Mysore
23
overcast clouds

Social Media

ಭಾನುವಾರ, 23 ಆಗಸ್ಟ್ 2026
Light
Dark

Author: ಚಂದು ಸಿಎನ್

Home/ಚಂದು ಸಿಎನ್
ಚಂದು ಸಿಎನ್

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

ಮಡಿಕೇರಿ: ಈಚರ್‌ ಲಾರಿಯೊಂದಕ್ಕೆ ಆಕಸ್ಮಿಕ ಬೆಂಕಿ ಹತ್ತಿಕೊಂಡು ಹೊತ್ತಿ ಉರಿದ ಘಟನೆ ಕೊಡಗು ಜಿಲ್ಲೆಯ ಜೋಡುಪಾಲದಲ್ಲಿ ನಡೆದಿದೆ. ಹೆಚ್ ಡಿ ಕೋಟೆಯಿಂದ ಭತ್ತದ ಲೋಡ್ ಉಡುಪಿಗೆ ಸಾಗಿಸುತ್ತಿದ್ದ ವೇಳೆ ಏಕಾ ಏಕಿ ಲಾರಿಗೆ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದೆ. ಇದನ್ನು ಗಮನಿಸಿದ ಚಾಲಕ …

ತಿರುವಂತನಪುರ: ಮಳಯಾಳಂನ ಕಿರುತೆರೆ ನಟ ದಿಲೀಪ್‌ ಶಂಕರ್‌ ತಿರುವಂತನಪುರದ ಹೋಟೆಲ್‌ ಕೋಣೆಯೊಂದರಲ್ಲಿ ಭಾನುವಾರ ಶವವಾಗಿ ಪತ್ತೆಯಾಗಿದ್ದಾರೆ. ದಿಲೀಪ್‌  ನಾಲ್ಕು ದಿನಗಳ ಹಿಂದೆ ಹೋಟೆಲ್‌ಗೆ ಬಂದು ತಂಗಿದ್ದರು. ಕಳೆದ ಎರಡು ದಿನಗಳಿಂದ ಅವರು ಹೊರಗಡೆ ಎಲ್ಲೂ ಕಾಣಿಸಿರಲಿಲ್ಲ. ಭಾನುವಾರ ಬೆಳಿಗ್ಗೆ ಅವರ ಕೊಠಡಿಯಿಂದ …

ದಾವಣಗೆರೆ: ವಿಧಾನ ಪರಿಷತ್‌ ಕಲಾಪದ ವೇಳೆ ಆದ ಘಟನೆಗೆ ಸಂಬಂಧಿಸಿದಂತೆ ಬಿಜೆಪಿಯ ಪರಿಷತ್‌ ಸದಸ್ಯ ಸಿಟಿ ರವಿ ಹಾಗೂ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಇಬ್ಬರು ದೂರು ನೀಡಿದ್ದಾರೆ. ಇಬ್ಬರ ದೂರನ್ನು ಪರಿಗಣಿಸಿ ಸದನದ ಪರಿಮಿತಿಯಲ್ಲಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಭಾಪತಿ ಬಸವರಾಜ …

ಆಮ್‌ಸ್ಟರ್‌ಡ್ಯಾಮ್‌: ತುರ್ತು ಭೂಸ್ಪರ್ಶ ಮಾಡಿದ್ದ ವಿಮಾನವೊಂದು ರನ್‌ ವೇ ಬಿಟ್ಟು ಪಕ್ಕದ ಹುಲ್ಲಿನ ಹಾಸಿನ ಬದಿಗೆ ಜಾರಿದ ಘಟನೆ ನಾರ್ವೆಯ ಓಸ್ಲೋ ವಿಮಾನ ನಿಲ್ದಾಣದಲ್ಲಿ ಶನಿವಾರ ನಡೆದಿದೆ. ಅದೃಷ್ಟವಶಾತ್‌ ವಿಮಾನದಲ್ಲಿದ್ದ 182 ಮಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಓಸ್ಲೋ ವಿಮಾನ ನಿಲ್ದಾಣದಿಂದ ಆಮ್‌ಸ್ಟರ್‌ಡ್ಯಾಮ್‌ಗೆ …

ಸಿಯೊಲ್‌: ದಕ್ಷಿಣ ಕೊರಿಯಾದ ʼಜೆಜು ಏರ್‌ʼ ವಿಮಾನ ಇಂದು ಬೆಳಿಗ್ಗೆ (ಭಾನುವಾರ) ಮುಯಾನ್‌ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಯುವ ವೇಳೆ ಅಪಘಾತಕಕ್ಕೀಡಾಗಿದೆ. ಈ ದುರ್ಘಟನೆಯಲ್ಲಿ 179 ಮಂದಿ ಮೃತಪಟ್ಟಿದ್ದು, ಇಬ್ಬರನ್ನು ರಕ್ಷಿಸಲಾಗಿದೆ ಎಂದು ಯೊನ್ಹಾಪ್‌ ಸುದ್ದಿಸಂಸ್ಥೆ ವರದಿ ಮಾಡಿದೆ. ವಿಮಾನವು ನಿಲ್ದಾಣದಲ್ಲಿ …

