ಯುವ ಡಾಟ್ ಕಾಂ

ಕಿಕ್ ಬಾಕ್ಸಿಂಗ್‌ನಲ್ಲಿ ಸಹನ ಸಾಧನೆ

ಕಬಡ್ಡಿ ಕ್ರೀಡೆಯಲ್ಲಿ ತೊಡಗಿಸಿಕೊಂಡಿದ್ದ ನಿವೃತ್ತ ಪೊಲೀಸ್ ಅಧಿಕಾರಿಯ ಮಗಳೊಬ್ಬಳು ತನ್ನ ವ್ಯಕ್ತಿತ್ವ ಹಾಗೂ ಪ್ರತಿಭೆಯನ್ನು ವೈಯಕ್ತಿಕವಾಗಿ ರೂಪಿಸಿಕೊಳ್ಳಲು ಕಿಕ್ ಬಾಕ್ಸಿಂಗ್ ಕ್ರೀಡೆಯನ್ನು ಆಯ್ಕೆ ಮಾಡಿಕೊಂಡು ರಾಷ್ಟ್ರೀಯಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿ ಚಿನ್ನ, ಬೆಳ್ಳಿ ಪದಕ ಪಡೆದು ಸಾಧನೆಗೈದಿದ್ದಾರೆ.

ಮೂಲತಃ ಮೈಸೂರಿನ ಸರ್ದಾರ್ ವಲ್ಲಭಭಾಯಿ ಪಟೇಲ್ ನಗರದ ಪೊಲೀಸ್ ಲೇಔಟ್‌ನ ನಿವಾಸಿ ನಿವೃತ್ತ ಎಎಸ್‌ಐ ಕೆ.ಮಹದೇವಯ್ಯ ಮತ್ತು ಎಸ್‌. ಪುಷ್ಪಕುಮಾರಿ ದಂಪತಿಯ ಪುತ್ರಿ ಎಂ.ಸಹನ ಕಿಕ್ ಬಾಕ್ಸಿಂಗ್‌ನ ಯುವ ತಾರೆಯಾಗಿ ಹೊರ ಹೊಮ್ಮಿದ್ದಾರೆ. ಸಹನಗೆ ಕಿಕ್ ಬಾಕ್ಸಿಂಗ್ ನೆಚ್ಚಿನ ಕ್ರೀಡೆ. 2022ರಿಂದಲೇ ಈ ಕ್ರೀಡೆಯ ಬಗ್ಗೆ ಆಸಕ್ತಿ ಹೊಂದಿದ್ದು, ಅಭ್ಯಾಸ ಮಾಡುತ್ತಿದ್ದಾರೆ. ಶಾಲೆಯ ದಿನಗಳಿಂದಲೇ ಸಹನ ಗುಂಪಿನಲ್ಲಿ ಗುರುತಿಸಿಕೊಳ್ಳದೇ ವೈಯಕ್ತಿಕವಾಗಿ ತನ್ನನ್ನು ತಾನು ಗುರುತಿಸಿಕೊಳ್ಳುವಲ್ಲಿ ಹೆಚ್ಚು ಆಸಕ್ತಿ ಹೊಂದಿದ್ದ ಯುವತಿ. ಹೆಚ್ಚಾಗಿ ಕ್ರೀಡೆಯಲ್ಲಿ ಆಸಕ್ತಿ ಹೊಂದಿದ್ದ ಸಹನ ಕಬಡ್ಡಿ ಸೇರಿದಂತೆ ಗುಂಪು ಕ್ರೀಡೆಗಳಲ್ಲಿ ಗುರುತಿಸಿಕೊಂಡಿದ್ದರು. ಬಳಿಕ ತಮ್ಮ ವೈಯಕ್ತಿಕ ಪ್ರತಿಭೆಯನ್ನು ತೋರಲು ಕಿಕ್ ಬಾಕ್ಸಿಂಗ್ ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡು ಸಾಧನೆಯತ್ತ ಹೆಜ್ಜೆ ಹಾಕಿದ್ದಾರೆ.

