ಭಾರತ ಸರ್ಕಾರದ ಸಾರ್ವಜನಿಕ ಸೇವಾ ಪ್ರಸಾರ ಸಂಸ್ಥೆಯಾದ ಪ್ರಸಾರ ಭಾರತಿಯು ದೇಶಾದ್ಯಂತ 821ತಾಂತ್ರಿಕ ಇಂಟರ್ನ್‌ಶಿಪ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.
ಇಂಜಿನಿಯರಿಂಗ್ ಪದವೀಧರರಿಗೆ ಆದ್ಯತೆ ನೀಡಲಿದ್ದು, ಜುಲೈ 01ರೊಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಇವು ತಾತ್ಕಾಲಿಕ ಹುದ್ದೆಗಳಾಗಿದ್ದು, ತಿಂಗಳಿಗೆ 25000 ರೂ. ಸ್ಟೈಫಂಡ್ ನೀಡಲಾಗುತ್ತದೆ. ದೇಶಾದ್ಯಂತ ಉತ್ತರ, ದಕ್ಷಿಣ, ಪೂರ್ವ, ಪಶ್ಚಿಮ, ಹೊಸದಿಲ್ಲಿ ಮತ್ತು ಈಶಾನ್ಯ ಈ ಆರು ವಲಯಗಳಲ್ಲಿ ಖಾಲಿ ಇರುವ ತಾಂತ್ರಿಕ ಇಂಟರ್ನ್‌ಶಿಪ್ ಹುದ್ದೆಗಳಿಗೆ ನೇಮಕಾತಿ ಸಂಬಂಧ ಅಧಿಸೂಚನೆ ಹೊರಡಿಸಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಂಬಂಧಿಸಿದ ವಿಭಾಗದಲ್ಲಿ ಇಂಜಿನಿಯರಿಂಗ್ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದಿರಬೇಕು. ಎಲೆಕ್ಟ್ರಾನಿಕ್ಸ್, ದೂರಸಂಪರ್ಕ, ಎಲೆಕ್ಟ್ರಿಕಲ್, ಸಿವಿಲ್, ಮಾಹಿತಿ ತಂತ್ರಜ್ಞಾನ ಅಥವಾ ಗಣಕ ವಿಜ್ಞಾನ ವಿಭಾಗಗಳಲ್ಲಿ ಶೇ.65 ಅಂಕಗಳೊಂದಿಗೆ ಉತ್ತೀರ್ಣರಾಗಿರುವವರಿಗೆ ನೇಮಕಾತಿಯಲ್ಲಿ ಆದ್ಯತೆ ನೀಡಲಾಗುವುದು. 2024-25ನೇ ಸಾಲಿನಲ್ಲಿ ಇಂಜಿನಿಯರಿಂಗ್ ಪದವಿ ಪಡೆದವರೂ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಲಿದ್ದು, ಆಯ್ಕೆಯಾದವರಿಗೆ ಇಂಟರ್ನ್ ಶಿಪ್ ಅವಧಿಯು ಒಂದು ವರ್ಷದ್ದಾಗಿರುತ್ತದೆ. ಹೆಚ್ಚಿನ ಮಾಹಿತಿ ಹಾಗೂ ಅನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಸಾರ ಭಾರತಿಯ ಅಧಿಕೃತ ವೆಬ್‌ಸೈಟ್ prasarbharati. gov.inಗೆ ಭೇಟಿ ಕೊಡಿ.





