ಯುವ ಡಾಟ್ ಕಾಂ

ಮಿಂಚಿನ ಓಟಗಾರ ಎಚ್.ಡಿ.ಕೋಟೆ ಗುರುಪ್ರಸಾದ್‌

ಅನಿಲ್ ಅಂತರಸಂತೆ

ಕ್ರೀಡೆಯಲ್ಲಿ ಏನಾದರೂ ಸಾಧನೆ ಮಾಡಬೇಕು ಎಂಬ ಹಂಬಲ ಮನಸ್ಸಿನಲ್ಲಿದರೆ ಸಾಲದು ಅದಕ್ಕಾಗಿ ಸತತ ಪರಿಶ್ರಮ, ತ್ಯಾಗಗಳನ್ನು ಮಾಡಿದ್ದಾಗ ಮಾತ್ರ ಕ್ರೀಡಾ ಕ್ಷೇತ್ರದಲ್ಲಿ ಸಾಧನೆಯ ಹಾದಿ ಹಿಡಿಯಲು ಸಾಧ್ಯ. ಅದರಲ್ಲಿಯೂ ಇತ್ತೀಚಿನ ಸ್ವರ್ಧಾತ್ಮಕ ಯುಗದಲ್ಲಿ ಕಠಿಣ ಪರಿಶ್ರಮವಿಲ್ಲದೆ ಏನನ್ನೂ ಸಾಧಿಸಲಾಗದು ಎಂಬುದನ್ನು ಅರಿತು ಕ್ರೀಡಾ ಕ್ಷೇತ್ರದಲ್ಲಿ ಶ್ರಮವಹಿಸಿ ಸಾಧನೆಯ ಹಾದಿಯಲ್ಲಿ ಸಾಗುತ್ತಿದ್ವಾರೆ ವೇಗದ ಓಟಗಾರ ಜಿ.ಸಿ.ಗುರುಪ್ರಸಾದ್.

ಎಚ್.ಡಿ.ಕೋಟೆ ತಾಲ್ಲೂಕಿನ ಗಂಡತ್ತೂರು ಹೊಸಹಳ್ಳಿ ಗ್ರಾಮದ ಚಲುವೇಗೌಡ ಮತ್ತು ಭಾಗ್ಯ ದಂಪತಿಯ ಪುತ್ರ ಗುರುಪ್ರಸಾದ್ ಕ್ರೀಡೆಯಲ್ಲಿ ಏನಾದರೂ ಸಾಧಿಸಬೇಕು ಎಂಬ ಹಂಬಲ ಹೊಂದಿರುವವರು. ಇದಕ್ಕಾಗಿ ಕಠಿಣ ಪರಿಶ್ರಮದೊಂದಿಗೆ ಶ್ರಮಿಸುತ್ತಿರುವ ಅವರು ಪ್ರಸ್ತುತ ರಾಷ್ಟ್ರೀಯ ಮಟ್ಟದಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿ ಓಡುವ ವೇಗದ ಓಟಗಾರರಾಗಿದ್ದಾರೆ.

ತಮ್ಮ ಪದವಿಪೂರ್ವ ಶಿಕ್ಷಣವನ್ನು ಎಚ್.ಡಿ.ಕೋಟೆಯ ಆದಿಚುಂಚನಗಿರಿ ಪದವಿಪೂರ್ವ ಕಾಲೇಜಿನಲ್ಲಿ ಮುಗಿಸಿದ ಗುರುಪ್ರಸಾದ್‌ ಮೈಸೂರಿನ ಮಹಾಜನ ಕಾಲೇಜಿನಲ್ಲಿ ಪದವಿ ವ್ಯಾಸಂಗ ಮುಗಿಸಿದರು. 2017ರಿಂದ
ನಿರಂತರವಾಗಿ 100ಮೀ, 200ಮೀ, 400 ಮೀ., ಓಟದ ಹಾಗೂ ರಿಲೇ ವಿಭಾಗಗಳಲ್ಲಿ ಭಾಗವಹಿಸಲು ತರಬೇತಿ ಪಡೆದು, ರಾಜ್ಯ ಹಾಗೂ ರಾಷ್ಟ್ರೀಯ ಮಟ್ಟದ ಗುರುತಿಸಿಕೊಂಡಿದ್ದಾರೆ. ಅಲ್ಲದೆ 400 ಮೀ. ವಿಭಾಗದಲ್ಲಿ ವಿಶೇಷ ಆಸಕ್ತಿ ಹೊಂದಿದ್ದು, ಪ್ರಮುಖವಾಗಿ ಅದರಲ್ಲಿಯೇ ತರಬೇತಿ ಪಡೆಯುತ್ತಿದ್ದಾರೆ.

