ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ೫,೧೮೦ ಕ್ಲರ್ಕ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಅರ್ಜಿ ಸಲ್ಲಿಸಲು ಆ.೨೬ ಕಡೆಯ ದಿನ. ಇದರಲ್ಲಿ ಕರ್ನಾಟಕ ರಾಜ್ಯಕ್ಕೆ ೨೭೦ ಹುದ್ದೆಗಳು ಮೀಸಲಿವೆ. ೨೦ರಿಂದ ೨೮ ವರ್ಷ ವಯಸ್ಸಿನ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಪದವಿ ಪಡೆದಿರ ಬೇಕು. ಜೊತೆಗೆ ಪದವಿ ಅಂತಿಮ ವರ್ಷದ ವಿದ್ಯಾರ್ಥಿಗಳೂ ಅರ್ಜಿ ಸಲ್ಲಿಸ ಬಹುದು.
ಸರ್ಕಾರದ ನಿಯಮ ಗಳ ಪ್ರಕಾರ ಮೀಸಲಾತಿ ವರ್ಗದ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ವಿನಾಯಿತಿ ಇದೆ.
ನೇಮಕಾತಿ ಅಧಿಸೂಚನೆ ಪ್ರಕಾರ ಒಬ್ಬ ಅಭ್ಯರ್ಥಿಯು ಒಂದು ರಾಜ್ಯಕ್ಕೆ ಮಾತ್ರ ಅರ್ಜಿ ಸಲ್ಲಿಸಬಹುದು. ಅರ್ಜಿದಾರರು ತಾವು ಅರ್ಜಿ ಸಲ್ಲಿಸುತ್ತಿರುವ ರಾಜ್ಯದ ಸ್ಥಳೀಯಭಾಷೆಯ ಬಗ್ಗೆ ಉತ್ತಮ ಜ್ಞಾನ ವನ್ನು ಹೊಂದಿರಬೇಕು. ಅಂದರೆ ಅರ್ಜಿ ದಾರರು ಆಯಾ ರಾಜ್ಯದ ಸ್ಥಳೀಯ ಭಾಷೆಯನ್ನು ಓದಲು, ಬರೆ ಯಲು, ಮಾತನಾಡಲು ಮತ್ತು ಅರ್ಥಮಾಡಿಕೊಳ್ಳುವ ಸಾಮರ್ಥ್ಯ ಹೊಂದಿರಬೇಕು.
ಅರ್ಜಿ ಶುಲ್ಕ ಎಷ್ಟು? ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಪಾವತಿ ಯಿಂದ ವಿನಾಯಿತಿ ನೀಡಲಾಗಿದೆ. ಆದರೆ, ಸಾಮಾನ್ಯ, ಇಡಬ್ಲ್ಯುಎಸ್ ಮತ್ತು ಒಬಿಸಿ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳು ೭೫೦ ರೂ. ಶುಲ್ಕ ಪಾವತಿಸಬೇಕು.
ಆಯ್ಕೆ ಪ್ರಕ್ರಿಯೆ ಹೇಗೆ?: ಅಭ್ಯರ್ಥಿಗಳು ಮೂರು ಹಂತದ ಆಯ್ಕೆ ಪ್ರಕ್ರಿಯೆಯನ್ನು ಎದುರಿಸಬೇಕಾಗುತ್ತದೆ. ಮೊದಲ ಹಂತದಲ್ಲಿ ಪ್ರಾಥಮಿಕ ಪರೀಕ್ಷೆ, ಇದರಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಎರಡನೇ ಹಂತದಲ್ಲಿ ಮುಖ್ಯ ಪರೀಕ್ಷೆಗೆ ಹಾಜರಾಗಲು ಅರ್ಹತೆ ಪಡೆಯುತ್ತಾರೆ.
ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿವರೆಗೆ ರಾಜ್ಯದ ಸ್ಥಳೀಯ ಭಾಷೆ ಯಲ್ಲಿ ಅಧ್ಯಯನ ಮಾಡದ ಅಭ್ಯರ್ಥಿಗಳು ಮುಖ್ಯ ಪರೀಕ್ಷೆಯಲ್ಲಿ ಉತ್ತೀರ್ಣರಾದರೂ ಸ್ಥಳೀಯ ಭಾಷೆಯ ಪರೀಕ್ಷೆಯನ್ನು ಎದುರಿಸ ಬೇಕಾಗುತ್ತದೆ. ಅಭ್ಯರ್ಥಿಗಳು ಈಗಲೇ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಅಧಿಕೃತ ವೆಬ್ ಸೈಟ್ https://bank.sbi/web/ careers ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಿ





