ಕರ್ಫ್ಯೂ ಸಡಿಲಿಕೆ: ಎಪಿಎಂಸಿ, ದಿನಸಿ ಅಂಗಡಿ ಮಧ್ಯಾಹ್ನ 12ರವರೆಗೂ ತೆರೆಯಲು ಅವಕಾಶ
ಬೆಂಗಳೂರು: ಕೋವಿಡ್ ನಿಯಂತ್ರಣಕ್ಕಾಗಿ ವಿಧಿಸಲಾಗಿದ್ದ ಕರ್ಫ್ಯೂನಲ್ಲಿ ಸಡಿಲಿಕೆಯಾಗಿದ್ದು, ಎಪಿಎಂಸಿ ಹಾಗೂ ದಿನಸಿ ಅಂಗಡಿಗಳು ಬೆಳಿಗ್ಗೆ 6ರಿಂದ ಮಧ್ಯಾಹ್ನ 12 ಗಂಟೆವರೆಗೂ ತೆರೆಯಲು ಅನುಮತಿ ನೀಡಲಾಗಿದೆ.
ಮಾರುಕಟ್ಟೆಯಲ್ಲಿ ಆಗುತ್ತಿರುವ ಜನಸಂದಣಿ, ನೂಕು ನುಗ್ಗಲು ತಪ್ಪಿಸಲು ಇಂದಿನಿಂದಲೇ (ಭಾನುವಾರ) ಅನ್ವಯವಾಗುವಂತೆ ಎಲ್ಲಾ ರೀತಿಯ ಸಂತೆ, ವಾರದ ಸಂತೆಗಳನ್ನು ನಿರ್ಬಂಧಿಸಲಾಗಿದೆ. ಇದರ ಬದಲಿಗೆ ಬೆಳಿಗ್ಗೆ 6ರಿಂದ ಸಂಜೆ 6 ಗಂಟೆವರೆಗೆ ಹಾಪ್ಕಾಮ್ಸ್, ಹಾಲಿನ ಬೂತ್ಗಳು ತೆರೆಯಲು ಅವಕಾಶ ಕಲ್ಪಿಸಲಾಗಿದೆ. ಈ ವೇಳೆ ಕೋವಿಡ್ ನಿಯಮ ಪಾಲಿಸುವುದು ಕಡ್ಡಾಯವಾಗಿದೆ.
ತಳ್ಳುವಗಾಡಿ ಮೂಲಕ ಹಣ್ಣು ತರಕಾರಿಗಳನ್ನು ದುಬಾರಿ ಬೆಲೆಗೆ ಮಾರಾಟ ಮಾಡದೇ ಮಾರುಕಟ್ಟೆ ಬೆಲೆಗೆ ಮಾರುವಂತೆ ಸರ್ಕಾರ ಆದೇಶ ಹೊರಡಿಸಿದೆ.