Mysore
23
overcast clouds

Social Media

ಭಾನುವಾರ, 23 ಆಗಸ್ಟ್ 2026
Light
Dark

Author: ಚಂದು ಸಿಎನ್

Home/ಚಂದು ಸಿಎನ್
ಚಂದು ಸಿಎನ್

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

ಮಂಡ್ಯ:  ಐಎಎಸ್ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ನಾನು ಹಲವು ಪುಸ್ತಕಗಳನ್ನು ರಚಿಸಿದ್ದು, ಜಿಲ್ಲೆಯಲ್ಲಿ ನಡೆಯುತ್ತಿರುವ ಅಖಿಲ ಭಾರತ ಸಾಹಿತ್ಯ ಸಮ್ಮೇಳನದಲ್ಲಿ `ಆಡಳಿತದ ಅಂಗಳದಲ್ಲಿ' ಎಂಬ ಪುಸ್ತಕವನ್ನು ಮಾರಾಟಕ್ಕೆ ಇಟ್ಟಿದ್ದೇನೆ ಎಂದು ನಿವೃತ್ತ ಐಎಎಸ್ ಅಧಿಕಾರಿ ಟಿ.ತಮ್ಮೇಗೌಡ ತಿಳಿಸಿದರು. ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ …

ಮೈಸೂರು: ಕೆ.ವಿ ದೊಡ್ಡಕೆರೆ ಮೈದಾನ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಡಿ.19ರಂದು ಮತ್ತು ದಟ್ಟಗಳ್ಳಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಡಿ.20ರಂದು ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ದೊಡ್ಡಕೆರೆ ಮೈದಾನ ವಿದ್ಯುತ್ …

ಮಂಡ್ಯ: ಹಲವಾರು ವರ್ಷಗಳಿಂದ ದುರಸ್ಥಿಯಾಗಬೇಕಿದ್ದ ಮಂಡ್ಯ ನಗರದ ನಾಲ್ವಡಿ ಕೃಷ್ಣರಾಜ ಒಡೆಯರ್ ಕಲಾಮಂದಿರದ ನವೀಕರಣ ಕಾಮಗಾರಿಯನ್ನು ಒಟ್ಟು 1.08 ಕೋಟಿ ರೂ. ವೆಚ್ಚದಲ್ಲಿ ನೆರವೇರಿಸಲಾಗಿದೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರು ತಿಳಿಸಿದರು. ಅವರು ಇಂದು …

ಮಂಡ್ಯ: ಸಾಹಿತ್ಯ ಸಮ್ಮೇಳನದಲ್ಲಿ ಮಾಂಸಾಹಾರ ನಿಷೇಧ ವಿರೋಧಿಸಿ ಸಮ್ಮೇಳನಕ್ಕಾಗಮಿಸುವ ಅತಿಥಿಗಳಿಗೆ ಬಾಡೂಟ ಬಡಿಸಲು ಮನೆಗೊಂದು ಕೋಡಿ, ಊರಿಗೊಂದು ಕುರಿ ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಿ, ಸಮ್ಮೇಳನದಲ್ಲಿ ಮಾಂಸಪ್ರಿಯರಿಗೆ ಅಡುಗೆ ಮಾಡಿಸುತ್ತೇವೆ ಎಂದು ಸಾಹಿತಿ ರಾಜೇಂದ್ರ ಪ್ರಸಾದ್ ತಿಳಿಸಿದರು. ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ …

ಮಂಡ್ಯ: ಜಿಲ್ಲೆಯ ನಾನಾ ಭಾಗಗಳಿಂದ ಸಾಹಿತ್ಯ ಸಮ್ಮೇಳನಕ್ಕೆ ಆಗಮಿಸುವವರಿಗೆ ಉಚಿತ ಸಾರಿಗೆ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷರಾದ ಚಲುವರಾಯಸ್ವಾಮಿ ಅವರು ಹೇಳಿದರು. ಸ್ಯಾಂಜೋ ಆಸ್ಪತ್ರೆ ಹಿಂಭಾಗದಲ್ಲಿ ನಿರ್ಮಿಸಿರುವ‌ ವೇದಿಕೆಗಳ ನಿರ್ಮಾಣ ಕಾರ್ಯದ …

