ಶೇಷಣ್ಣಸ್ವಾಮಿಯವರ ಗಾಯನ ಜಾಗೃತಿ

ಜಾನಪದ ಸಂಗೀತ, ಕ್ರಾಂತಿಗೀತೆಗಳು, `ಹೋರಾಟದ ಹಾಡುಗಳು ಯುವಜನರಿಂದ ದೂರಾಗುತ್ತಿರುವ ಈ ಕಾಲಘಟ್ಟದಲ್ಲಿ ಇಲ್ಲೊಬ್ಬರು ಬುದ್ಧ, ಬಸವ, ಡಾ.ಬಿ.ಆರ್.ಅಂಬೇಡ್ಕರ್, ನಾಲ್ವಡಿ ಕೃಷ್ಣರಾಜ ಒಡೆಯರ್, ಕುವೆಂಪುರವರ ಗೀತೆಗಳಿಗೆ ರಾಗ ಸಂಯೋಜನೆ ಮಾಡಿ ಹಾಡುವ ಜತೆಗೆ ತಾವೇ ಕವಿತೆ ರಚಿಸಿ ರಾಗ ಸಂಯೋಜಿಸಿ ಹಾಡುವ ಕೌಶಲ್ಯವನ್ನು ಮೈಗೂಡಿಸಿಕೊಂಡಿದ್ದಾರೆ.

ಚಾಮರಾಜನಗರದ ಕಂಪನಪುರ ಗ್ರಾಮದ ದಿವಂಗತ ಹಗ್ಗದ ಮಾದಯ್ಯ ಮತ್ತು ಮಹದೇವಮ್ಮ ದಂಪತಿ ಪುತ್ರ ಕೆ.ಎಂ. ಶೇಷಣ್ಣ ಸ್ವಾಮಿ ಪ್ರಸ್ತುತ ಮೈಸೂರು ವಿವಿ ಸಂಶೋಧನಾ ವಿದ್ಯಾರ್ಥಿಯಾಗಿದ್ದು, ಅದರೊಟ್ಟಿಗೆ ಪ್ರಜ್ಞಾ ಪರಿವರ್ತನಾ ಕಲಾ ತಂಡ’ವೊಂದನ್ನು ಕಟ್ಟಿಕೊಂಡು ಅನೇಕ ವಿದ್ಯಾರ್ಥಿಗಳಿಗೆ ಸಂಗೀತ ಗಾಯನ ಕಲಿಸುವ ಜತೆಗೆ ಅನೇಕ ಸಂಗೀತ ಕಾರ್ಯಕ್ರಮಗಳನ್ನೂ ನಡೆಸಿಕೊಡುತ್ತಾ, ಜಾನಪದ ಸಂಗೀತ, ಕ್ರಾಂತಿ ಗೀತೆಗಳತ್ತ ಯುವಕರನ್ನು ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ.

ಕೆ.ಎಂ.ಶೇಷಣ್ಣಸ್ವಾಮಿ ತಮ್ಮ ಪ್ರಾಥಮಿಕ ಶಿಕ್ಷಣವನ್ನು ಸ್ವಗ್ರಾಮದಲ್ಲಿ ಮುಗಿಸಿ ಬಳಿಕ ಮೈಸೂರು ವಿಶ್ವವಿದ್ಯಾನಿಲಯದ ಲಲಿತ ಕಲೆಗಳ ಕಾಲೇಜಿನಲ್ಲಿ ‘ಸಂಗೀತ, ನಾಟಕ ಮತ್ತು ಐಚ್ಛಿಕ ಕನ್ನಡ’ ವಿಷಯದಲ್ಲಿ ಪದವಿ ಪಡೆದುಕೊಂಡರು. ಹಾಗೂ ‘ಮೃದಂಗ’ ವಿಷಯದಲ್ಲಿ ಡಿಪ್ಲೊಮಾ ಪದವಿಯನ್ನೂ ಪಡೆದಿದ್ದು, ಕರಾಮುವಿಯ ದೂರ ಶಿಕ್ಷಣ ಕೇಂದ್ರದ ಮೂಲಕ ಕನ್ನಡ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದು ಪ್ರಸ್ತುತ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯಲ್ಲಿ ಪ್ರೊ.ಎನ್.ಕೆ.ಲೋಲಾಕ್ಷಿ ಅವರ ಮಾರ್ಗದರ್ಶನದಲ್ಲಿ ಸಂಶೋಧನೆ ನಡೆಸುತ್ತಿದ್ದಾರೆ.

