Mysore
22
overcast clouds

Social Media

ಭಾನುವಾರ, 23 ಆಗಸ್ಟ್ 2026
Light
Dark

Author: ಚಂದು ಸಿಎನ್

Home/ಚಂದು ಸಿಎನ್
ಚಂದು ಸಿಎನ್

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

ಗುಂಡ್ಲುಪೇಟೆ/ಚಾಮರಾಜನಗರ: ಶಾಲಾ ವಾಹನದಿಂದ ಇಳಿದು ಹಿಂಬದಿ ನಿಂತಿದ್ದ 3 ವರ್ಷದ ಬಾಲಕಿ ಅದೇ ವಾಹನಕ್ಕೆ ಸಿಲುಕಿ   ಮೃತಪಟ್ಟ ದಾರುಣ ಘಟನೆ ಗುರುವಾರ ಗುಂಡ್ಲುಪೇಟೆಯ ಉಡಿಗಾಲ ಗ್ರಾಮದಲ್ಲಿ  ನಡೆದಿದೆ. ತಾಲ್ಲೂಕಿನ ಕೋಡಸೋಗೆ ಗ್ರಾಮದ ಶಾಂತಪ್ಪ ಎಂಬುವರ ಮಗಳು ಅನ್ವಿತಾ (೪) ಮೃತಪಟ್ಟ ಬಾಲಕಿ. …

ತಿ. ನರಸೀಪುರ: ಪತ್ನಿಯ ಜತೆ ಅಕ್ರಮ ಸಂಬಂಧದ ಹಿನ್ನೆಲೆ ವ್ಯಕ್ತಿಯೊಬ್ಬ ಪತ್ನಿಯ ಪ್ರಿಯಕರನ್ನು ನೀರಿಗೆ ತಳ್ಳಿ ಕೊಲೆ ಮಾಡಿರುವ ಪ್ರಕರಣವೊಂದು ತಿರಮಕೂಡಲು ಕಾವೇರಿ ನದಿ ಸಮೀಪದ ಬಳಿ ಬುಧವಾರ ರಾತ್ರಿ ನಡೆದಿದೆ. ಕೊಳ್ಳೇಗಾಲ ತಾಲ್ಲೂಕಿನ ದೊಡ್ಡಿಂದುವಾಡಿ ಗ್ರಾಮದ ಚಂದ್ರು ಎಂಬಾತನೇ ಕೊಲೆಯಾದ …

ಹೆಚ್‌.ಡಿ ಕೋಟೆ: ಹೆಚ್.ಡಿ ಕೋಟೆ ಹಾಗೂ ಸರಗೂರು ತಾಲ್ಲೂಕುಗಳ ಹಾಡಿಗಳಲ್ಲಿ ಸಂಬಂಧ ಪಟ್ಟ ಇಲಾಖೆಗಳ ಅಧಿಕಾರಿಗಳು ಮೂಲಭೂತ ಸೌಕರ್ಯಕ್ಕೆ ಮೊದಲ ಆದ್ಯತೆ ನೀಡಬೇಕು ಎಂದು ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ.ಗಾಯತ್ರಿ  ಸೂಚಿಸಿದರು. ಹೆಚ್.ಡಿ ಕೋಟೆ ತಾಲ್ಲೂಕು ಪಂಚಾಯತಿಯ ಸಭಾಂಗಣದಲ್ಲಿ ಗುರುವಾರ ಹೆಚ್.ಡಿ.ಕೋಟೆ ಹಾಗೂ …

ಮೈಸೂರು: ಇಲ್ಲಿನ ಸರ್ಕಾರಿ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವೈದ್ಯಕೀಯ ಮಹಾವಿದ್ಯಾಲಯವು ರಾಜ್ಯದ ಏಕೈಕ ವಿದ್ಯಾಲಯವಾಗಿದೆ. ಇದನ್ನು ಜಿಲ್ಲಾ ಹಾಗೂ ವಿಭಾಗೀಯ ಮಟ್ಟದಲ್ಲಿ ಸ್ಥಾಪಿಸುವಂತೆ ಸಿಎಂ ಸಿದ್ದರಾಮಯ್ಯ ಅವರ ಗಮನ ಸೆಳೆಯಲಾಗುವುದು ಎಂದು ಚಾಮರಾಜ ಕ್ಷೇತ್ರದ ಶಾಸಕ ಕೆ.ಹರೀಶ್‌ ಗೌಡ ಹೇಳಿದರು. …

