ಆಷಾಢ: ಚಾಮುಂಡಿಬೆಟ್ಟಕ್ಕೆ ಪ್ರವೇಶ ನಿರ್ಬಂಧಿಸಿ ಪೊಲೀಸರ ಕಣ್ಗಾವಲು

ಮೈಸೂರು: ಆಷಾಢ ಶುಕ್ರವಾರ ಹಾಗೂ ಅಮಾವಾಸ್ಯೆ ಹಿನ್ನೆಲೆಯಲ್ಲಿ ವಿವಿಧೆಡೆ ಸಾರ್ವಜನಿಕರು ದೇವಾಲಯಗಳಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ. ಆದರೆ, ನಗರದ ಚಾಮುಂಡಿಬೆಟ್ಟಕ್ಕೆ ಜನರ ಭೇಟಿಗೆ ನಿರ್ಬಂಧ ವಿಧಿಸಲಾಗಿದೆ.

ಕೋವಿಡ್‌ ಹಿನ್ನೆಲೆಯಲ್ಲಿ ಆಷಾಢ ಶುಕ್ರವಾರಗಳಂದು ಬೆಟ್ಟಕ್ಕೆ ಸಾರ್ವಜನಿಕರ ಭೇಟಿ ನಿರ್ಬಂಧಿಸಿ ಡಿಸಿ ಆದೇಶ ಹೊರಡಿಸಿದ್ದಾರೆ.

ಮೈಸೂರಿನಲ್ಲಿ ಸೋಂಕು ಪ್ರಕರಣಗಳಲ್ಲಿ ಯಾವುದೇ ಇಳಿಕೆ ಕಂಡುಬಂದಿಲ್ಲ. ಜನರಿಗೆ ಅವಕಾಶ ಕೊಟ್ಟರೆ ಸೋಂಕು ಹೆಚ್ಚು ಹರಡುವ ಸಾಧ್ಯತೆ ಇದೆ. ಹೀಗಾಗಿ, 4 ಆಷಾಢ ಶುಕ್ರವಾರ, 2 ಅಮಾವಾಸ್ಯೆ ದಿನ ಭೇಟಿಗೆ ನಿರ್ಬಂಧ ಹೇರಲಾಗಿದೆ.

ಜು.9 ಆಷಾಡ ಅಮಾವಾಸ್ಯೆ, ಜು.16 ಮೊದಲನೇ ಆಷಾಡ ಶುಕ್ರವಾರ, ಜು.23ರಂದು 2ನೇ ಆಷಾಡ ಶುಕ್ರವಾರ, ಜು.30 ಮೂರನೇ ಆಷಾಡ ಶುಕ್ರವಾರ, ಅಮ್ಮನವರ ವರ್ಧಂತಿ, ಆ.6 ನಾಲ್ಕನೇ ಆಷಾಡ ಶುಕ್ರವಾರ, ಆ.8 ಭೀಮನ ಆಮಾವಾಸ್ಯೆ ದಿನ ನಿರ್ಬಂಧ ಹಾಕಲಾಗಿದೆ.