ಅನಿಲ್ ಅಂತರಸಂತೆ
ಕ್ರೀಡೆಯಲ್ಲಿ ಏನಾದರೂ ಸಾಧನೆ ಮಾಡಬೇಕು ಎಂಬ ಹಂಬಲ ಮನಸ್ಸಿನಲ್ಲಿದರೆ ಸಾಲದು ಅದಕ್ಕಾಗಿ ಸತತ ಪರಿಶ್ರಮ, ತ್ಯಾಗಗಳನ್ನು ಮಾಡಿದ್ದಾಗ ಮಾತ್ರ ಕ್ರೀಡಾ ಕ್ಷೇತ್ರದಲ್ಲಿ ಸಾಧನೆಯ ಹಾದಿ ಹಿಡಿಯಲು ಸಾಧ್ಯ. ಅದರಲ್ಲಿಯೂ ಇತ್ತೀಚಿನ ಸ್ವರ್ಧಾತ್ಮಕ ಯುಗದಲ್ಲಿ ಕಠಿಣ ಪರಿಶ್ರಮವಿಲ್ಲದೆ ಏನನ್ನೂ ಸಾಧಿಸಲಾಗದು ಎಂಬುದನ್ನು ಅರಿತು ಕ್ರೀಡಾ ಕ್ಷೇತ್ರದಲ್ಲಿ ಶ್ರಮವಹಿಸಿ ಸಾಧನೆಯ ಹಾದಿಯಲ್ಲಿ ಸಾಗುತ್ತಿದ್ವಾರೆ ವೇಗದ ಓಟಗಾರ ಜಿ.ಸಿ.ಗುರುಪ್ರಸಾದ್.
ಎಚ್.ಡಿ.ಕೋಟೆ ತಾಲ್ಲೂಕಿನ ಗಂಡತ್ತೂರು ಹೊಸಹಳ್ಳಿ ಗ್ರಾಮದ ಚಲುವೇಗೌಡ ಮತ್ತು ಭಾಗ್ಯ ದಂಪತಿಯ ಪುತ್ರ ಗುರುಪ್ರಸಾದ್ ಕ್ರೀಡೆಯಲ್ಲಿ ಏನಾದರೂ ಸಾಧಿಸಬೇಕು ಎಂಬ ಹಂಬಲ ಹೊಂದಿರುವವರು. ಇದಕ್ಕಾಗಿ ಕಠಿಣ ಪರಿಶ್ರಮದೊಂದಿಗೆ ಶ್ರಮಿಸುತ್ತಿರುವ ಅವರು ಪ್ರಸ್ತುತ ರಾಷ್ಟ್ರೀಯ ಮಟ್ಟದಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿ ಓಡುವ ವೇಗದ ಓಟಗಾರರಾಗಿದ್ದಾರೆ.
ತಮ್ಮ ಪದವಿಪೂರ್ವ ಶಿಕ್ಷಣವನ್ನು ಎಚ್.ಡಿ.ಕೋಟೆಯ ಆದಿಚುಂಚನಗಿರಿ ಪದವಿಪೂರ್ವ ಕಾಲೇಜಿನಲ್ಲಿ ಮುಗಿಸಿದ ಗುರುಪ್ರಸಾದ್ ಮೈಸೂರಿನ ಮಹಾಜನ ಕಾಲೇಜಿನಲ್ಲಿ ಪದವಿ ವ್ಯಾಸಂಗ ಮುಗಿಸಿದರು. 2017ರಿಂದ
ನಿರಂತರವಾಗಿ 100ಮೀ, 200ಮೀ, 400 ಮೀ., ಓಟದ ಹಾಗೂ ರಿಲೇ ವಿಭಾಗಗಳಲ್ಲಿ ಭಾಗವಹಿಸಲು ತರಬೇತಿ ಪಡೆದು, ರಾಜ್ಯ ಹಾಗೂ ರಾಷ್ಟ್ರೀಯ ಮಟ್ಟದ ಗುರುತಿಸಿಕೊಂಡಿದ್ದಾರೆ. ಅಲ್ಲದೆ 400 ಮೀ. ವಿಭಾಗದಲ್ಲಿ ವಿಶೇಷ ಆಸಕ್ತಿ ಹೊಂದಿದ್ದು, ಪ್ರಮುಖವಾಗಿ ಅದರಲ್ಲಿಯೇ ತರಬೇತಿ ಪಡೆಯುತ್ತಿದ್ದಾರೆ.
