ಯುವ ಡಾಟ್ ಕಾಂ

ಸ್ಟೇಟ್‌ ಬ್ಯಾಂಕಿನಲ್ಲಿ ಪ್ರೊಬೇಷನರಿ ಹುದ್ದೆಗಳು

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ೫೪೧ ಪ್ರೊಬೇಷನರಿ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ೨೧ ರಿಂದ ೩೦ ವರ್ಷ ವಯೋಮಿತಿಯ ಪದವೀಧರರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಜುಲೈ ೧೪ ಕೊನೆಯ ದಿನಾಂಕವಾಗಿದೆ.

ಆಸಕ್ತ ಅಭ್ಯರ್ಥಿಗಳು sbi.co.in ಗೆ ಭೇಟಿ ನೀಡುವ ಮೂಲಕ ಅಥವಾ ನೇರವಾಗಿ ನೋಂದಣಿ ಪೋರ್ಟಲ್ ibpsonline.ibps.in/sbipomay25 ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯಡಿ ಒಟ್ಟು ೫೪೧ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಇವುಗಳಲ್ಲಿ ೫೦೦ ಹುದ್ದೆಗಳು ನಿಯಮಿತ ವರ್ಗದ ಹುದ್ದೆಗಳಾಗಿವೆ. ೪೧ ಹುದ್ದೆಗಳು ಬ್ಯಾಕ್‌ಲಾಗ್ ಹುದ್ದೆಗಳಾಗಿವೆ.

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದವರೆಗೆ ಅಭ್ಯರ್ಥಿಯ ವಯೋಮಿತಿ ೨೧ ರಿಂದ ೩೦ ವರ್ಷಗಳ ನಡುವೆ ಇರಬೇಕು. ಎಸ್‌ಸಿ, ಎಸ್‌ಟಿ, ಒಬಿಸಿ ಮೀಸಲಾತಿ ವರ್ಗಗಳಿಗೆ ನಿಯಮಾವಳಿ ಪ್ರಕಾರ ವಯೋಮಿತಿ ಸಡಿಲಿಕೆ ಇರಲಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಶುಲ್ಕ ಪಾವತಿಸಬೇಕಾಗುತ್ತದೆ. ಸಾಮಾನ್ಯ, ಒಬಿಸಿ, ಇಡಬ್ಲ್ಯುಎಸ್ ವರ್ಗದವರಿಗೆ ೭೫೦ ರೂ. ಶುಲ್ಕ, ಎಸ್‌ಸಿ, ಎಸ್‌ಟಿ, ಪಿಡ ಬ್ಲ್ಯುಡಿ ವರ್ಗದ ಅಭ್ಯರ್ಥಿಗಳು ಯಾವುದೇ ಶುಲ್ಕ ಪಾವತಿಸಬೇಕಾಗಿಲ್ಲ. ಆನ್‌ಲೈನ್ ಮೋಡ್‌ನಲ್ಲಿ ಶುಲ್ಕ ಪಾವತಿಸಬೇಕು.

ಆಂದೋಲನ ಡೆಸ್ಕ್

Recent Posts

ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ: ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು

ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…

13 seconds ago

ಮಂಡ್ಯ ಭಾಗದ ರೈತರ ಅಭಿವೃದ್ಧಿಗೆ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯದ ಸ್ಥಾಪನೆ: ಎನ್ ಚಲುವರಾಯಸ್ವಾಮಿ

ಮಂಡ್ಯ: ಮಂಡ್ಯ, ಮೈಸೂರು, ಕೊಡಗು, ಚಾಮರಾಜನಗರ ಭಾಗದ ರೈತರನ್ನು ಆರ್ಥಿಕವಾಗಿ ಅಭಿವೃದ್ಧಿ ಮಾಡಲು ಮಂಡ್ಯದ ವಿ.ಸಿಫಾರಂನಲ್ಲಿ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯವನ್ನು…

9 mins ago

ಬಿಜೆಪಿ ಶಾಶ್ವತವಾಗಿ ವಿಪಕ್ಷದಲ್ಲಿರುತ್ತದೆ ಎಂದ ಸಚಿವ ಎಂ.ಬಿ.ಪಾಟೀಲ್‌

ಬೆಂಗಳೂರು: ಆರ್‌.ಅಶೋಕ್‌ ಅವರನ್ನು ವಿಪಕ್ಷ ನಾಯಕನ ಸ್ಥಾನದಿಂದ ಇಳಿಸದೇ ಹೋದರೆ ಬಿಜೆಪಿ ಶಾಶ್ವತವಾಗಿ ವಿಪಕ್ಷದಲ್ಲಿ ಇರುತ್ತದೆ ಎಂದು ಸಚಿವ ಎಂ.ಬಿ.ಪಾಟೀಲ್‌…

23 mins ago

ಭಾರತ-ರಷ್ಯಾ ನಡುವೆ ಹಲವು ಒಪ್ಪಂದಗಳಿಗೆ ಸಹಿ

ನವದೆಹಲಿ: ಭಾರತ-ರಷ್ಯಾ ಉಭಯ ದೇಶಗಳ ನಡುವೆ ನಡೆದ ದ್ವಿಪಕ್ಷೀಯ ಮಾತುಕತೆ ವೇಳೆ ಹಲವಾರು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ. ನವದೆಹಲಿಯ…

48 mins ago

ವಾಚ್‌ ವಿಚಾರವಾಗಿ ಸುಳ್ಳು ಹೇಳಿದ್ದರೆ ಇಂದೇ ರಾಜೀನಾಮೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ನಾನು ನನ್ನ ವಾಚ್ ವಿಚಾರವಾಗಿ ಲೋಕಾಯುಕ್ತ ಸೇರಿದಂತೆ ಎಲ್ಲೆಲ್ಲಿ ಮಾಹಿತಿ ನೀಡಬೇಕೋ, ಎಲ್ಲಾ ನೀಡಿದ್ದೇನೆ. ನಾನು ಈ ವಿಚಾರದಲ್ಲಿ…

52 mins ago

ನನಗೂ ಸಿಎಂ ಆಗಬೇಕು ಎನ್ನುವ ಆಸೆ ಇದೆ: ಸಚಿವ ದಿನೇಶ್‌ ಗುಂಡೂರಾವ್‌

ಮೈಸೂರು: ಪಕ್ಷದಲ್ಲಿ ಎಲ್ಲರಿಗೂ ಸಿಎಂ ಆಗಬೇಕು ಎನ್ನುವ ಆಸೆ ಇದೆ ಎಂದು ಆರೋಗ್ಯ ಇಲಾಖೆ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದರು.…

2 hours ago