Mysore
22
overcast clouds

Social Media

ಭಾನುವಾರ, 23 ಆಗಸ್ಟ್ 2026
Light
Dark

Author: ಚಂದು ಸಿಎನ್

Home/ಚಂದು ಸಿಎನ್
ಚಂದು ಸಿಎನ್

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

ಮೈಸೂರು: ವರುಣಾ ವಿಧಾನಸಭಾ ಕ್ಷೇತ್ರ ಮುಖ್ಯ ಮಂತ್ರಿಗಳ ಕ್ಷೇತ್ರವಾಗಿದ್ದು, ಅತ್ಯಂತ ಹೆಚ್ಚಿನ ಕಾಳಜಿ ವಹಿಸಿ ಬಂದಿರುವ ಅನುದಾನವನ್ನು ನಿಗದಿತ ಅವಧಿಯಲ್ಲಿ ಬಳಕೆ ಮಾಡಿ ಕ್ಷೇತ್ರದ ಅಭಿವೃದ್ಧಿಗೆ ಬಳಕೆ ಮಾಡಬೇಕು ಎಂದು  ವಿಧಾನಸಭಾ ಪರಿಷತ್ ಶಾಸಕರಾದ ಡಾ ಯತೀಂದ್ರ ಸಿದ್ದರಾಮಯ್ಯ ಸೂಚನೆ ನೀಡಿದರು. …

ಬೆಂಗಳೂರು: ಕರ್ನಾಟಕ ಸರ್ಕಾರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪ್ರಸಕ್ತ ವರ್ಷದಿಂದ ಪ್ರಾರಂಭಿಸಿರುವ "ವಡ್ಡರ್ಸೆ ರಘುರಾಮಶೆಟ್ಟಿ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ" ಪ್ರಶಸ್ತಿಗೆ ಹೆಸರಾಂತ ಹಿರಿಯ ಪತ್ರಕರ್ತರಾದ ಡಿ.ಉಮಾಪತಿಯವರನ್ನು ಆಯ್ಕೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತು ಪ್ರಕಟಣೆ ನೀಡಿರುವ …

ಶ್ರೀಹರಿಕೋಟ: ಐರೋಪ್ಯ ಸಂಸ್ಥೆಯ ಪ್ರೋಬಾ-3 ಯೋಜನೆಯ ಎರಡು ಬಾಹ್ಯಾಕಾಶ ನೌಕೆಯನ್ನು ಹೊತ್ತ ಪಿಎಸ್‌ಎಲ್‌ವಿ ರಾಕೆಟ್‌ ಆಂಧ್ರ ಪ್ರದೇಶದ ಶ್ರೀ ಹರಿಕೋಟಾದ ಬಾಹ್ಯಾಕಾಶ ಕೇಂದ್ರದಿಂದ ಯಶಸ್ವಿಯಾಗಿ ನಭಕ್ಕೆ ಹಾರಿದೆ. ಪಿಎಸ್‌ಎಲ್‌ವಿ ಸಿ-59 ರಾಕೆಟ್‌ ಯಶಸ್ವಿಯಾಗಿ ಬಾಹ್ಯಾಕಾಶ ಸೇರಿದ್ದು. ಅಂತರಾಷ್ಟ್ರೀಯ ಬಾಹ್ಯಾಕಾಶ ಸಂಸ್ಥೆ (ESA) …

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (MUDA)ದಲ್ಲಿ ಅಕ್ರಮ ನಿವೇಶನ ಹಂಚಿಕೆ ಪ್ರಕರಣದಲ್ಲಿ ದಿನೇ ದಿನೇ ಹೊಸ ವಿಷಯಗಳು ಹೊರಬರುತ್ತಿದ್ದು, ಇದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ಶಾಸಕ ಹರೀಶ್‌ ಗೌಡ ಸಹ ಗುರುವಾರ ಸ್ಪೋಟಕ ಹೇಳಿಕೆ ನೀಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾದಲ್ಲಿ …

ಕಲಬುರಗಿ: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ತನಿಖೆ ಕೈಗೊಂಡು ಸತ್ಯಾಂಶ ಹೊರಗೆಳೆದಿದ್ದಕ್ಕೆ ಸಿಎಂ ಸಿದ್ದರಾಮಯ್ಯ ತುಂಬಾ ಹತಾಶೆಯಲ್ಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ. ಗುರುವಾರ ಸುದ್ದಿಗಾರರೊಂದಿಗೆ ಮಾತನಡಿದ ಅವರು, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಲೋಕಾಯುಕ್ತದಂತಹ …