ಶಾಲಾ ದಿನಗಳಲ್ಲಿ ಶಾಲಾ ಹಂತದ ಕ್ರೀಡೆಗಳಲ್ಲಿ ಓಡುತ್ತಿದ್ದ ಗುರುಪ್ರಸಾದ್ 2015ರಲ್ಲಿ ಪದವಿ ಪೂರ್ವ ವ್ಯಾಸಂಗ ಮಾಡುವಾಗ ತ್ರಿಪಲ್ ಜಂಪ್ ಹಾಗೂ 800 ಮೀ. ಓಟದ ಸ್ಪರ್ಧೆಯಲ್ಲಿ ರಾಜ್ಯಮಟ್ಟದಲ್ಲಿ ಪದಕ ಪಡೆದರು. ಅಲ್ಲಿಂದ ಓಟದ ಬಗ್ಗೆ ಆಸಕ್ತಿ ಹೆಚ್ಚಿಸಿಕೊಂಡು 2017ರಿಂದ ಅಂತಾರಾಷ್ಟ್ರೀಯ ಕ್ರೀಡಾಪಟು ಪ್ರಭಾಕರ್ ಎಂಬುವವರ ಬಳಿ ತರಬೇತಿ ಪಡೆದು ಸತತ 8 ವರ್ಷಗಳಿಂದ ನಿರಂತರ ಅಭ್ಯಾಸದಲ್ಲಿ ತೊಡಗಿಕೊಂಡಿದ್ದಾರೆ.
ಈವರೆಗೂ 5 ಬಾರಿ ಕರ್ನಾಟಕವನ್ನು ಪ್ರತಿನಿಧಿಸಿ ಹಿಮಾಚಲ ಪ್ರದೇಶದ ಧರ್ಮ ಶಾಲಾ, ದೆಹಲಿ, ತೆಲಂಗಾಣ ಹಾಗೂ ಈ ಬಾರಿ ಬೆಂಗಳೂರಿನಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಕ್ರೀಡಾಕೂಟದಲ್ಲಿ 100 ಮೀ., 200 ಮೀ., 400 ಮೀ, ವಿಭಾಗಗಳಲ್ಲಿ ಭಾಗವಹಿಸಿ ಓಡಿರುವ ಇವರು, ಅನೇಕ ಬಾರಿ ರಾಜ್ಯಮಟ್ಟದ ಕ್ರೀಡಾ ಕೂಟಗಳು ಹಾಗೂ ದಸರಾ ಕ್ರೀಡಾಕೂಟಗಳಲ್ಲಿ 100 ಮೀ., 200ಮೀ., ಮತ್ತು 400 ಮೀ ವಿಭಾಗಗಳಲ್ಲಿ ಚಿನ್ನ ಮತ್ತು ಬೆಳ್ಳಿ ಪದಕಗಳನ್ನು ಗೆದ್ದಿದ್ದಾರೆ. ಇದರೊಂದಿಗೆ ಆಲ್ ಇಂಡಿಯಾ ಕ್ರೀಡಾ ಕೂಟಗಳಲ್ಲಿ ಮೈಸೂರು ವಿಶ್ವವಿದ್ಯಾನಿಲಯವನ್ನು ಪ್ರತಿನಿಧಿಸಿದ್ದಾರೆ.
ಸದ್ಯ ಜಿಮ್‌ವೊಂದರ ಫಿಟ್‌ನೆಸ್ ಕೋಚ್ ಆಗಿ ಕೆಲಸ ಮಾಡುತ್ತಾ ನಿತ್ಯ ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಪ್ರಭಾಕರ್‌ರವರ ಬಳಿ ತರಬೇತಿ ಪಡೆಯುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಅಂತರಾಷ್ಟ್ರೀಯ ಮಟ್ಟ ಹಾಗೂ ಒಲಿಂಪಿಕ್ಸ್‌ನಲ್ಲಿ ಭಾರತವನ್ನು ಪ್ರತಿನಿಧಿಸಬೇಕು ಎಂಬ ಕನಸು ಹೊತ್ತಿರುವ ಗುರು, ತಾವು ಸಾಧನೆಯ ಹಾದಿಗೆ ತಂದೆ-ತಾಯಿ, ತರಬೇತುದಾರರಾದ ಪ್ರಭಾಕರ್ ದಾರಿದೀಪವಾಗಿದ್ದಾರೆ ಎನ್ನುತ್ತಾರೆ.
ನಾನು ಶಾಲಾ-ಕಾಲೇಜು ದಿನಗಳಲ್ಲೇ ಓಟದ ಸ್ಪರ್ಧೆಗಳಲ್ಲಿ ಭಾಗವಹಿಸುತ್ತಿದ್ದೆ. ಅಲ್ಲಿ ಪ್ರತಿಬಾರಿ ಪದಕಗಳನ್ನು ಗೆದ್ದಾಗ ನಾನು ಮತ್ತಷ್ಟು ಸಾಧನೆ ಮಾಡಬೇಕು ಎಂಬ ಹಂಬಲ ಹೆಚ್ಚಾಯಿತು. ಕಳೆದ 8 ವರ್ಷಗಳಿಂದ ನಿರಂತರವಾಗಿ ಓಟದ ತರಬೇತಿ ನಡೆಯುತ್ತಿದ್ದು, ಮುಂದಿನ ದಿನಗಳಲ್ಲಿ ದೇಶವನ್ನು ಪ್ರತಿನಿಧಿಸುವ ಬಯಕೆ ಇದೆ. ಅದಕ್ಕೆ ಕಠಿಣ ಪರಿಶ್ರಮ ಪಡುತ್ತಿದ್ದೇನೆ. -ಜಿ.ಸಿ.ಗುರುಪ್ರಸಾದ್, ಕ್ರೀಡಾಪಟು.
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…
ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜನವರಿ…