Mysore
21
overcast clouds

Social Media

ಭಾನುವಾರ, 23 ಆಗಸ್ಟ್ 2026
Light
Dark

Author: ಚಂದು ಸಿಎನ್

Home/ಚಂದು ಸಿಎನ್
ಚಂದು ಸಿಎನ್

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

ಕಾನೂನಾತ್ಮಕವಾಗಿಯೇ ಎದುರಿಸುತ್ತೇನೆ ಎಂದ ಕೇಂದ್ರ ಸಚಿವರು ಆ ಅಧಿಕಾರಿ ಬಗ್ಗೆ ಏನು ಹೇಳಿದ್ದೇನೆ ಎಂಬುದು ಎಲ್ಲರಿಗೂ ಗೊತ್ತಿದೆ ಬೆಂಗಳೂರು: ನನ್ನ ವಿರುದ್ಧ ಪೊಲೀಸರಿಗೆ ದೂರು ಕೊಟ್ಟಿರುವ ಎಡಿಜಿಪಿಗೆ ಕಾನೂನು ಪ್ರಕಾರವೇ ಉತ್ತರ ಕೊಡುತ್ತೇನೆ ಎಂದು ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಬೆಂಗಳೂರಿನ …

ಮೈಸೂರು: ಮೈಸೂರಿನ ಹಲವೆಡೆ ಶನಿವಾರ ಮಧ್ಯಾಹ್ನ ಜಿಟಿಜಿಟಿ ಮಳೆಯಾಗಿದ್ದು, ಮುಂದಿನ ಏಳು ದಿನಗಳ ಕಾಲ ಮೈಸೂರು, ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ವಿಜಯದಶಮಿಯಂದೆ ಮೈಸೂರಿನಲ್ಲಿ ಮಳೆಯ ಸಿಂಚನವಾಗಿದ್ದು, ಇಂದು ಮಧ್ಯಾಹ್ನದಿಂದಲೇ ನಗರದ …

ಮೈಸೂರು: ದಸರಾ ಮಹೋತ್ಸವದ ಜಂಬೂಸವಾರಿಯಲ್ಲಿ ಇದೇ ಮೊದಲ ಬಾರಿಗೆ ʻಧನಂಜಯ್‌ʻ ನಿಶಾನೆ ಆನೆಯಾಗಿ ಶನಿವಾರ ರಾಜಬೀದಿಯಲ್ಲಿ ಹೆಚ್ಚೆ ಹಾಕಿದ್ದಾನೆ. ಈ ಮೂಲಕ ಅರ್ಜುನನ ಸ್ಥಾನವನ್ನು ಧನಂಜಯ ತುಂಬಿದ್ದಾನೆ. ಸಿಎಂ ಸಿದ್ದರಾಮಯ್ಯ ಅವರು ನಂದಿಧ್ವಜಕ್ಕೆ ಪೂಜೆ ಸಲ್ಲಿಸಿ, ಚಾಮುಂಡೇಶ್ವರಿ ವಿಗ್ರಹಕ್ಕೆ ಪುಷ್ಪರ್ಚನೆ ಮಾಡಿದ …

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂ ಸವಾರಿ ಮೆರವಣಿಗೆ ಆರಂಭಾಗಿದೆ. ಶನಿವಾರ(ಆ.12)ಮಧ್ಯಾಹ್ನ ಶುಭ ಲಗ್ನದಲ್ಲಿ ಕೋಟೆ ಆಂಜನೇಯ ಸ್ವಾಮಿ ದೇವಾಲಯದ ಬಳಿ ಸಿಎಂ ಸಿದ್ದರಾಮಯ್ಯ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದರು. ಬಳಿಕ ಚಾಮುಂಡೇಶ್ವರಿ ವಿಗ್ರಹಕ್ಕೆ ಪುಷ್ಪರ್ಚನೆ …

ಮೈಸೂರು: ಜನಮನ ಸೆಳೆಯುವ, ಕಣ್ಮನ ತಣಿಸುವ ಸಾಂಸ್ಕೃತಿಕ ಶ್ರೀಮಂತಿಕೆಯ ಮೈಸೂರು ದಸರಾ ವಿಜೃಂಭಣೆಯಿಂದ ಜರುಗುತ್ತಿದೆ. ಕ್ಯಾಪ್ಟನ್‌ ಅಭಿಮನ್ಯು ತಾಯಿ ಚಾಮುಂಡೇಶ್ವರಿಯನ್ನು ಹೊತ್ತು ದಸರಾದಲ್ಲಿ ಹೆಜ್ಜೆ ಹಾಕಲಿದ್ದಾನೆ. ಆದರೆ, ಸತತ ಐದನೇ ಬಾರಿಗೆ ಚಿನ್ನದ ಅಂಬಾರಿ ಹೊತ್ತು ಸಾಗಲಿರುವ ಅಭಿಮನ್ಯುವಿಗೆ ಧೈರ್ಯ ತುಂಬಿದ್ದೆ …