ಕೇವಲ ಕವನಗಳಿಗೆ ರಾಗ ಸಂಯೋಜನೆ ಮಾಡಿ ವಾಚನ ಮಾಡುವುದಷ್ಟೇ ಅಲ್ಲದ ಸ್ವತಃ ಕವಿಯಾಗಿರುವ ಇವರ ಕವಿತೆಗಳು ಪ್ರಬುದ್ಧ ಭಾರತ, ಸಮಾಜ ಪರಿವರ್ತನಾ ಬಹದನಿ, ರಂಗಶೀರ್ಷ, ಆಂದೋಲನ ಸೇರಿದಂತೆ ಅನೇಕ ಪತ್ರಿಕೆಗಳಲ್ಲಿ ಪ್ರಕಟಗೊಂಡಿದೆ.

ಗಾಯನದ ಬಗ್ಗೆ ವಿಶೇಷ ಒಲವು ಹೊಂದಿರುವ ಜೇವಣ್ಣ ಚಂದನ ವಾಹಿನಿ, ಮೈಸೂರು ಆಕಾಶವಾಣಿ ಕೇಂದ್ರಗಳಲ್ಲಿ ಸಹಗಾಯಕರಾಗಿ ಕಾರ್ಯಕ್ರಮ ನೀಡಿದ್ದಾರೆ. ತಮ್ಮ ಗಾಯನದ ಮೂಲಕ ಜಾಗೃತಿ ಮೂಡಿಸುತ್ತಿರುವ ಇವರಿಗೆ ಅನೇಕ ಸಂಘ-ಸಂಸ್ಥೆಗಳು ಪ್ರಶಸ್ತಿ ಪುರಸ್ಕಾರ ನೀಡಿ ಗೌರವಿಸಿವೆ. ಕರ್ನಾಟಕ ರಾಜ್ಯ ಒಕ್ಕಲಿಗರ ವಿಕಾಸ ವೇದಿಕೆಯಿಂದ ಕೊಡಮಾಡುವ 2020ರ ‘ಕನ್ನಡ ವಿಕಾಸ ರತ್ನ’ ಪ್ರಶಸ್ತಿ, ಭಾರತೀಯ ವಿದ್ಯಾರ್ಥಿ ಸಂಘ, ಕರ್ನಾಟಕ ಇವರ 2022ರ ‘ಉದಯೋನ್ಮುಖ ಗಾಯಕ’ ಬಿರುದು, ಲಯನ್ಸ್ ಕ್ಲಬ್ ಆಫ್ ಮೈಸೂರು ಅವರ 2023ರ ‘ಸಂವಿಧಾನ ಸೇವಾ ರತ್ನ ಪ್ರಶಸ್ತಿ’, 2024ರಲ್ಲಿ ಮಾನಸಗಂಗೋತ್ರಿಯ ಕುವಂಪು ಕನ್ನಡ ಅಧ್ಯಯನ ಸಂಸ್ಥೆ, ಸಂಶೋಧನಾ ವಿದ್ಯಾರ್ಥಿ ವೇದಿಕೆ ವಶಿಯಿಂದ ವಿಶ್ವಜ್ಞಾನಿ ಡಾ.ಬಿ.ಆರ್.ಅಂಬೇಡ್ಕರ್ ಅವರ 133ನೇ ಜನ್ಮ ದಿನಾಚರಣೆ ಹಾಗೂ ವಿಚಾರ ಸಂಕಿರಣ ಕಾರ್ಯಕ್ರಮದಲ್ಲಿ ‘ಗಾನ ಕೋಗಿಲೆ’ ಬಿರುದು ಸಂದಿವೆ. ಅಲ್ಲದೆ 2024ರಲ್ಲಿ ಮಾನಸಗಂಗೋತ್ರಿಯ ಇತಿಹಾಸ ಅಧ್ಯಯನ ವಿಭಾಗವು ಡಾ.ಬಿ.ಆರ್.ಅಂಬೇಡ್ಕರ್ ಅವರ 133ನೇ ಜನ್ಮದಿನದ ಅಂಗವಾಗಿ ‘ಭೀಮ ಗಾನ ಗಾರುಡಿಗೆ ಎಂಬ ಬಿರುದು ನೀಡಿ ಗೌರವಿಸಿದೆ.

