ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳಲ್ಲಿ ಪದವಿ ಪಡೆದ ವಿದ್ಯಾರ್ಥಿಗಳಿಗೆ ಇದು ಪ್ರಮುಖ ಸುದ್ದಿ.ಇಂಜಿನಿಯರಿಂಗ್ ಮತ್ತು ಇತರೆ ಕ್ಷೇತ್ರಗಳಲ್ಲಿ ಸ್ನಾತಕೋತ್ತರ ಅಧ್ಯಯನ ಮತ್ತು ಪಿಎಸ್‌ಯು ಉದ್ಯೋಗಗಳಿಗೆ GATE(ಗೇಟ್ ) ಪ್ರಮುಖ ಅರ್ಹತಾ ಪರೀಕ್ಷೆಯಾಗಿದೆ. ಇಂಡಿಯನ್ ಇನ್ಸ್‌ಟಿ ಟ್ಯೂಟ್ ಆಫ್‌ ಟೆಕ್ನಾಲಜಿ (ಐಐಟಿ) ಗುವಾಹಟಿಯು ಗ್ರ್ಯಾಜುಯೇಟ್ ಆಪ್ಟಿಟ್ಯೂಡ್ ಟೆಸ್ಟ್ ಇನ್ ಇಂಜಿನಿಯರಿಂಗ್ (ಗೇಟ್) ೨೦೨೬ರ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಇದರೊಂದಿಗೆ ಗೇಟ್

೨೦೨೫ಕ್ಕಾಗಿ ನೋಂದಣಿ ಪ್ರಕ್ರಿಯೆ ಸಹ ಆರಂಭವಾಗಿದೆ. ಗೇಟ್ (GATE))೨೦೨೬ ಅನ್ನು ಐಐಟಿ ಗುವಾಹಟಿ ಆಯೋಜಿಸುತ್ತಿದೆ. ಹೀಗಾಗಿ ಐಐಟಿ ಗುವಾಹಟಿ ಗೇಟ್-೨೦೨೬ರ ಅಧಿಕೃತ ವೆಬ್ ಸೈಟ್‌ಗೆ ಭೇಟಿ ನೀಡುವ ಮೂಲಕ ನೋಂದಣಿ ಮಾಡಬಹುದು. ಗೇಟ್ ೨೦೨೬ಕ್ಕೆ ನೋಂದಾಯಿಸಲು ಸೆ.೨೮ ಕೊನೆಯ ದಿನಾಂಕ ಎಂದು ನಿಗದಿಪಡಿಸಲಾಗಿದ್ದು, ಸೆ.೨೮ರವರೆಗೆ ಆನ್ ಲೈನ್ ನೋಂದಣಿ ತೆರೆದಿರುತ್ತದೆ.

ಪರೀಕ್ಷೆಯು ೨೦೨೬ರ -.೭,೮,೧೪ ಮತ್ತು ೧೫ರಂದು ನಡೆಯಲಿದೆ. ಮಾ.೧೯ರಂದು ಫಲಿತಾಂಶ ಪ್ರಕಟವಾಗಲಿದೆ. ಆದರೂ ಪರೀಕ್ಷಾ ವೇಳಾಪಟ್ಟಿ ಬದಲಾಗುವ ಸಾಧ್ಯತೆ ಇದೆ ಎಂದು ಐಐಟಿ ಗುವಾಹಟಿ ತಿಳಿಸಿದೆ. ಹೀಗಾಗಿ ನಿಯಮಿತವಾಗಿ ಐಐಟಿ ಗುವಾಹಟಿ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿ ಪಡೆಯಿರಿ. ಗೇಟ್  (GATE) ಎಂದರೇನು ಮತ್ತು ಪಿಎಸ್‌ಯು (PSU)ಗಳಲ್ಲಿ ಉದ್ಯೋಗ ಪಡೆಯಲು ಇದು ಹೇಗೆ ಅಗತ್ಯ? ಗೇಟ್ ರಾಷ್ಟ್ರಮಟ್ಟದ ಆಪ್ಟಿಟ್ಯೂಡ್ ಪರೀಕ್ಷೆಯಾಗಿದ್ದು, ಇದನ್ನು ಇಂಜಿನಿಯರಿಂಗ್, ವಿಜ್ಞಾನ, ವಾಣಿಜ್ಯ,ವಾಸ್ತುಶಿಲ್ಪ ಸೇರಿದಂತೆ ಮಾನವಿಕ ವಿಷಯಗಳಲ್ಲಿ ಪದವಿ ಪಡೆದ ವಿದ್ಯಾರ್ಥಿಗಳಿಗೆ ನಡೆಸಲಾಗುತ್ತದೆ.