ಬೆಂಗಳೂರು: ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆಗೆ ಸಚಿವ ಪ್ರಿಯಾಂಕ್ ಖರ್ಗೆ ಕೂಡ ಕಾರಣ. ಊರಿಗೆಲ್ಲಾ ಉಪದೇಶ ಮಾಡುವ ಪ್ರಿಯಾಂಕ್ ಖರ್ಗೆ ಮೊದಲು ರಾಜೀನಾಮೆ ಕೊಟ್ಟು ನೈತಿಕತೆ ಪ್ರದರ್ಶನ ಮಾಡಲಿ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದ್ದಾರೆ. ಈ ಕುರಿತು ಅವರು ಪತ್ರಿಕಾ …

ಮೈಸೂರು: ಜೀವವಿಮೆ ಹಣ ಪಡೆಯಲು ಅಪ್ಪನನ್ನೇ ಮಗ ಕೊಂದಿರುವ ಘಟನೆ ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಕೊಪ್ಪ ಗ್ರಾಮದ ಬಳಿಯಿರುವ ಡೋಂಗ್ರಿ ಗೆರಾಸಿಯ ಕಾಲೋನಿಯಲ್ಲಿ ನಡೆದಿದೆ. ಕಾಲೋನಿ ನಿವಾಸಿ ಅಣ್ಣಪ್ಪ(55)ಕೊಲೆಯಾದವರು. ಅವರ ಪುತ್ರ ಪಾಂಡು ಕೊಲೆ ಆರೋಪಿ. ಪೊಲೀಸರು ಇದೀಗ ಕೊಲೆ ಆರೋಪದ …

ಹೊಸದಿಲ್ಲಿ: ಉಸಿರಾಟದ ತೊಂದರೆಯಿಂದ ಗುರುವಾರ ರಾತ್ರಿ ನಿಧನರಾದ ಮಾಜಿ ಪ್ರಧಾನಿ ಡಾ.ಮನಮೋಹನ್‌ ಸಿಂಗ್‌ ಅವರ ಅಂತ್ಯಕ್ರಿಯೆ ಇಂದು ದೆಹಲಿಯ ನಿಗಮ್‌ ಭೋಧ್‌ ಫಾಟ್‌ನಲ್ಲಿ ನೆರವೇರಲಿದೆ. ಸಿಂಗ್‌ ಅವರಿಗೆ ಅಂತಿಮ ವಿದಾಯ ಸಲ್ಲಿಸಲಾಗುತ್ತಿದೆ. ಇಂದು ದೆಹಲಿಯ ಎಐಸಿಸಿ ಕಚೇರಿಯಿಂದ ಪಾರ್ಥಿವ ಶರೀರದ ಮೆರವಣಿಗೆ …

ಚನ್ನೈ: ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷ ಹಾಗೂ ಮಾಜಿ ಐಪಿಎಸ್‌ ಅಧಿಕಾರಿ ಕೆ. ಅಣ್ಣಾಮಲೈ ಬೀದಿಗಿಳಿದು ವಿಭಿನ್ನವಾಗಿ ಪ್ರತಿಭಟನೆ ಮಾಡುವ ಮೂಲಕ ಎಲ್ಲರಿಗೂ ಶಾಕ್‌ ಕೊಟ್ಟಿದ್ದಾರೆ. ಹೌದು...ಅಣ್ಣಾಮಲೈ ಅವರು ಇಂದು ತಮ್ಮ ನಿವಾಸದ ಎದುರು ಛಡಿಏಟು ಬಾರಿಸಿಕೊಂಡು ಪ್ರತಿಭಟನೆ ಮಾಡಿರುವ ವಿಡಿಯೋ …

ಮಂಡ್ಯ: ಕನ್ನಡ ಸಾಹಿತ್ಯ ಪರಿಷತ್ ಭವನ ಮಾರಾಟಕ್ಕಿದೆ ಎಂದು ಹೇಳಿಲ್ಲ, ಸರ್ಕಾರ ಇಲಾಖೆಗೆ ವಹಿಸಿಕೊಟ್ಟು, ನಗರದ ಹೃದಯ ಭಾಗದಲ್ಲಿ ಹೊಸ ಭವನ ನಿರ್ಮಾಣ ಕ್ರಮ ವಹಿಸಲಾಗುವುದು ಎಂದು ಹೇಳಿದ್ದೆನೆಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ನೂತನ ಅಧ್ಯಕ್ಷ ಪ್ರೊ.ಎಚ್.ಎಸ್.ಮುದ್ದೇಗೌಡ ಸ್ಪಷ್ಟ ಪಡಿಸಿದರು. …

error: Content is protected !!