ಚಿನ್ನ, ಬೆಳ್ಳಿ ಪದಕಗಳ ವಿಜೇತೆ

ಸಹನ ಅವರು ರಾಷ್ಟ್ರೀಯಮಟ್ಟದ ಕಿಕ್ ಬಾಕ್ಸಿಂಗ್ ಪಂದ್ಯಾವಳಿಯಲ್ಲಿ ಭಾಗವಹಿಸಿ ಚಿನ್ನ, ಬೆಳ್ಳಿ ಪದಕಗಳನ್ನು ಗಳಿಸಿದ್ದಾರೆ. 2023ರ ಮಾ.20ರಿಂದ 22ರವರೆಗೆ ಉತ್ತರ ಪ್ರದೇಶದ ವೀರ್ ಬಹದ್ದೂರ್ ಸಿಂಗ್ ಪೂರ್ವಾಂಚಲ ವಿವಿಯಲ್ಲಿ ನಡೆದ ಅಖಿಲ ಭಾರತ ಅಂತರ ವಿವಿ ಮಹಿಳೆಯರ ಕಿಕ್ ಬಾಕ್ಸಿಂಗ್ ಪಂದ್ಯಾವಳಿಯಲ್ಲಿ ಮೈಸೂರು ವಿವಿಯನ್ನು ಪ್ರತಿನಿಧಿಸಿ ರಾಷ್ಟ್ರೀಯಮಟ್ಟದ 60 ಕೆ.ಜಿ. ವಿಭಾಗದಲ್ಲಿ ಚಿನ್ನದ ಪದಕ ಗಳಿಸಿದ್ದಾರೆ. 2024ರ ಮಾ.5 ರಿಂದ 9ರವರೆಗೆ ಉತ್ತರ ಪ್ರದೇಶದ ಮೀರತ್‌ನ ಸ್ವಾಮಿ ವಿವೇಕಾನಂದ ಸುಭರ್ತಿ ವಿಶ್ವವಿದ್ಯಾನಿಲಯದಲ್ಲಿ ನಡೆದ ಅಖಿಲ ಭಾರತ ಅಂತರ ವಿಶ್ವವಿದ್ಯಾನಿಲಯಗಳ ಕಿಕ್ ಬಾಕ್ಸಿಂಗ್ ಸ್ಪರ್ಧೆಯಲ್ಲಿ ಸಹನ ಅವರು ಮೈಸೂರು ವಿಶ್ವವಿದ್ಯಾನಿಲಯವನ್ನು ಪ್ರತಿನಿಧಿಸಿ ರಾಷ್ಟ್ರೀಯಮಟ್ಟದಲ್ಲಿ -60 ಕೆ.ಜಿ. ವಿಭಾಗದಲ್ಲಿ ಬೆಳ್ಳಿ ಪದಕ ಗಳಿಸಿ ಮಿಂಚಿದ್ದಾರೆ.

ನಿತ್ಯ 4 ಗಂಟೆ ಅಭ್ಯಾಸ

ಸಹನ ಅವರು ತಮ್ಮ ಶಿಕ್ಷಣದ ಜೊತೆಗೆ ಮೈಸೂರಿನ ಯುವರಾಜ ಕಾಲೇಜಿನ ಒಳಾಂಗಣ ಕ್ರೀಡಾಂಗಣದಲ್ಲಿ ಪ್ರತಿನಿತ್ಯ 4 ಗಂಟೆಗಳ ಕಾಲ ಕಿಕ್ ಬಾಕ್ಸಿಂಗ್ ತರಬೇತಿ ಪಡೆಯುತ್ತಿದ್ದಾರೆ. ನಿತ್ಯ ಬೆಳಿಗ್ಗೆ 2 ಗಂಟೆಗಳ ಕಾಲ, ಸಂಜೆ 2 ಗಂಟೆಗಳ ಕಾಲ ಸಹನ ಅವರು ಜಸ್ವಂತ್‌ ಅವರ ಮಾರ್ಗದರ್ಶನದಲ್ಲಿ ಕಿಕ್ ಬಾಕ್ಸಿಂಗ್ ಅಭ್ಯಾಸ ಮಾಡುತ್ತಿದ್ದಾರೆ. ಜಿಲ್ಲಾ, ವಲಯ ಹಾಗೂ ಅಂತರ ವಿವಿ ಕ್ರೀಡೆಯಲ್ಲಿ ಉತ್ತಮ ಪ್ರದರ್ಶನ ನೀಡುವ ಮೂಲಕ ರಾಜ್ಯಮಟ್ಟ ಕಿಕ್ ಬಾಕ್ಸಿಂಗ್ ಪಂದ್ಯಾವಳಿಗೆ ಎಂಟ್ರಿ ಕೊಟ್ಟಿರುವ ಸಹನ ಅವರು ಹಲವಾರು ಪದಕ ಪಡೆದುಕೊಂಡಿದ್ದಾರೆ. ಶಾಲಾ ದಿನಗಳಲ್ಲಿ ಕಬಡ್ಡಿ ಸ್ಪರ್ಧೆಗಳಲ್ಲಿ ಕೂಡ ಭಾಗವಹಿಸಿ ಹಲವು ಪದಕಗಳನ್ನು ತಮ್ಮದಾಗಿಸಿಕೊಂಡಿದ್ದರು.