ಇದಿಷ್ಟೇ ಅಲ್ಲದೆ ಮೈಸೂರಿನ ಕನ್ನಡ ಜಾನಪದ ಪರಿಷತ್‌ ಹಾಗೂ ಮೈಸೂರು ವಿಶ್ವವಿದ್ಯಾನಿಲಯ ಸಂಶೋಧಕರ ಸಂಘದ ಸಂಯುಕ್ತ ಆಶ್ರಯದಲ್ಲಿ ನಡೆದ 8ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಮೈಸೂರು ಜಿಲ್ಲಾ ಯುವ ವಾನಪದ ಪ್ರದಂಚ ಪ್ರಶಸ್ತಿ’ ನೀಡಿ ಗೌರವಿಸಲಾಗಿದೆ.

ಕೆ.ಎಂ.ಶೇಷಣ್ಣಸ್ವಾಮಿ ಯುವಜನರಿಂದ ಜಾನಪದ ಮರೆಯಾಗುತ್ತಿರುವ ಈ ಕಾಲಘಟ್ಟದಲ್ಲಿ ಆ ಸಾಹಿತ್ಯ ಪರಂಪರೆಯನ್ನು ಮುಂದಿನ ಪೀಳಿಗೆಗೂ ದಾಟಿಸುವ ಪಯತ್ನ ಮಾಡುತ್ತಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಆಸಕ್ತರಿಗೆ ಸಂಗೀತ ಗಾಯನ ಕಲಿಸುವ ಗುರಿ ಇಟ್ಟುಕೊಂಡಿದ್ದು, ಬುದ್ಧ ಬಸವ, ಅಂಬೇಡ್ಕರ್, ಕುವೆಂಪು, ನಾಲ್ವಡಿ ಕೃಷ್ಣರಾಜ ಒಡೆಯರ್ ರವರ ಆಶಯಗಳನ್ನು ಗೀತೆಗಳ ಮೂಲಕ ಯುವ ಜನರ ಮುಂದೆ ಪ್ರಸ್ತುತ ಪಡಿಸುತ್ತಾ ಸಮಾಜವನ್ನು ಸರಿದಾರಿಗೆ ತರಲು ಜಾಗೃತಿ ಮೂಡಿಸಬೇಕು ಎಂಬುದು ಅವರ ಆಶಯವಾಗಿದೆ.

 

ಆಂದೋಲನ ಡೆಸ್ಕ್

Recent Posts

ಹನೂರು| ಶಿರಗೋಡು ಗ್ರಾಮದಲ್ಲಿ ಅದ್ಧೂರಿಯಾಗಿ ಜರುಗಿದ ಶ್ರೀ ಲಕ್ಷ್ಮೀ ವೆಂಕಟೇಶ್ವರ ರಥೋತ್ಸವ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಶಿರಗೋಡು ಗ್ರಾಮದ ಶ್ರೀ ಲಕ್ಷ್ಮಿ ವೆಂಕಟೇಶ್ವರ ದೇವಾಲಯದಲ್ಲಿ ರಥೋತ್ಸವ ಭಾನುವಾರ ಬೆಳಿಗ್ಗೆ…

1 hour ago

ಇರಾನ್ ಇಸ್ರೇಲ್ ಸಂಘರ್ಷ ತೈಲ ಬೆಲೆ ಚಿನ್ನದ ಬೆಲೆ ಏರಿಕೆ ..?