ಶಾಲಾ ದಿನಗಳಲ್ಲಿ ಶಾಲಾ ಹಂತದ ಕ್ರೀಡೆಗಳಲ್ಲಿ ಓಡುತ್ತಿದ್ದ ಗುರುಪ್ರಸಾದ್ 2015ರಲ್ಲಿ ಪದವಿ ಪೂರ್ವ ವ್ಯಾಸಂಗ ಮಾಡುವಾಗ ತ್ರಿಪಲ್ ಜಂಪ್ ಹಾಗೂ 800 ಮೀ. ಓಟದ ಸ್ಪರ್ಧೆಯಲ್ಲಿ ರಾಜ್ಯಮಟ್ಟದಲ್ಲಿ ಪದಕ ಪಡೆದರು. ಅಲ್ಲಿಂದ ಓಟದ ಬಗ್ಗೆ ಆಸಕ್ತಿ ಹೆಚ್ಚಿಸಿಕೊಂಡು 2017ರಿಂದ ಅಂತಾರಾಷ್ಟ್ರೀಯ ಕ್ರೀಡಾಪಟು ಪ್ರಭಾಕರ್ ಎಂಬುವವರ ಬಳಿ ತರಬೇತಿ ಪಡೆದು ಸತತ 8 ವರ್ಷಗಳಿಂದ ನಿರಂತರ ಅಭ್ಯಾಸದಲ್ಲಿ ತೊಡಗಿಕೊಂಡಿದ್ದಾರೆ.

ಈವರೆಗೂ 5 ಬಾರಿ ಕರ್ನಾಟಕವನ್ನು ಪ್ರತಿನಿಧಿಸಿ ಹಿಮಾಚಲ ಪ್ರದೇಶದ ಧರ್ಮ ಶಾಲಾ, ದೆಹಲಿ, ತೆಲಂಗಾಣ ಹಾಗೂ ಈ ಬಾರಿ ಬೆಂಗಳೂರಿನಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಕ್ರೀಡಾಕೂಟದಲ್ಲಿ 100 ಮೀ., 200 ಮೀ., 400 ಮೀ, ವಿಭಾಗಗಳಲ್ಲಿ ಭಾಗವಹಿಸಿ ಓಡಿರುವ ಇವರು, ಅನೇಕ ಬಾರಿ ರಾಜ್ಯಮಟ್ಟದ ಕ್ರೀಡಾ ಕೂಟಗಳು ಹಾಗೂ ದಸರಾ ಕ್ರೀಡಾಕೂಟಗಳಲ್ಲಿ 100 ಮೀ., 200ಮೀ., ಮತ್ತು 400 ಮೀ ವಿಭಾಗಗಳಲ್ಲಿ ಚಿನ್ನ ಮತ್ತು ಬೆಳ್ಳಿ ಪದಕಗಳನ್ನು ಗೆದ್ದಿದ್ದಾರೆ. ಇದರೊಂದಿಗೆ ಆಲ್ ಇಂಡಿಯಾ ಕ್ರೀಡಾ ಕೂಟಗಳಲ್ಲಿ ಮೈಸೂರು ವಿಶ್ವವಿದ್ಯಾನಿಲಯವನ್ನು ಪ್ರತಿನಿಧಿಸಿದ್ದಾರೆ.

