ಯುವ ಡಾಟ್ ಕಾಂ

ಬ್ಯಾಡ್ಮಿಂಟನ್‌ ತಾರೆ ಮಹದೇವಸ್ವಾಮಿ

ಗ್ರಾಮೀಣ ಭಾಗಗಳು ಎಂದರೆ ಅವು ಮೂಲಸೌಕರ್ಯಗಳ ವಂಚಿನ ಪ್ರದೇಶಗಳು, ಪಠ್ಯ ಮತ್ತು ಪಠ್ಯತೇರ ಚಟುವಟಿಕೆಗಳಿಗೆ ಅಷ್ಟೇನೂ ಪ್ರೋತ್ಸಾಹ ಸಿಗುವುದಿಲ್ಲ, ಅವುಗಳಿಗೆ ಬೇಕಾದ ಸರಿಯಾದ ಸೌಲಭ್ಯಗಳೂ ಸಿಗುವುದಿಲ್ಲ ಎಂಬುದೇ ಎಲ್ಲರ ಭಾವನೆಯಾಗಿದೆ.

ಇಂತಹ ಸೌಲಭ್ಯ ವಂಚಿತ ಗ್ರಾಮೀಣ ಭಾಗದಲ್ಲಿ ಹುಟ್ಟಿ ಬೆಳೆದು ಕ್ರೀಡಾಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡುವ ಮೂಲಕ ಕೀರ್ತಿ ತಂದಿದ್ದಾರೆ ಎಚ್.ಡಿ.ಕೋಟೆ ಅಂತರಸಂತೆ ಗ್ರಾಮದ ಬಾಲ್ ಬ್ಯಾಡ್ಮಿಂಟನ್ ಆಟಗಾರ ಆರ್.ಮಹದೇವಸ್ವಾಮಿ.

ಮಹದೇವಸ್ವಾಮಿ ಸತತ ೧೧ ಬಾರಿ ರಾಷ್ಟ್ರೀಯ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಕ್ರೀಡಾಕೂಟದಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸುವ ಮೂಲಕ ತಾಲ್ಲೂಕಿಗೆ ಕೀರ್ತಿ ತಂದಿದ್ದಾರೆ. ಬಾಲ್ ಬ್ಯಾಡ್ಮಿಂಟನ್ ಒಂದು ರಾಕೆಟ್ ಗೇಮ್. ಇಂದು ತಂಡದಲ್ಲಿ ೫ ಜನ ಮುಖ್ಯ ಆಟಗಾರರು ೫ ಜನ ಬದಲಿ ಆಟಗಾರರಿರುತಾರೆ. ಈ ಆಟ ಜನರಿಗೆ ಅಷ್ಟಾಗಿ ಪರಿಚಯವಿಲ್ಲದಿದ್ದರೂ ನಗರ ಭಾಗಗಳಲ್ಲಿ ಹೆಚ್ಚಾಗಿ ಆಡುವ ಆಟಗಳಲ್ಲಿ ಒಂದಾಗಿದೆ.

ಗ್ರಾಮೀಣ ಭಾಗಗಳಲ್ಲಿಯೂ ಬೆರಣಿಕೆಯಷ್ಟು ಶಾಲೆಗಳು ಈ ಆಟವನ್ನು ಅಭ್ಯಾಸ ಮಾಡುತ್ತಿವೆ. ಅಂತಹ ಶಾಲೆಗಳಲ್ಲಿ ಒಂದಾದ ಅಂತರಸಂತೆ ಸರ್ಕಾರಿ ಪ್ರೌಢ ಶಾಲೆಯಲ್ಲಿ ಓದಿದ ಮಹದೇವಸ್ವಾಮಿ ತಮ್ಮ ೮ ರಿಂದ ೧೦ ತರಗತಿಯವರೆಗೆ ದೈಹಿಕ ಶಿಕ್ಷಕ ಎಚ್.ಎಸ್.ರಮೇಶ್‌ರ ಬಳಿ ಬಾಲ್ ಬ್ಯಾಡ್ಮಿಂಟನ್ ಅಭ್ಯಾಸ ಮಾಡಿದರು. ಅಲ್ಲಿಂದ ಪ್ರಾರಂಭವಾದ ಇವರ ಬ್ಯಾಡ್ಮಿಂಟನ್ ಪ್ರಯಾಣ ರಾಷ್ಟ್ರೀಯ ಮಟ್ಟಕ್ಕೆ ಕೊಂಡ್ಯೊಯುವವರಿಗೂ ನಡೆಯಿತು.