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20 ರಿಂದ 22 ರವರೆಗೆ ನಡೆಯುತ್ತಿರುವ  87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಸಮ್ಮೇಳನ ಕಾರ್ಯಕ್ರಮದಲ್ಲಿ ಭಾಗವಹಿಸುವ ಮೂಲಕ ಸಮ್ಮೇಳವನ್ನು ಯಶಸ್ವಿಗೊಳಿಸಬೇಕಾಗಿರುತ್ತದೆ. ಆದ್ದರಿಂದ …

ಮುಂಬೈ: ಮುಂಬೈ ಕರಾವಳಿಯಲ್ಲಿರುವ ಪ್ರಸಿದ್ಧ ಎಲಿಫೆಂಟಾ ಗುಹೆಗಳನ್ನು ನೋಡಲು ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಪ್ರಯಾಣಿಕರು ಹಡಗು ಸಮುದ್ರದಲ್ಲಿ ಮಗುಚಿ ಬಿದ್ದಿದ್ದು, ಇಬ್ಬರು ಸಾವನ್ನಪ್ಪಿರುವ ಘಟನೆ ಬುಧವಾರ ಸಂಜೆ ನಡೆದಿದೆ. ಹಡಗುನಲ್ಲಿದ್ದ ಕೆಲವರು ನಾಪತ್ತೆಯಾಗಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ನೀಲಕಮಲ್‌ ಹೆಸರಿನ ದೋಣಿ ಗೇಟ್‌ವೇ …

ಬೆಳಗಾವಿ: 2024ನೇ ಸಾಲಿನ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ರಚನೆ ವಿಧೇಯಕಕ್ಕೆ ವಿಧಾನಸಭೆ ಅಂಗೀಕಾರ ನೀಡಿದೆ. ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್.ಸುರೇಶ್ ಗುರುವಾರ ವಿಧಾನ ಸಭೆ ಕಲಾಪದಲ್ಲಿ, 2024ನೇ ಸಾಲಿನ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ವಿಧೇಯಕವನ್ನು ಪರ್ಯಾಲೋಚನೆ ಹಾಗೂ ಅಂಗೀಕಾರಕ್ಕೆ …

ಚಾಮರಾಜನಗರ: ಹೆಜ್ಜಾಲದಿಂದ ಚಾಮರಾಜನಗರಕ್ಕೆ ರೈಲು ಮಾರ್ಗ ಕಲ್ಪಿಸಬೇಕು ಎಂದು ಸಂಸದ ಸುನಿಲ್ ಬೋಸ್ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರಿಗೆ ಮನವಿ ಸಲ್ಲಿಸಿದರು. ಈ ಹಿಂದೆ ಬೆಂಗಳೂರಿನಿಂದ ಸತ್ಯಮಂಗಲದ ವರೆಗೆ (ಒಟ್ಟು 260 ಕಿ.ಮೀ.) ಪ್ರಸ್ತಾಪಗೊಂಡಿದ್ದ ಈ ಮಾರ್ಗವು …

ಕೊಳ್ಳೇಗಾಲ: ಜಗಳ ಬಿಡಿಸಲು ಹೋದ ವ್ಯಕ್ತಿಯ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿರುವ ಘಟನೆ ತಾಲ್ಲೂಕಿನ ಕುಣಗಳ್ಳಿ ಗ್ರಾಮದಲ್ಲಿ ನಡೆದಿದೆ. ಕುಣಗಳ್ಳಿ ಗ್ರಾಮದ ಚನ್ನಯ್ಯ ಹಲ್ಲೆಗೆ ಒಳಗಾದವರು. ಈ ಸಂಬಂಧ ಅಗರ ಮಾಂಬಳ್ಳಿ ಪೊಲೀಸ್ ಠಾಣೆುಂಲ್ಲಿ ದೂರು ದಾಖಲಾಗಿದೆ. ಅದೇ ಗ್ರಾಮದ ಡಿ.ಕೆ.ಶಿವಕುಮಾರ್ …

error: Content is protected !!