Mysore
21
overcast clouds

Social Media

ಗುರುವಾರ, 13 ಆಗಸ್ಟ್ 2026
Light
Dark

Author: ಅರ್ಚನ ಎಸ್‌ ಎಸ್

Home/ಅರ್ಚನ ಎಸ್‌ ಎಸ್
ಅರ್ಚನ ಎಸ್‌ ಎಸ್

ಅರ್ಚನ ಎಸ್‌ ಎಸ್

ಮೈಸೂರು: ಕಾಂಗ್ರೆಸ್‌ ಸರ್ಕಾರ ಮೆಟ್ರೋ ದರ ಏರಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ಬೊಟ್ಟು ಮಾಡಿ ತೋರಿಸುವುದನ್ನು ಮೊದಲು ಬಿಡಬೇಕು ಎಂದು ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಿಎಂ ಡಿ.ವಿ.ಸದಾನಂದಗೌಡ ಕಿಡಿಕಾರಿದ್ದಾರೆ. ಜಿಲ್ಲೆಯ ಟಿ.ನರಸೀಪುರ ತಾಲ್ಲೂಕಿನ ತ್ರಿವೇಣಿ ಸಂಗಮಕ್ಕೆ ಇಂದು(ಫೆಬ್ರವರಿ.12) …

ಮೈಸೂರು: ಜಿಲ್ಲೆಯ ಟಿ.ನರಸೀಪುರ ತಾಲ್ಲೂಕಿನ ತ್ರಿವೇಣಿ ಸಂಗಮದಲ್ಲಿ 13ನೇ ಕುಂಭಮೇಳ ನಡೆಯುತ್ತಿದ್ದು, ಸ್ನೇಹಿತರೊಂದಿಗೆ ಮಾಜಿ ಸಂಸದ ಪ್ರತಾಪ್‌ ಸಿಂಹ ಆಗಮಿಸಿ ಪುಣ್ಯಸ್ನಾನ ಮಾಡಿದ್ದಾರೆ. ಟಿ.ನರಸೀಪುರ ತಾಲ್ಲೂಕಿನ ತಿರುಮಲಕೂಡು ಬಳಿಯ ತ್ರಿವೇಣಿ ಸಂಗಮಕ್ಕೆ ಇಂದು(ಫೆಬ್ರವರಿ.12) ತಮ್ಮ ಸ್ನೇಹಿತರೊಂದಿಗೆ ಆಗಮಿಸಿ ಪುಣ್ಯಸ್ನಾನ ಮಾಡಿದ್ದಾರೆ. ಬಳಿಕ …

ಮೈಸೂರು: ಜಿಲ್ಲೆಯ ಟಿ.ನರಸೀಪುರ ತಾಲ್ಲೂಕಿನ ತ್ರಿವೇಣಿ ಸಂಗಮದಲ್ಲಿ ಕಳೆದ ಮೂರು ದಿನಗಳಿಂದ ಅದ್ದೂರಿಯಾಗಿ 13ನೇ ಕುಂಭಮೇಳ ನಡೆಯುತ್ತಿದ್ದು, ಭಕ್ತರು ಸಾಗರೋಪಾದಿಯಲ್ಲಿ ಹರಿದು ಬಂದು ಪುಣ್ಯಸ್ನಾನ ಮಾಡಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ತಿಳಿಸಿದ್ದಾರೆ. ಟಿ.ನರಸೀಪುರ ತಾಲ್ಲೂಕಿನ ತ್ರಿವೇಣಿ ಸಂಗಮದ ತೀರದಲ್ಲಿ …

ನವದೆಹಲಿ: ಕಳೆದ 2022ರಲ್ಲಿ ನಡೆದಿದ್ದ ಭಾರತ್‌ ಜೋಡೋ ಯಾತ್ರೆಯ ಸಂದರ್ಭದಲ್ಲಿ ಭಾರತೀಯ ಸೇನೆಯನ್ನು ಅವಹೇಳನ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿಗೆ ಲಕ್ನೋ ನ್ಯಾಯಾಲಯ ಸಮನ್ಸ್‌ ಜಾರಿ ಮಾಡಿದೆ. ಮಾರ್ಚ್.‌24ರಂದು ವಿಚಾರಣೆಗೆ ಹಾಜರಾಗುವಂತೆ ರಾಹುಲ್‌ ಗಾಂಧಿಗೆ ಎಸಿಜೆಎಂ ನ್ಯಾಯಾಲಯದ …

ಕೊಡಗು: ಕಳೆದ ಒಂದೂವರೆ ತಿಂಗಳಿನಿಂದ ಕೊಡಗಿನಲ್ಲಿ ತೀವ್ರ ವಿವಾದದ ಸ್ವರೂಪ ಪಡೆದಿದ್ದ ಪ್ರಕರಣಕ್ಕೆ ಈಗ ಹೈಕೋರ್ಟ್‌ ಮಧ್ಯಪ್ರವೇಶ ಮಾಡಿದೆ. ಕಟ್ಟೆಮಾಡುವಿನ ಶ್ರೀ ಮೃತ್ಯುಂಜಯ ದೇವಾಲಯಕ್ಕೆ ಸಾಂಪ್ರದಾಯಿಕ ಉಡುಪನ್ನು ಧರಿಸಿ ತೆರಳಬಹುದು ಎಂದು ಆದೇಶ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ದೇವಾಲಯಕ್ಕೆ ಕೊಡವ ಸಾಂಪ್ರದಾಯಿಕ …