ಗೇಟ್ ಅನ್ನು ಐಐಟಿ (IIT) ಮತ್ತು ಐಐಎಸ್‌ಸಿ (IISc)ಗಳು ಜಂಟಿಯಾಗಿ ಆಯೋಜಿಸುತ್ತವೆ. ಐಐಟಿ ಮತ್ತು ಐಐಎಸ್‌ಸಿಗಳಲ್ಲಿ ಸ್ನಾತಕೋತ್ತರ ಅಥವಾ ಪಿಜಿ ಕಾರ್ಯಕ್ರಮಗಳಿಗೆ ಪ್ರವೇಶವು ಗೇಟ್ (GATE) PSU ಗಳಲ್ಲಿ ನೇಮಕಾತಿಗೆ ಅರ್ಜಿ ಸಲ್ಲಿಸಲು ಗೇಟ್ ಕನಿಷ್ಠ ಅರ್ಹತೆಯಾಗಿದೆ. ನೀವು ಗೇಟ್ ಉತ್ತೀರ್ಣರಾದ ನಂತರ ಮುಂದಿನ ಮೂರು ವರ್ಷಗಳವರೆಗೆ ಅದು ಮಾನ್ಯವಾಗಿರುತ್ತದೆ.

ಆಂದೋಲನ ಡೆಸ್ಕ್

Recent Posts

ಯುಪಿಯಲ್ಲಿ ತಯಾರಾಗುತ್ತಿರುವ ಬ್ರಹ್ಮೋಸ್‌ ಕ್ಷಿಪಣಿಗಳು ಪಾಕ್‌ ನಿದ್ದೆಗೆಡಿಸಿವೆ: ಅಮಿತ್‌ ಶಾ

ಲಕ್ನೋ: ಉತ್ತರ ಪ್ರದೇಶದಲ್ಲಿ ರಕ್ಷಣಾ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ದೊರೆಯುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ.…

12 hours ago

ಪ್ರಜಾಪ್ರಭುತ್ವ ರಕ್ಷಿಸಲು ಗಾಂಧಿ ಜಯಂತಿಯಂದು ಪ್ರತಿಜ್ಞೆ ಮಾಡೋಣ: ಅಭಿಜಿತ್‌ ದೀಪ್ಕೆ

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಕಾಕ್ರೋಚ್ ಜನತಾ ಪಾರ್ಟಿ, ಅಂದರೆ ಸಿಜೆಪಿ ಆಗ್ರಹಿಸಿದೆ. ಸಿಜೆಪಿ…

13 hours ago

ಕೊಡಗು ಜಿಲ್ಲೆಯಲ್ಲಿ ಮುಂದುವರಿದ ಮಳೆ

ಕೊಡಗು: ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 20.89 ಮಿ.ಮೀ. ಮಳೆಯಾಗಿದೆ. ಕಳೆದ…

13 hours ago

ಜನರೊಂದಿಗೆ ಬೆರೆಯುವುದು ಅದ್ಭುತ ಅನುಭವ: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಸೇವಾ ಸಂಕಲ್ಪ ಅಭಿಯಾನದಡಿ ವಾರಣಾಸಿಯಿಂದ ಗುಜರಾತ್‌ನ ವಡನಗರಕ್ಕೆ ತೆರಳುತ್ತಿರುವ ಯುವಕರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಂವಾದ ನಡೆಸಿದರು. ವಿಡಿಯೋ…

13 hours ago

2028ಕ್ಕೂ ಡಿಕೆಶಿ ಸಿಎಂ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ: ಸತೀಶ್ ಜಾರಕಿಹೊಳಿ

ಮೈಸೂರು: 2028ರಲ್ಲೂ ಡಿ.ಕೆ. ಶಿವಕುಮಾರ್ ಅವರೇ ಮುಖ್ಯಮಂತ್ರಿಯಾಗಲಿ. ಅವರ ನೇತೃತ್ವದಲ್ಲೇ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರಲಿ ಎಂದು ಸತೀಶ್…

16 hours ago

ಓದುಗರ ಪತ್ರ: ವಿದ್ಯುತ್ ಕಡಿತ ಮುಂಚಿತವಾಗಿ ಪ್ರಕಟಿಸಿ

ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…

22 hours ago