ನಾನು ಮೊದಲು ಕಬಡ್ಡಿ ಆಡುತ್ತಿದೆ. ಆವಾಗ ಗುಂಪು ಕ್ರೀಡೆಯಲ್ಲಿ ನನ್ನ ಪ್ರತಿಭೆಯನ್ನು ತೋರಲು ಆಗುತ್ತಿರಲಿಲ್ಲ. ಅದಕ್ಕಾಗಿ ವೈಯಕ್ತಿಕ ಕ್ರೀಡೆಯಾದ ಕಿಕ್ ಬಾಕ್ಸಿಂಗ್‌ ಅನ್ನು ಆಯ್ಕೆ ಮಾಡಿಕೊಂಡೆ. ಈ ಕ್ರೀಡೆಯಲ್ಲಿ ನನಗೆ ಆಸಕ್ತಿ ಹೆಚ್ಚಾಗಿ ನಿತ್ಯ ತರಬೇತಿ ಪಡೆಯುತ್ತಿದ್ದೇನೆ. ರಾಷ್ಟ್ರೀಯ ಮಟ್ಟದ ಕಿಕ್ ಬಾಕ್ಸಿಂಗ್ ಪಂದ್ಯಾವಳಿಗಳಲ್ಲಿ ಚಿನ್ನ, ಬೆಳ್ಳಿ ಪದಕ ಪಡೆದಿದ್ದು ಖುಷಿ ತಂದಿದೆ. ಈ ಕ್ರೀಡೆಯಲ್ಲಿ ಭಾರತವನ್ನು ಪ್ರತಿನಿಧಿಸುವ ಆಸೆ ನನಗಿದೆ. ಕ್ರೀಡೆಯ ಜೊತೆಗೆ ಐಎಎಸ್‌ ಮಾಡುವ ಕನಸು ಹೊಂದಿದ್ದೇನೆ.
– ಎಂ.ಸಹನ

ಎಂ.ಕಾಂ. ಓದುತ್ತಿರುವ ಸಹನ

ಪ್ರಾಥಮಿಕ ಶಿಕ್ಷಣವನ್ನು ಮೈಸೂರಿನ ಸಿದ್ದಾರ್ಥನಗರದ ಜಿಎಸ್ ಎಸ್ ಎಸ್ ಶಿಕ್ಷಣ ಸಂಸ್ಥೆಯಲ್ಲಿ, ಪ್ರೌಢ ಶಿಕ್ಷಣವನ್ನು ಚಾಮುಂಡಿಪುರಂನ ಸೇಂಟ್ ಮೇರಿಸ್ ಗರ್ಲ್ಸ್ ಹೈಸ್ಕೂಲ್‌ನಲ್ಲಿ ಕಲಿತಿದ್ದು, ಶ್ರೀ ನಟರಾಜ ಮಹಿಳಾ ಪದವಿಪೂರ್ವ ಕಾಲೇಜಿನಲ್ಲಿ ಪಿಯು ಶಿಕ್ಷಣ ಪೂರೈಸಿ, ಸ್ನಾತಕ ಪದವಿಯನ್ನು (ಬಿ.ಕಾಂ.) ವಿದ್ಯಾ ವಿಕಾಸ ಪ್ರಥಮ ದರ್ಜೆ ಕಾಲೇಜಿನಲ್ಲಿ ಮುಗಿಸಿ, ಟಿಟಿಎಲ್ ಕಾಲೇಜಿನಲ್ಲಿ ಪ್ರಥಮ ವರ್ಷದ ಎಂಕಾಂ ವಾಸ್ಯಂಗ ಮಾಡುತ್ತಿದ್ದಾರೆ.

