬಾಕ್ಸಿಂಗ್‌ನ ಯುವ ತಾರೆಯಾಗಿ ಹೊರ ಹೊಮ್ಮಿದ್ದಾರೆ. ಸಹನಗೆ ಕಿಕ್ ಬಾಕ್ಸಿಂಗ್ ನೆಚ್ಚಿನ ಕ್ರೀಡೆ. 2022ರಿಂದಲೇ ಈ ಕ್ರೀಡೆಯ ಬಗ್ಗೆ ಆಸಕ್ತಿ ಹೊಂದಿದ್ದು, ಅಭ್ಯಾಸ ಮಾಡುತ್ತಿದ್ದಾರೆ. ಶಾಲೆಯ ದಿನಗಳಿಂದಲೇ ಸಹನ ಗುಂಪಿನಲ್ಲಿ ಗುರುತಿಸಿಕೊಳ್ಳದೇ ವೈಯಕ್ತಿಕವಾಗಿ ತನ್ನನ್ನು ತಾನು ಗುರುತಿಸಿಕೊಳ್ಳುವಲ್ಲಿ ಹೆಚ್ಚು ಆಸಕ್ತಿ ಹೊಂದಿದ್ದ ಯುವತಿ. ಹೆಚ್ಚಾಗಿ ಕ್ರೀಡೆಯಲ್ಲಿ ಆಸಕ್ತಿ ಹೊಂದಿದ್ದ ಸಹನ ಕಬಡ್ಡಿ ಸೇರಿದಂತೆ ಗುಂಪು ಕ್ರೀಡೆಗಳಲ್ಲಿ ಗುರುತಿಸಿಕೊಂಡಿದ್ದರು. ಬಳಿಕ ತಮ್ಮ ವೈಯಕ್ತಿಕ ಪ್ರತಿಭೆಯನ್ನು ತೋರಲು ಕಿಕ್ ಬಾಕ್ಸಿಂಗ್ ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡು ಸಾಧನೆಯತ್ತ ಹೆಜ್ಜೆ ಹಾಕಿದ್ದಾರೆ.
ಚಿನ್ನ, ಬೆಳ್ಳಿ ಪದಕಗಳ ವಿಜೇತೆ
ಸಹನ ಅವರು ರಾಷ್ಟ್ರೀಯಮಟ್ಟದ ಕಿಕ್ ಬಾಕ್ಸಿಂಗ್ ಪಂದ್ಯಾವಳಿಯಲ್ಲಿ ಭಾಗವಹಿಸಿ ಚಿನ್ನ, ಬೆಳ್ಳಿ ಪದಕಗಳನ್ನು ಗಳಿಸಿದ್ದಾರೆ. 2023ರ ಮಾ.20ರಿಂದ 22ರವರೆಗೆ ಉತ್ತರ ಪ್ರದೇಶದ ವೀರ್ ಬಹದ್ದೂರ್ ಸಿಂಗ್ ಪೂರ್ವಾಂಚಲ ವಿವಿಯಲ್ಲಿ ನಡೆದ ಅಖಿಲ ಭಾರತ ಅಂತರ ವಿವಿ ಮಹಿಳೆಯರ ಕಿಕ್ ಬಾಕ್ಸಿಂಗ್ ಪಂದ್ಯಾವಳಿಯಲ್ಲಿ ಮೈಸೂರು ವಿವಿಯನ್ನು ಪ್ರತಿನಿಧಿಸಿ ರಾಷ್ಟ್ರೀಯಮಟ್ಟದ 60 ಕೆ.ಜಿ. ವಿಭಾಗದಲ್ಲಿ ಚಿನ್ನದ ಪದಕ ಗಳಿಸಿದ್ದಾರೆ. 2024ರ ಮಾ.5 ರಿಂದ 9ರವರೆಗೆ ಉತ್ತರ ಪ್ರದೇಶದ ಮೀರತ್‌ನ ಸ್ವಾಮಿ ವಿವೇಕಾನಂದ ಸುಭರ್ತಿ ವಿಶ್ವವಿದ್ಯಾನಿಲಯದಲ್ಲಿ ನಡೆದ ಅಖಿಲ ಭಾರತ ಅಂತರ ವಿಶ್ವವಿದ್ಯಾನಿಲಯಗಳ ಕಿಕ್ ಬಾಕ್ಸಿಂಗ್ ಸ್ಪರ್ಧೆಯಲ್ಲಿ ಸಹನ ಅವರು ಮೈಸೂರು ವಿಶ್ವವಿದ್ಯಾನಿಲಯವನ್ನು ಪ್ರತಿನಿಧಿಸಿ ರಾಷ್ಟ್ರೀಯಮಟ್ಟದಲ್ಲಿ -60 ಕೆ.ಜಿ. ವಿಭಾಗದಲ್ಲಿ ಬೆಳ್ಳಿ ಪದಕ ಗಳಿಸಿ ಮಿಂಚಿದ್ದಾರೆ.