ಬೆಂಗಳೂರು: ಮೈಸೂರಿನ ಉದಯಗಿರಿ ಪೊಲೀಸ್‌ ಠಾಣೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಗಲಭೆಕೋರರಿಗೆ ಇಡೀ ಸರ್ಕಾರ ಬೆಂಬಲ ನೀಡಿದ್ದು, ಅಧಿಕಾರಿಗಳಿಗೆ ರಕ್ಷಣೆ ಇಲ್ಲದಂತಾಗಿ ಪೊಲೀಸರ ಆತ್ಮಸ್ಥೈರ್ಯ ಕುಸಿದಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ತಿಳಿಸಿದರು. ವಿಧಾನಸೌಧದಲ್ಲಿ ಕೆಂಗಲ್‌ ಹನುಮಂತಯ್ಯ …

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಭಾಗವಹಿಸಿ ಫ್ಯೂಚರ್‌ ಆಫ್‌  ಇನ್ನೋವೇಶನ್‌ ಎಕ್ಸ್‌-ಪೋಗೆ ಚಾಲನೆ ನೀಡಿದರು. ಬೆಂಗಳೂರಿನ ಅರಮನೆ ಮೈದಾನದಲ್ಲಿ ನಿನ್ನೆಯಿಂದ ಇನ್‌ವೆಸ್ಟ್‌ ಕರ್ನಾಟಕ ಕಾರ್ಯಕ್ರಮ ನಡೆಯುತ್ತಿದ್ದು, ಇಂದು(ಫೆಬ್ರವರಿ.12) ಈ ಸಮಾವೇಶದಲ್ಲಿ ಭಾಗವಹಿಸಿ ಫ್ಯೂಚರ್ ಆಫ್ ಇನ್ನೋವೇಶನ್ ಎಕ್ಸ್-ಪೋಗೆ …

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಲೋಕಾಯುಕ್ತ ತನಿಖೆಯನ್ನು ಅಂತಿಮಗೊಳಿಸಿ ಐಜಿಪಿ ಸುಬ್ರಹ್ಮಣ್ಯೇಶ್ವರ್‌ ರಾವ್‌ ಅವರಿಗೆ ವರದಿ ಸಲ್ಲಿಕೆ ಮಾಡಿದ್ದಾರೆ. ಇಲ್ಲಿನ ಲೋಕಾಯುಕ್ತ ಕಚೇರಿಗೆ ಇಂದು(ಫೆಬ್ರವರಿ.12) ಮೈಸೂರು ಲೋಕಾಯುಕ್ತ ಎಸ್‌ಪಿ ಟಿ.ಜೆ.ಉದೇಶ್‌ ಅವರು ಮುಡಾ ಪ್ರಕರಣದ ವಿಚಾರವಾಗಿ ತನಿಖೆ ನಡೆಸಿರುವುದನ್ನು ಮುಚ್ಚಿದ …

ಬೆಂಗಳೂರು: ಕರ್ನಾಟಕದಲ್ಲಿ ಕೈಗಾರಿಕಾ ಯೋಜನೆಗಳಿಗೆ ತ್ವರಿತ ಗತಿಯಲ್ಲಿ ಅನುಮೋದನೆ ನೀಡಬಲ್ಲ ಮತ್ತು ಉದ್ಯಮಗಳಿಗೆ ಸಂಬಂಧಿಸಿದಂತೆ 30ಕ್ಕೂ ಹೆಚ್ಚು ಇಲಾಖೆಗಳ 150 ಸೇವೆಗಳನ್ನು ಒಂದೇ ವೇದಿಕೆಯಲ್ಲಿ ಒದಗಿಸುವಂತಹ ಉದ್ಯಮಸ್ನೇಹಿ ಪರಿಷ್ಕೃತ ಏಕಗವಾಕ್ಷಿ ಪೋರ್ಟಲ್ ಅನ್ನು ಸಿಎಂ ಸಿದ್ದರಾಮಯ್ಯ ಅವರು  ಉದ್ಘಾಟಿಸಿ ಲೋಕಾರ್ಪಣೆಗೊಳಿಸಿದ್ದಾರೆ. ಬೆಂಗಳೂರಿನ …

ಬೆಂಗಳೂರು: ಮೂಲಸೌಕರ್ಯ ಮತ್ತು ಕಾರ್ಯ ಪರಿಸರವನ್ನು ಹೊಂದಿರುವ ಬೆಂಗಳೂರು ವಿಶ್ವ ದರ್ಜೆಯ ಮಟ್ಟದಲ್ಲಿಯೇ ಸ್ಥಾನಗಳಿಸಿದ್ದು, ಬಂಡವಾಳ ಹೂಡಿಕೆಗೆ ಹೇಳಿ ಮಾಡಿಸಿದ ಸ್ಥಳವಾಗಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ತಿಳಿಸಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ಇಂದು(ಫೆಬ್ರವರಿ.11) ಇನ್‌ವೆಸ್ಟ್‌ ಕಾರ್ಯಕ್ರಮಕ್ಕೆ ಚಾಲನೆ …

error: Content is protected !!