ಚಾಮರಾಜನಗರದ, ಸಿಂಹ ಚಲನಚಿತ್ರಮಂದಿರದ ಎದುರಿರುವ ಎಲ್‌ಐಸಿ ಕಚೇರಿಯ ಮುಂಭಾಗದಲ್ಲಿ ನಂಜನಗೂಡು-ಮೈಸೂರು ಸೇರಿದಂತೆ ವಿವಿಧ ಮಾರ್ಗಗಳ ಬಸ್‌ಗಳು ಸಂಚರಿಸುತ್ತವೆ. ಈ ಸ್ಥಳದಲ್ಲಿ ಬಸ್ ತಂಗುದಾಣವಿಲ್ಲದೆ ಸಾರ್ವಜನಿಕರು ಬೇಸಿಗೆಯಲ್ಲಿ ಬಿಸಿಲಿನಲ್ಲೇ ನಿಲ್ಲಬೇಕಾಗಿದೆ. ಮಳೆಗಾಲದಲ್ಲಿ ಬಸ್‌ಗಾಗಿ ಕಾಯುವವರು ಯಾವುದಾದರೂ ಅಂಗಡಿಗಳನ್ನು ಆಶ್ರಯಿಸುವುದು ಅನಿವಾರ್ಯವಾಗಿದೆ. ಸಂಬಂಧಪಟ್ಟವರು ಕೂಡಲೇ …






