Mysore
26
broken clouds

Social Media

ಶುಕ್ರವಾರ, 05 ಡಿಸೆಂಬರ್ 2025
Light
Dark

ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದಲ್ಲಿ ವಿವಿಧ ಹುದ್ದೆಗಳು

airport jobs

ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರವು ೯೭೬ ಜೂನಿಯರ್ ಎಕ್ಸಿಕ್ಯುಟಿವ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಆರ್ಕಿಟೆಕ್ಚರ್, ಸಿವಿಲ್, ಎಲೆಕ್ಟ್ರಿಕಲ್, ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್, ಐಟಿ ಹಿನ್ನೆಲೆಯ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಆ.೨೮ ರಿಂದ ಸೆ.೨೭ರವರೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. ಆಸಕ್ತ ಅಭ್ಯರ್ಥಿಗಳು ಪ್ರಾಧಿಕಾರದ ಅಧಿಕೃತ ವೆಬ್ ಸೈಟ್ aai.aero ಗೆ ಭೇಟಿ ನೀಡಿ ಆನ್ ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ಹುದ್ದೆಗಳ ವಿವರ ಜೂನಿಯರ್ ಎಕ್ಸಿಕ್ಯುಟಿವ್ (ಆರ್ಕಿಟೆಕ್ಚರ್) ೧೧, ಸಿವಿಲ್ ಇಂಜಿನಿಯರಿಂಗ್-೧೯೯, ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ೨೦೮, ಮಾಹಿತಿ ತಂತ್ರಜ್ಞಾನ ೩೧ ಹುದ್ದೆಗಳು ಸೇರಿದಂತೆ ಒಟ್ಟು ೯೭೬ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.

ಶೈಕ್ಷಣಿಕ ಅರ್ಹತೆ:  ಜೂನಿಯರ್ ಎಕ್ಸಿಕ್ಯುಟಿವ್ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು, ಆರ್ಕಿಟೆಕ್ಚರ್, ಸಿವಿಲ್, ಎಲೆಕ್ಟ್ರಿಕಲ್, ಎಲೆಕ್ಟ್ರಾನಿಕ್ಸ್ ಹಾಗೂ ಕಂಪ್ಯೂಟರ್ ಇಂಜಿನಿಯರಿಂಗ್ ಅಥವಾ ಐಟಿಯಂತಹ ಸಂಬಂಧಿತ ವಿಷಯದಲ್ಲಿ ಸ್ನಾತಕೋತ್ತರ ಪದವೀಧರರಾಗಿರಬೇಕು. ಇದರ  ಜೊತೆಗೆ ಅಭ್ಯರ್ಥಿಗಳು ಗೇಟ್ ಪರೀಕ್ಷೆಯ ಸ್ಕೋರ್ ಕಾರ್ಡ್ ಹೊಂದಿರಬೇಕು.

ವಯೋಮಿತಿ ಈ ಹುದ್ದೆಗಳಿಗೆ ಗರಿಷ್ಟ ವಯೋಮಿತಿಯನ್ನು ೨೭ ವರ್ಷಗಳಿಗೆ ನಿಗದಿಪಡಿಸಲಾಗಿದೆ. ಈ ವಯೋಮಿತಿಯನ್ನು ೨೦೨೫ರ ಸೆ.೨೭ರವರೆಗೆ ಪರಿಗಣಿಸಲಾಗುತ್ತದೆ. ಆದರೂ ಮೀಸಲು ವರ್ಗದ ಅಭ್ಯರ್ಥಿಗಳಿಗೆ ನಿಯಮಗಳ ಪ್ರಕಾರ ವಯೋಮಿತಿಯಲ್ಲಿ ಸಡಿಲಿಕೆ ಇದೆ.

Tags:
error: Content is protected !!