ಚಿಕ್ಕೋಡಿ(ಬೆಳಗಾವಿ): ಸರ್ಕಾರ ನಮ್ಮ ಕ್ಷೇತ್ರದ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ. ಜೊತೆಗೆ ರೈತರ ಪರ ಯಾವುದೇ ಯೋಜನೆಗಳು ಬರುತ್ತಿಲ್ಲ. ರೈತರು ಬದುಕು ನಡೆಸುವುದು ದುಸ್ತರವಾಗಿದೆ ಎಂದು ತಮ್ಮದೇ ಸರ್ಕಾರದ ವಿರುದ್ಧ ಹರಿಹಾಯ್ದಿರುವ ಕಾಗವಾಡ ಕ್ಷೇತ್ರದ ಕಾಂಗ್ರೆಸ್ ಶಾಸಕ ರಾಜು ಕಾಗೆ, ರಾಜೀನಾಮೆ ನೀಡುವುದಾಗಿ ಎಚ್ಚರಿಕೆ …

ಮೈಸೂರು: ಮೈಸೂರಲ್ಲಿ ದಸರಾ ಸಂಭ್ರಮ ಜೋರಾಗಿದೆ. ಜಗತ್ಪ್ರಸಿದ್ಧ ಮೈಸೂರು ಅರಮನೆಯಲ್ಲಿ ಚಟುವಟಿಕೆಗಳು ಭರದಿಂದ ಸಾಗಿವೆ. ಪ್ರತಿವರ್ಷದಂತೆ ಈ ಬಾರಿಯೂ ಕರಿಕಲ್ಲು ತೊಟ್ಟಿಯಲ್ಲಿ ನಡೆಯುತ್ತಿರುವ ಜಟ್ಟಿ ಕಾಳಗವನ್ನು ಪ್ರಮೋದ ದೇವಿ ಒಡೆಯರ್‌ ಅವರು ತಮ್ಮ ಮೊಮ್ಮಗ ಆದ್ಯವೀರ್‌ ಜೊತೆ ವೀಕ್ಷಿಸಿದರು. ಕಳೆದ ಬಾರಿ …

ಮಂಡ್ಯ: ತಾಲ್ಲೂಕಿನ ದುದ್ದ ಹೋಬಳಿಯ ಬೀಚನಹಳ್ಳಿ ಗ್ರಾಮವೊಂದರ ಕಬ್ಬಿನ ಗದ್ದೆಯಲ್ಲಿ, ಕಬ್ಬು ಕಟಾವು ಮಾಡುತ್ತಿದ್ದ ವೇಳೆ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅದನ್ನು ಸೆರೆಹಿಡಿದು ಅರಣ್ಯ ಇಲಾಖೆಗೆ ಒಪ್ಪಿಸಲಾಗಿದೆ. ಗ್ರಾಮದ ನಿವಾಸಿ ಪುಟ್ಟಸ್ವಾಮಿ ಗೌಡ ಅವರ ಕಬ್ಬಿನ ಗದ್ದೆಯಲ್ಲಿ ಕಬ್ಬು ಕಟಾವು …

ಮೈಸೂರು : ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಭೇಟಿ ನೀಡಿದರು. ಈ ವೇಳೆ ಮಠದ ವತಿಯಿಂದ ಸಿಎಂ ಸಿದ್ದರಾಮಯ್ಯ ಹಾಗೂ ಸಚಿವೆ ಲಕ್ಷ್ಮೀ …

ದುಷ್ಟರ ಸಂಹಾರ, ಶಿಷ್ಟರ ರಕ್ಷಣೆಯೇ ದಸರಾದ ಸಂಕೇತ - ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು; ದುಷ್ಟರ ಸಂಹಾರ, ಶಿಷ್ಟರ ರಕ್ಷಣೆಯೇ ದಸರಾದ ಸಂಕೇತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರಿನ ಸುತ್ತೂರು ಮಠದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ವಿಜಯದಶಮಿ, ದಸರಾ ಉತ್ಸವದ …

error: Content is protected !!