ಸದ್ಯ ಇತ್ತೀಚೆಗೆ ಮಹಾರಾಷ್ಟ್ರದಲ್ಲಿ ನಡೆದ ೬೯ನೇ ಸಿನಿಯರ್ ವಿಭಾಗದ ರಾಷ್ಟ್ರೀಯ ಮಟ್ಟದ ಕ್ರೀಡಾಕೂಟದಲ್ಲಿ ಕರ್ನಾಟಕ ತಂಡದ ನಾಯಕನಾಗಿ ಮಹದೇವಸ್ವಾಮಿ ತಂಡವನ್ನು ನಿಭಾಯಿಸಿದ್ದು, ಗ್ರಾಮೀಣ ಭಾಗದಲ್ಲಿ ಹುಟ್ಟಿಬೆಳೆದು ರಾಷ್ಟ್ರೀಯ ತಂಡದ ನಾಯಕನಾಗಿ ತಂಡವನ್ನು ಮುನ್ನಡೆಸಿರುವುದು ಹೆಮ್ಮೆಯ ವಿಚಾರವಾಗಿದೆ.

ಕರ್ನಾಟಕ, ತಮಿಳುನಾಡು, ಕೇರಳ, ಆಂಧ್ರಪ್ರದೇಶಗಳಲ್ಲಿ ಬಾಲ್ ಬ್ಯಾಡ್ಮಿಂಟನ್ ಕ್ರೀಡೆ ಇತ್ತೀಚೆಗೆ ಹೆಚ್ಚು ಹೆಚ್ಚು ಪ್ರಸಿದ್ಧಿಯನ್ನು ಪಡೆಯುತ್ತಿದೆ. ಈ ಆಟದಲ್ಲಿ ಬಳಸಲಾಗುವ ಬ್ಯಾಟ್‌ಗಳು ಮತ್ತು ಬಾಲ್‌ಗಳು ಕೊಂಚ ದುಬಾರಿಯಾಗಿರುವ ಪರಿಣಾಮ ಗ್ರಾಮೀಣ ಭಾಗದ ಮಕ್ಕಳು ಈ ಆಟವನ್ನು ಅಭ್ಯಾಸಿಸಲು ಸೌಲಭ್ಯಗಳ ಕೊರತೆ ಎದುರಾಗುವಂತೆ ಮಾಡಿದೆ.

ಅಂತರಸಂತೆ ಗ್ರಾಮದ ರಾಮು ಮತ್ತು ಜಯಮ್ಮ ಎಂಬವರ ಮಗನಾದ ಮಹದೇವಸ್ವಾಮಿ ಸುಮಾರು ೧೧ ಬಾರಿ ರಾಷ್ಟ್ರೀಯ ಮಟ್ಟದಲ್ಲಿ ಭಾಗವಹಿಸಿ ೪ ಬಾರಿ ’ಸ್ಟಾರ್ ಆಫ್ ಇಂಡಿಯಾ’ ಪ್ರಶಸ್ತಿ ಪಡೆದು ತಾಲ್ಲೂಕಿಗೆ ಕೀರ್ತಿ ತಂದಿದ್ದಾರೆ. ೨೦೧೪ರಲ್ಲಿ ಮೊದಲ ಬಾರಿಗೆ ಸಬ್ ಜೂನಿಯರ್ ವಿಭಾಗದಲ್ಲಿ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿ ಕರ್ನಾಟಕ ತಂಡವನ್ನು ಪ್ರತಿನಿಧಿಸಿದರು. ಬಳಿಕ ಇವರಿಗೆ ಮಂಗಳೂರಿನ ಪ್ರತಿಷ್ಠಿತ ಆಳ್ವಾಸ ಶಿಕ್ಷಣ ಸಂಸ್ಥೆ ಆಹ್ವಾನ ನೀಡಿ ತಮ್ಮಲ್ಲಿಯೇ ಉಚಿತ ಶಿಕ್ಷಣ ನೀಡಿ ಕ್ರೀಡೆಗೆ ಪ್ರೋತ್ಸಾಹಿಸಿತು.

ಬಳಿಕ ಅಲ್ಲಿಯೇ ಬ್ಯಾಡ್ಮಿಂಟನ್ ಅಭ್ಯಾಸ ಮಾಡಿದ ಅವರು, ೨ ಬಾರಿ ಜೂನಿಯರ್ ವಿಭಾಗ, ೮ ಬಾರಿ ಸಿನಿಯರ್ ವಿಭಾಗದಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ್ದು, ಒಟ್ಟಾರೆ ೧೧ ಬಾರಿ ರಾಷ್ಟ್ರೀಯ ಮಟ್ಟವನ್ನು ಕರ್ನಾಟಕದ ಪರ ಆಡಿದ್ದಾರೆ. ಈ ಪೈಕಿ ೫ ಬಾರಿ ಕಂಚಿನ ಪದಕ ಪಡೆದಿದ್ದಾರೆ. ಅಲ್ಲದೆ ಮಂಗಳೂರು ವಿಶ್ವವಿದ್ಯಾನಿಲಯ ತಂಡವನ್ನು ೫ ಬಾರಿ ಪ್ರತಿನಿಧಿಸಿದ್ದು, ೨ ಬಾರಿ ಬೆಳ್ಳಿ ಮತ್ತು ೧ ಬಾರಿ ಕಂಚಿನ ಪದಕ ಗೆದ್ದಿದ್ದಾರೆ.
ಈ ಆಟ ಮತ್ತಷ್ಟು ಪ್ರಚಾರ ಪಡೆಯಬೇಕು. ಗ್ರಾಮೀಣ ಭಾಗದಲ್ಲಿ ನನಂತೆಯೇ ಸಾಕಷ್ಟು ಕ್ರೀಡಾಪಟುಗಳು ಬ್ಯಾಡ್ಮಿಂಟನ್ ಅಭ್ಯಾಸ ಮಾಡುತ್ತಿದ್ದಾರೆ. ಅದರಲ್ಲಿ ಬಹಳಷ್ಟು ಸರ್ಕಾರಿ ಶಾಲೆಗಳೇ ಇವೆ. ಅವುಗಳಿಗೆ ಸೂಕ್ತ ಸಲಕರಣೆಗಳನ್ನು ವದಗಿಸಿ ಪ್ರೋತ್ಸಾಹಿಸಿದರೆ ಮತ್ತಷ್ಟು ಕ್ರೀಡಾಪಟುಗಳಿಗೆ ವೇದಿಕೆ ಸೃಷ್ಟಿಸಿದಂತಾಗುತ್ತದೆ ಎನ್ನುತ್ತಾರೆ ಮಹದೇವಸ್ವಾಮಿ.