ನಿತ್ಯ 4 ಗಂಟೆ ಅಭ್ಯಾಸ
ಸಹನ ಅವರು ತಮ್ಮ ಶಿಕ್ಷಣದ ಜೊತೆಗೆ ಮೈಸೂರಿನ ಯುವರಾಜ ಕಾಲೇಜಿನ ಒಳಾಂಗಣ ಕ್ರೀಡಾಂಗಣದಲ್ಲಿ ಪ್ರತಿನಿತ್ಯ 4 ಗಂಟೆಗಳ ಕಾಲ ಕಿಕ್ ಬಾಕ್ಸಿಂಗ್ ತರಬೇತಿ ಪಡೆಯುತ್ತಿದ್ದಾರೆ. ನಿತ್ಯ ಬೆಳಿಗ್ಗೆ 2 ಗಂಟೆಗಳ ಕಾಲ, ಸಂಜೆ 2 ಗಂಟೆಗಳ ಕಾಲ ಸಹನ ಅವರು ಜಸ್ವಂತ್ ಅವರ ಮಾರ್ಗದರ್ಶನದಲ್ಲಿ ಕಿಕ್ ಬಾಕ್ಸಿಂಗ್ ಅಭ್ಯಾಸ ಮಾಡುತ್ತಿದ್ದಾರೆ. ಜಿಲ್ಲಾ, ವಲಯ ಹಾಗೂ ಅಂತರ ವಿವಿ ಕ್ರೀಡೆಯಲ್ಲಿ ಉತ್ತಮ ಪ್ರದರ್ಶನ ನೀಡುವ ಮೂಲಕ ರಾಜ್ಯಮಟ್ಟ ಕಿಕ್ ಬಾಕ್ಸಿಂಗ್ ಪಂದ್ಯಾವಳಿಗೆ ಎಂಟ್ರಿ ಕೊಟ್ಟಿರುವ ಸಹನ ಅವರು ಹಲವಾರು ಪದಕ ಪಡೆದುಕೊಂಡಿದ್ದಾರೆ. ಶಾಲಾ ದಿನಗಳಲ್ಲಿ ಕಬಡ್ಡಿ ಸ್ಪರ್ಧೆಗಳಲ್ಲಿ ಕೂಡ ಭಾಗವಹಿಸಿ ಹಲವು ಪದಕಗಳನ್ನು ತಮ್ಮದಾಗಿಸಿಕೊಂಡಿದ್ದರು.
ನಾನು ಮೊದಲು ಕಬಡ್ಡಿ ಆಡುತ್ತಿದೆ. ಆವಾಗ ಗುಂಪು ಕ್ರೀಡೆಯಲ್ಲಿ ನನ್ನ ಪ್ರತಿಭೆಯನ್ನು ತೋರಲು ಆಗುತ್ತಿರಲಿಲ್ಲ. ಅದಕ್ಕಾಗಿ ವೈಯಕ್ತಿಕ ಕ್ರೀಡೆಯಾದ ಕಿಕ್ ಬಾಕ್ಸಿಂಗ್ ಅನ್ನು ಆಯ್ಕೆ ಮಾಡಿಕೊಂಡೆ. ಈ ಕ್ರೀಡೆಯಲ್ಲಿ ನನಗೆ ಆಸಕ್ತಿ ಹೆಚ್ಚಾಗಿ ನಿತ್ಯ ತರಬೇತಿ ಪಡೆಯುತ್ತಿದ್ದೇನೆ. ರಾಷ್ಟ್ರೀಯ ಮಟ್ಟದ ಕಿಕ್ ಬಾಕ್ಸಿಂಗ್ ಪಂದ್ಯಾವಳಿಗಳಲ್ಲಿ ಚಿನ್ನ, ಬೆಳ್ಳಿ ಪದಕ ಪಡೆದಿದ್ದು ಖುಷಿ ತಂದಿದೆ. ಈ ಕ್ರೀಡೆಯಲ್ಲಿ ಭಾರತವನ್ನು ಪ್ರತಿನಿಧಿಸುವ ಆಸೆ ನನಗಿದೆ. ಕ್ರೀಡೆಯ ಜೊತೆಗೆ ಐಎಎಸ್ ಮಾಡುವ ಕನಸು ಹೊಂದಿದ್ದೇನೆ.
– ಎಂ.ಸಹನ
ಎಂ.ಕಾಂ. ಓದುತ್ತಿರುವ ಸಹನ
ಪ್ರಾಥಮಿಕ ಶಿಕ್ಷಣವನ್ನು ಮೈಸೂರಿನ ಸಿದ್ದಾರ್ಥನಗರದ ಜಿಎಸ್ ಎಸ್ ಎಸ್ ಶಿಕ್ಷಣ ಸಂಸ್ಥೆಯಲ್ಲಿ, ಪ್ರೌಢ ಶಿಕ್ಷಣವನ್ನು ಚಾಮುಂಡಿಪುರಂನ ಸೇಂಟ್ ಮೇರಿಸ್ ಗರ್ಲ್ಸ್ ಹೈಸ್ಕೂಲ್‌ನಲ್ಲಿ ಕಲಿತಿದ್ದು, ಶ್ರೀ ನಟರಾಜ ಮಹಿಳಾ ಪದವಿಪೂರ್ವ ಕಾಲೇಜಿನಲ್ಲಿ ಪಿಯು ಶಿಕ್ಷಣ ಪೂರೈಸಿ, ಸ್ನಾತಕ ಪದವಿಯನ್ನು (ಬಿ.ಕಾಂ.) ವಿದ್ಯಾ ವಿಕಾಸ ಪ್ರಥಮ ದರ್ಜೆ ಕಾಲೇಜಿನಲ್ಲಿ ಮುಗಿಸಿ, ಟಿಟಿಎಲ್ ಕಾಲೇಜಿನಲ್ಲಿ ಪ್ರಥಮ ವರ್ಷದ ಎಂಕಾಂ ವಾಸ್ಯಂಗ ಮಾಡುತ್ತಿದ್ದಾರೆ.
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…
ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜನವರಿ…
ಮಂಡ್ಯ: ೮೭ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆ ಗುರುವಾರ ಸಂಜೆ ನಗರಕ್ಕೆ…