ಮಂಡ್ಯ: ಶಿಕ್ಷಕರು ವಿದ್ಯಾರ್ಥಿಗಳಿಗೆ ತರಗತಿ ಮಾಡುವುದು ಎಷ್ಟು ಮುಖ್ಯವೋ, ವಿದ್ಯಾರ್ಥಿಗಳು ಕೂಡ ನಿರಂತರ ಓದಿ ಸಾಧನೆ ಮಾಡುವುದು ಅಷ್ಟೇ ಮುಖ್ಯ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಅಭಿಪ್ರಾಯಪಟ್ಟರು. ಜಿಲ್ಲಾ ರೈತ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಕ್ಷೇತ್ರ ಶಿಕ್ಷಣಾಧಿಕಾರಿ ಮತ್ತು ಕ್ಷೇತ್ರ ಸಮನ್ವಯಾಧಿಕಾರಿ  ಹಾಗೂ …

ಹಾಸನ: ವಕ್ಫ್ ವಿರುದ್ಧ ಹೋರಾಟ ಮಾಡುತ್ತಿರುವ ಬಿಜೆಪಿ ವಿರುದ್ಧ ಮುಖಮಂತ್ರಿ ಸಿದ್ದರಾಮಯ್ಯ ಕಿಡಿ ಕಾರಿದರು. ಜನ ಕಲ್ಯಾಣ ಸಮಾವೇಶದಲ್ಲಿ ಭಾಗಿಯಾಗುವ ಮುನ್ನ ಹೆಲಿಪ್ಯಾಡ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಪಕ್ಷದವರು ರಾಜಕೀಯಕ್ಕಾಗಿ ವಕ್ಫ್ ವಿರುದ್ಧ ಹೋರಾಟ ಮಾಡುತ್ತಿದ್ದಾರೆ ಎಂದು ದೂರಿದರು. ೨೦೧೪ …

ಬಾಕಿ ಪಾವತಿಗೆ 3 ದಿನಗಳ ಗಡುವು ಮೈಸೂರು: ಅವಧಿ ಮೀರಿದ್ದರೂ ವಿದ್ಯುತ್‌ ಶುಲ್ಕ ಪಾವತಿಸದೆ ಬಾಕಿ ಉಳಿಸಿಕೊಂಡಿರುವವರ ವಿರುದ್ಧ ಕ್ರಮಕ್ಕೆ ಸೆಸ್ಕ್‌ ಮುಂದಾಗಿದೆ. ನಿಗದಿತ ಅವಧಿಯೊಳಗೆ ಶುಲ್ಕ ಪಾವತಿ ಮಾಡದಿದ್ದಲ್ಲಿ, ಅಂತಹ ಸ್ಥಾವರಗಳಿಗೆ ವಿದ್ಯುತ್ ಕಡಿತಗೊಳಿಸಲು ತೀರ್ಮಾನಿಸಿದೆ. ಕೆಲವು ಗ್ರಾಹಕರು, ಗ್ರಾಮ …

ಮೈಸೂರು: ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಕುರಿತ ತನಿಖೆಗೆ ಮುಡಾ ಮಾಜಿ ಅಧ್ಯಕ್ಷ ಎಚ್.ವಿ ರಾಜೀವ್‌ ಬುಧವಾರ ಲೋಕಾಯುಕ್ತ ಎಸ್.ಪಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾದರು. ಮಧ್ಯಾಹ್ನ 4ರಿಂದ ಸಂಜೆ 7ರವರೆಗೆ ರಾಜೀವ್‌ ಅವರನ್ನು ತನಿಖಾಧಿಕಾರಿಗಳ ತಂಡವು, ಸಿಎಂ ಸಿದ್ದರಾಮಯ್ಯ …

ಬೆಂಗಳೂರು: ಟಾಲಿವುಡ್‌ ನಟ ಅಲ್ಲು ಅರ್ಜುನ್‌ ಅಭಿನಯದ ಪುಷ್ಪ 2 ಸಿನಿಮಾದ ಗುರುವಾರದ ಮುಂಜಾನೆ ಶೋಗಳು ರದ್ದಾಗಿವೆ. ಕರ್ನಾಟಕ ಸಿನಿಮಾ ರೆಗ್ಯುಲೇಷನ್‌ ಕಾಯ್ದೆಯಡಿ ಬೆಳಗ್ಗೆ 6:30ರ ಮೊದಲು ಹಾಗೂ ರಾತ್ರಿ 10:30 ರ ನಂತರ ಸಿನಿಮಾ ಪ್ರದರ್ಶನಕ್ಕೆ ಅವಕಾಶವಿಲ್ಲ. ಹೀಗಾಗಿ ನಿರ್ಮಾಪಕರ …

error: Content is protected !!