andolana

Recent Posts

ದ್ವೇಷ ಭಾಷಣ ಮಾಡುವುದರಲ್ಲಿ ಬಿಜೆಪಿಯವರು ಪಿತಾಮಹರು: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಳಗಾವಿ: ದ್ವೇಷ ಭಾಷಣ ವಿಧೇಯಕ ಮಂಡನೆ ವಿಚಾರಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದು, ಬಿಜೆಪಿಯವರು ದ್ವೇಷ ಭಾಷಣ ಮಾಡದೇ…

4 mins ago

ಅಕ್ರಮವಾಗಿ ಶ್ರೀಗಂಧ ಶೇಖರಣೆ ಮಾಡಿದ್ದ ಆರೋಪಿ ಬಂಧನ

ಮೈಸೂರು: ಅಕ್ರಮವಾಗಿ ಶ್ರೀಗಂಧ ಶೇಖರಣೆ ಮಾಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಮೈಸೂರಿನ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. ಮೈಸೂರಿನ ಕೆಸರೆಯಲ್ಲಿ ಈ ಘಟನೆ…

35 mins ago

ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಇಂದು 60 ಇಂಡಿಗೋ ವಿಮಾನಗಳ ಹಾರಾಟ ರದ್ದು

ಬೆಂಗಳೂರು: ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಇಂದು ಕೂಡ 60 ಇಂಡಿಗೋ ವಿಮಾನಗಳ ಹಾರಾಟ ರದ್ದಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯಲ್ಲಿರುವ ಕೆಂಪೇಗೌಡ…

60 mins ago

ಓದುಗರ ಪತ್ರ:  ನಂಜನಗೂಡಿನ ಪ್ರಮುಖ ವೃತ್ತಕ್ಕೆ ಬಿ.ವಿ.ಪಂಡಿತರ ಹೆಸರಿಡಿ

ನಂಜನಗೂಡಿನ ಸದ್ವೈದ್ಯ ಶಾಲಾ ಸಂಸ್ಥಾಪಕರಾಗಿದ್ದ ಬಿ.ವಿ.ಪಂಡಿತರು ಆಯುರ್ವೇದ ಉತ್ಪನ್ನಗಳನ್ನು ರೂಪಿಸಿದ ಹಿರಿಮೆ ಹೊಂದಿದ್ದಾರೆ. ದಂತಧಾವನ ಚೂರ್ಣ (ನಂಜನಗೂಡು ಹಲ್ಲು ಪುಡಿ)…

1 hour ago

ಓದುಗರ ಪತ್ರ:  ಭೈರಪ್ಪ ಸ್ಮಾರಕ, ತಿಮ್ಮಕ್ಕ ವಸ್ತು ಸಂಗ್ರಹಾಲಯ ಸ್ವಾಗತಾರ್ಹ

ಮೈಸೂರಿನಲ್ಲಿ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕ ನಿರ್ಮಾಣ ಹಾಗೂ ಬೇಲೂರಿನಲ್ಲಿ ವೃಕ್ಷಮಾತೆ ಸಾಲು ಮರದ ತಿಮ್ಮಕ್ಕ ಅವರ ವಸ್ತು ಸಂಗ್ರಹಾಲಯ…

1 hour ago

ಓದುಗರ ಪತ್ರ:  ಗೋಪಾಲಸ್ವಾಮಿ ಬೆಟ್ಟದ ಬಸ್ ಪ್ರಯಾಣ ದರ ಇಳಿಕೆ ಮಾಡಿ

ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ಇತಿಹಾಸ ಪ್ರಸಿದ್ಧ ಕ್ಷೇತ್ರ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಖಾಸಗಿ ವಾಹನಗಳಿಗೆ ಪ್ರವೇಶವಿರುವುದಿಲ್ಲ. ರಾಜ್ಯ ರಸ್ತೆ ಸಾರಿಗೆ ನಿಗಮದ…

1 hour ago