ಸದ್ಯ ಜಿಮ್‌ವೊಂದರ ಫಿಟ್‌ನೆಸ್ ಕೋಚ್ ಆಗಿ ಕೆಲಸ ಮಾಡುತ್ತಾ ನಿತ್ಯ ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಪ್ರಭಾಕರ್‌ರವರ ಬಳಿ ತರಬೇತಿ ಪಡೆಯುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಅಂತರಾಷ್ಟ್ರೀಯ ಮಟ್ಟ ಹಾಗೂ ಒಲಿಂಪಿಕ್ಸ್‌ನಲ್ಲಿ ಭಾರತವನ್ನು ಪ್ರತಿನಿಧಿಸಬೇಕು ಎಂಬ ಕನಸು ಹೊತ್ತಿರುವ ಗುರು, ತಾವು ಸಾಧನೆಯ ಹಾದಿಗೆ ತಂದೆ-ತಾಯಿ, ತರಬೇತುದಾರರಾದ ಪ್ರಭಾಕರ್ ದಾರಿದೀಪವಾಗಿದ್ದಾರೆ ಎನ್ನುತ್ತಾರೆ.

ನಾನು ಶಾಲಾ-ಕಾಲೇಜು ದಿನಗಳಲ್ಲೇ ಓಟದ ಸ್ಪರ್ಧೆಗಳಲ್ಲಿ ಭಾಗವಹಿಸುತ್ತಿದ್ದೆ. ಅಲ್ಲಿ ಪ್ರತಿಬಾರಿ ಪದಕಗಳನ್ನು ಗೆದ್ದಾಗ ನಾನು ಮತ್ತಷ್ಟು ಸಾಧನೆ ಮಾಡಬೇಕು ಎಂಬ ಹಂಬಲ ಹೆಚ್ಚಾಯಿತು. ಕಳೆದ 8 ವರ್ಷಗಳಿಂದ ನಿರಂತರವಾಗಿ ಓಟದ ತರಬೇತಿ ನಡೆಯುತ್ತಿದ್ದು, ಮುಂದಿನ ದಿನಗಳಲ್ಲಿ ದೇಶವನ್ನು ಪ್ರತಿನಿಧಿಸುವ ಬಯಕೆ ಇದೆ. ಅದಕ್ಕೆ ಕಠಿಣ ಪರಿಶ್ರಮ ಪಡುತ್ತಿದ್ದೇನೆ. -ಜಿ.ಸಿ.ಗುರುಪ್ರಸಾದ್, ಕ್ರೀಡಾಪಟು.

 

ಆಂದೋಲನ ಡೆಸ್ಕ್

Recent Posts

ಬಯಲುಸೀಮೆಗೆ ಭದ್ರಾ ಜೀವಜಲ : ನವೆಂಬರ್ ಅಂತ್ಯಕ್ಕೆ ಎಲ್ಲ ಕೆರೆಗಳಿಗೂ ನೀರು ; ಸಚಿವ ಚಲುವರಾಯಸ್ವಾಮಿ ಭರವಸೆ*

ಚಿತ್ರದುರ್ಗ : ದಶಕಗಳಿಂದ ಬರಗಾಲದ ಬೇಗೆಯಲ್ಲಿ ಬೆಂದ ಬಯಲುಸೀಮೆಗೆ ಭದ್ರಾ ಮೇಲ್ದಂಡೆ ಯೋಜನೆ ಹೊಸ ಭರವಸೆ ಮೂಡಿಸಿದೆ. ಅರಣ್ಯ ಇಲಾಖೆ…

5 hours ago

ಓದುಗರ ಪತ್ರ: ಕರುನಾಡ ಹೆಮ್ಮೆ…

ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…

13 hours ago

ಓದುಗರ ಪತ್ರ: ಪಾಲಿಕೆ ಯೋಜನೆ ಸ್ವಾಗತಾರ್ಹ

ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…

13 hours ago

ಓದುಗರ ಪತ್ರ: ಯುಪಿಐ ಶುಲ್ಕ: ಚರ್ಚೆಯ ನಂತರ ಕ್ರಮ ಕೈಗೊಳ್ಳಿ

ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…

13 hours ago

ಬದಲಾದ ಜಾಗತಿಕ ಆರ್ಥಿಕ ವ್ಯವಸ್ಥೆಯಲ್ಲಿ ಬ್ರಿಕ್ಸ್ ಪಾತ್ರ

ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…

13 hours ago

ಬಿಹಾರದಲ್ಲಿ ಯುಸಿಸಿಗೆ ನಿತೀಶ್, ಚಿರಾಗ್ ಪಕ್ಷಗಳ ಭಿನ್ನರಾಗ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…

13 hours ago