ಟೆಹರಾನ್‌: ಇರಾನ್ ಮೇಲೆ ಇಸ್ರೇಲ್ ಅಮೆರಿಕ ಜಂಟಿಯಾಗಿ ದಾಳಿ ನಡೆಸಿದ ಪರಿಣಾಮ ಇದೀಗ ಇರಾನ್ ಕೂಡ ಪ್ರತೀಕಾರವಾಗಿ ಇಸ್ರೇಲ್ ಅಮೆರಿಕಾ…

2 hours ago

ಕೊಡಗು| ಬೆಟ್ಟತ್ತೂರು ಬಳಿ ಆನೆ ದಾಳಿಗೆ ವಿದ್ಯಾರ್ಥಿನಿ ಬಲಿ

ಕೊಡಗು: ಆನೆ ದಾಳಿಗೆ ವಿದ್ಯಾರ್ಥಿನಿ ಬಲಿಯಾಗಿರುವ ಘಟನೆ ಕೊಡಗಿನಲ್ಲಿ ನಡೆದಿದೆ. ಮದೆ ಬೆಟ್ಟತ್ತೂರು ಗ್ರಾಮದ ಗಿರೀಶ್‌ ಎಂಬುವವರ ಪುತ್ರಿ ಪೂಜಾ…

2 hours ago

ಕಾಂಗ್ರೆಸ್‌ಗೆ ಹೆಚ್ಚಿನ ಸೀಟು ಇಲ್ಲ: ಡಿಎಂಕೆ ಸ್ಪಷ್ಟ ಸಂದೇಶ

ತಮಿಳುನಾಡು: ತಮಿಳುನಾಡು ವಿಧಾನಸಭಾ ಚುನಾವಣೆ 2026ರ ಸೀಟು ಹಂಚಿಕೆ ಮಾತುಕತೆ ಆರಂಭವಾಗಿದೆ. ಜಾತ್ಯಾತೀತ ಪ್ರಗತಿಪರ ಮೈತ್ರಿಕೂಟದ ಪಕ್ಷಗಳಿಗೆ ಸೀಟು ಹಂಚಿಕೆ…

3 hours ago

ಚನ್ನಪಟ್ಟಣದಲ್ಲಿ ಕಾಡಾನೆ ಸೆರೆಗೆ ಸಾಕಾನೆಗಳ ಮೂಲಕ ಕಾರ್ಯಾಚರಣೆ

ರಾಮನಗರ: ಚನ್ನಪಟ್ಟಣ-ರಾಮನಗರ ಭಾಗದಲ್ಲಿ ಕಾಡಾನೆ ಉಪಟಳ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ಎರಡು ಕಾಡಾನೆಗಳ ಸೆರೆಗೆ ಸರ್ಕಾರ ಅನುಮತಿ ನೀಡಿದೆ. ಚನ್ನಪಟ್ಟಣದ ಬಿ.ವಿ.ಹಳ್ಳಿ…

3 hours ago

ಚಿಕ್ಕಬಳ್ಳಾಪುರಕ್ಕೂ ಅಲಿ ಖಮೇನಿಗೂ ಇದೆ ನಂಟು

ಚಿಕ್ಕಬಳ್ಳಾಪುರ: ಇಸ್ರೇಲ್‌ ಹಾಗೂ ಅಮೇರಿಕಾ ನಡೆಸಿದ ದಾಳಿಯಲ್ಲಿ ಇರಾನ್‌ ಸರ್ವೋಚ್ಛ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆಯಾಗಿದ್ದು, ಖನೇನಿಯ ಮಗಳು,…

3 hours ago