ಮೈಸೂರಿನ ಪೊಲೀಸ್‌ ಕಮಿಷನರ್‌ ಆಗಿದ್ದ ಐಪಿಎಸ್‌ ಅಧಿಕಾರಿ ಭಾಸ್ಕರ್‌ ರಾವ್‌ ಸ್ವಯಂ ನಿವೃತ್ತಿಗೆ ಅರ್ಜಿ

ಬೆಂಗಳೂರು: 2007ರಲ್ಲಿ ಮೈಸೂರಿನ ಪೊಲೀಸ್‌ ಕಮಿಷನರ್‌ ಆಗಿದ್ದ ಐಪಿಎಸ್‌ ಅಧಿಕಾರಿ ಭಾಸ್ಕರ್‌ ರಾವ್‌ ಅವರು ಸ್ವಯಂ ನಿವೃತ್ತಿಗೆ ಅವಕಾಶ ಕೋರಿ ಅರ್ಜಿ ಸಲ್ಲಿಸಿದ್ದಾರೆ.

ಪ್ರಸ್ತುತ ಅವರು ರೈಲ್ವೆ ಇಲಾಖೆ ಎಡಿಜಿಪಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

1990ನೇ ಕರ್ನಾಟಕ ಕೇಡರ್ ಐಪಿಎಸ್ ಅಧಿಕಾರಿಯಾಗಿರುವ ಭಾಸ್ಕರ್ ರಾವ್, ನಿವೃತ್ತಿಗೆ ಇನ್ನೂ ಮೂರು ವರ್ಷ ಬಾಕಿ ಇರುವಾಗಲೇ ನಿವೃತ್ತಿಗೆ ಅರ್ಜಿ ಸಲ್ಲಿಸಿದ್ದಾರೆ.

ಭಾಸ್ಕರ್ ರಾವ್ ಅವರ ದಿಢೀರ್ ನಿರ್ಧಾರಕ್ಕೆ ಕಾರಣ ತಿಳಿದುಬಂದಿಲ್ಲ. ಸ್ವಯಂ ನಿವೃತ್ತಿಗೆ ವೈಯಕ್ತಿಕ ಕಾರಣ ನೀಡಿದ್ದಾರೆ. ಈ ಸಂಬಂಧ ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ಡಿಜಿ & ಐಜಿಪಿಗೆ ರಾಜೀನಾಮೆ ಪತ್ರ ಬರೆದಿದ್ದಾರೆ.

ಭಾಸ್ಕರ್ ರಾವ್ ಮನವಿಗೆ ಸರ್ಕಾರ ಒಪ್ಪಿಗೆ ನೀಡಬೇಕು. ಅಲ್ಲಿಯವರೆಗೆ ಭಾಸ್ಕರ್ ರಾವ್ ಅವರು ಎಡಿಜಿಪಿಯಾಗಿ ಕಾರ್ಯನಿರ್ವಹಿಸಲಿದ್ದಾರೆ.

ನಿವೃತ್ತಿ ವಿಷಯ ಪ್ರಸ್ತಾಪಿಸುತ್ತಿದ್ದಂತೆ ಭಾಸ್ಕರ್‌ ರಾವ್‌ ಅವರು ರಾಜಕೀಯ ಪ್ರವೇಶಿಸಲಿದ್ದಾರೆ ಎಂಬ ಚರ್ಚೆ ಶುರುವಾಗಿದೆ. ಬಸವನಗುಡಿ ಕ್ಷೇತ್ರದಿಂದ ಚುನಾವಣೆಗೂ ಸ್ಪರ್ಧೆ ಮಾಡುವ ಚಿಂತನೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.

 

× Chat with us