ಬೆಂಗಳೂರು: ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮ ನಿಯಮಿತ ಮತ್ತು ಎಸ್ಕಾಂಗಳಲ್ಲಿ ಕೈಗೊಳ್ಳಲಾಗಿರುವ ಕಿರಿಯ ಸ್ಟೇಷನ್‌ ಪರಿಚಾರಕ ಮತ್ತು ಕಿರಿಯ ಪವರ್‌ ಮ್ಯಾನ್‌ ಹುದ್ದೆಗಳ ನೇಮಕಾತಿಗೆ, ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಇ-ಸಹಿ ಮಾಡಿ ಅಂಚೆ ಚಲನ್‌ ಪಡೆಯುವ ದಿನಾಂಕವನ್ನು ಹಾಗೂ ಅರ್ಜಿ ಶುಲ್ಕ ಪಾವತಿ …

ಮೈಸೂರು: ಮನೆ ನಿರ್ಮಾಣಕ್ಕೆ ಖಾತೆ ಹಾಗೂ ನಕ್ಷೆ ಅನುಮೋದನೆಗೆ ಲಂಚ ಪಡೆಯುವಾಗ ಹೊಟಗಳ್ಳಿ ನಗರಸಭೆ ಬಿಲ್‌ ಕಲೆಕ್ಟರ್ ದಿನೇಶ್‌ ಲೋಕಾಯುಕ್ತ ಬಲೆಗೆ ಬಿದಿದ್ದಾರೆ. ಈ ಸಂಬಂಧ ಲೋಕಾಯುಕ್ತ ಪೊಲೀಸರು, ದಿನೇಶ್‌ ಅವರನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ. ಬಿಲ್‌ ಕಲೆಕ್ಟರ್‌ ದಿನೇಶ್‌ …

ಮೈಸೂರು: ಚಲನಚಿತ್ರ ನಟ ದರ್ಶನ್‌ ಚಿಕಿತ್ಸೆ ಮುಗಿದ ಬಳಿಕ ಮತ್ತೆ ಜೈಲಿಗೆ ಹೋಗಬೇಕು. ದರ್ಶನ್‌ಗೆ ಜಾಮೀನು ಕೊಡಬಾರದು ಎಂದು ಸುಪ್ರೀಂಕೋರ್ಟ್‌ ಅರ್ಜಿ ಹಾಕುತ್ತೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದರು. ನಗರದಲ್ಲಿ ಗುರುವಾರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರೇಣುಕಾಸ್ವಾಮಿ ಕೊಲೆ …

ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಹುಂಜನಗೆರೆ ಗ್ರಾಮದಲ್ಲಿನ ಚನ್ನಕೇಶ್ವರ ದೇವಾಲಯಕ್ಕೆ ಪೂಜೆಗೆಂದು ತೆರಳಿದಾಗ ಶಿಥಿಲಾವಸ್ಥೆಯಲ್ಲಿದ್ದ ಗೇಟ್ ಕುಸಿದು, ನನ್ನ ಪುತ್ರ ಐದು ವರ್ಷದ ಜಿಷ್ಣು ಸಾವನ್ನಪ್ಪಿದ ಘಟನೆ ನಡೆದಿದ್ದು, ಈ ಘಟನೆಗೆ ಕಾರಣವಾದವರ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಮೃತ ಮಗುವಿನ …

ಹೊಸದಿಲ್ಲಿ: ದೇಶದ ಹಾಲು ಉತ್ಪಾದನೆಯಲ್ಲಿ ಗುಜರಾತ್ ಮೊದಲ ಸ್ಥಾನದಲ್ಲಿದ್ದರೆ ಕರ್ನಾಟಕ ಎರಡನೇ ಸ್ಥಾನದಲ್ಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು(ನ.21) ರಾಜಧಾನಿ ನವದೆಹಲಿಯಲ್ಲಿ ಕರ್ನಾಟಕ ಹಾಲು ಉತ್ಪಾದಕರ ಮಹಾಮಂಡಲ ಹಾಗೂ ಮಂಡ್ಯ ಜಿಲ್ಲಾ ಸಹಕಾರ ಹಾಲು ಒಕ್ಕೂಟ ನಿಯಮಿತದ ವತಿಯಿಂದ …

ಮಂಡ್ಯ: ಇಲ್ಲಿನ ಆರ್.ಟಿ.ಓ ಕಚೇರಿ ಮುಂಭಾಗದ ಕಾಳಪ್ಪ ಬಡಾವಣೆಯಲ್ಲಿ 65 ವಸತಿ ರಹಿತ ನಿವಾಸಿಗಳಿಗೆ ಹಕ್ಕು ಪತ್ರ ತಯಾರಾಗಿದ್ದು,  ಮಂಡ್ಯ ಶಾಸಕರ ನೇತೃತ್ವದಲ್ಲಿ ಹಕ್ಕು ಪತ್ರವನ್ನು ವಿತರಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ ಕುಮಾರ ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ …

error: Content is protected !!