ಜಿ ತಂಗಂ ಗೋಪಿನಾಥಂ

ಮೂಲತಃ ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಗೋಪಿನಾಥಂ ಗ್ರಾಮದವನಾದ ನಾನು ಸದ್ಯ,‌ ಮೈಸೂರಿನಲ್ಲಿ ನೆಲೆಸಿದ್ದೇನೆ. 2019ರಲ್ಲಿ ಮೈಸೂರು ವಿಶ್ವವಿದ್ಯಾನಿಲಯದ ಮಹಾರಾಜ ಕಾಲೇಜಿನಲ್ಲಿ ಬಿಎ ( ಇತಿಹಾಸ, ಐಚ್ಛಿಕ ಕನ್ನಡ, ಪತ್ರಿಕೋದ್ಯಮ ) ಪದವಿಯನ್ನು ಮುಗಿಸಿದ್ದೇನೆ. ನಂತರ 2021ರಲ್ಲಿ‌ ಮೈಸೂರು ವಿಶ್ವವಿದ್ಯಾನಿಲಯದ‌ಲ್ಲಿ ಎಂಎ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ‌ 2 ವರ್ಷಗಳ ‌ಕಾಲ ಅನುಭವ ಪಡೆದುಕೊಂಡಿದ್ದೇನೆ. ವಿಜಯವಾಣಿ ಪತ್ರಿಕೆಯಲ್ಲಿ ಚಾಮರಾಜನಗರ ಜಿಲ್ಲಾ ಸಹಾಯಕ ವರದಿಗಾರನಾಗಿ ಕೆಲಸ ಮಾಡಿದ್ದೇನೆ. ಕಳೆದ 8 ತಿಂಗಳಿಂದ ಮೈಸೂರಿನ ಆಂದೋಲನ‌ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ.

Recent Posts

ಯುಪಿಯಲ್ಲಿ ತಯಾರಾಗುತ್ತಿರುವ ಬ್ರಹ್ಮೋಸ್‌ ಕ್ಷಿಪಣಿಗಳು ಪಾಕ್‌ ನಿದ್ದೆಗೆಡಿಸಿವೆ: ಅಮಿತ್‌ ಶಾ

ಲಕ್ನೋ: ಉತ್ತರ ಪ್ರದೇಶದಲ್ಲಿ ರಕ್ಷಣಾ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ದೊರೆಯುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ.…

14 hours ago

ಪ್ರಜಾಪ್ರಭುತ್ವ ರಕ್ಷಿಸಲು ಗಾಂಧಿ ಜಯಂತಿಯಂದು ಪ್ರತಿಜ್ಞೆ ಮಾಡೋಣ: ಅಭಿಜಿತ್‌ ದೀಪ್ಕೆ

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಕಾಕ್ರೋಚ್ ಜನತಾ ಪಾರ್ಟಿ, ಅಂದರೆ ಸಿಜೆಪಿ ಆಗ್ರಹಿಸಿದೆ. ಸಿಜೆಪಿ…

14 hours ago

ಕೊಡಗು ಜಿಲ್ಲೆಯಲ್ಲಿ ಮುಂದುವರಿದ ಮಳೆ

ಕೊಡಗು: ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 20.89 ಮಿ.ಮೀ. ಮಳೆಯಾಗಿದೆ. ಕಳೆದ…

15 hours ago

ಜನರೊಂದಿಗೆ ಬೆರೆಯುವುದು ಅದ್ಭುತ ಅನುಭವ: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಸೇವಾ ಸಂಕಲ್ಪ ಅಭಿಯಾನದಡಿ ವಾರಣಾಸಿಯಿಂದ ಗುಜರಾತ್‌ನ ವಡನಗರಕ್ಕೆ ತೆರಳುತ್ತಿರುವ ಯುವಕರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಂವಾದ ನಡೆಸಿದರು. ವಿಡಿಯೋ…

15 hours ago

2028ಕ್ಕೂ ಡಿಕೆಶಿ ಸಿಎಂ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ: ಸತೀಶ್ ಜಾರಕಿಹೊಳಿ

ಮೈಸೂರು: 2028ರಲ್ಲೂ ಡಿ.ಕೆ. ಶಿವಕುಮಾರ್ ಅವರೇ ಮುಖ್ಯಮಂತ್ರಿಯಾಗಲಿ. ಅವರ ನೇತೃತ್ವದಲ್ಲೇ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರಲಿ ಎಂದು ಸತೀಶ್…

18 hours ago

ಓದುಗರ ಪತ್ರ: ವಿದ್ಯುತ್ ಕಡಿತ ಮುಂಚಿತವಾಗಿ ಪ್ರಕಟಿಸಿ

ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…

24 hours ago