Mysore
25
broken clouds

Social Media

ಮಂಗಳವಾರ, 25 ಆಗಸ್ಟ್ 2026
Light
Dark

Author: ಚಂದು ಸಿಎನ್

Home/ಚಂದು ಸಿಎನ್
ಚಂದು ಸಿಎನ್

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

ಬೆಂಗಳೂರು:  ಕೃಷಿ ಇಲಾಖೆಯಲ್ಲಿ ಒಟ್ಟಾರೆ 945 ಕೃಷಿ ಅಧಿಕಾರಿಗಳು ಹಾಗೂ ಸಹಾಯಕ ಕೃಷಿ ಅಧಿಕಾರಿಗಳನ್ನೊಳಗೊಂಡ ಗ್ರೂಪ್ ಬಿ ಹುದ್ದೆಗಳ ಭರ್ತಿಗೆ ಕರ್ನಾಟಕ ಲೋಕಸೇವಾ ಆಯೋಗ ಅಧಿಸೂಚನೆ ಹೊರಡಿಸಿದೆ. ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿ ಅವರ ವಿಶೇಷ ಪ್ರಯತ್ನದ ಫಲಾವಾಗಿ ಈ ನೇಮಕಾತಿ …

ಮೈಸೂರು: ಮೈಸೂರು ರೇಷ್ಮೆ ಸೀರೆಗಳು ವಿಶ್ವ ಪ್ರಸಿದ್ದಿ ಪಡೆದಿವೆ. ರೇಷ್ಮೆ ಮಂಡಳಿಗೆ ಪ್ರಧಾನಿ ಮೋದಿ ಅವರು ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಈ ನಿಟ್ಟಿನಲ್ಲಿ ರೇಷ್ಮೆ ಬೆಳಗಾರರ ಹಿತ ಕಾಪಾಡಲು ಕೇಂದ್ರ ಸರ್ಕಾರ ಬದ್ದವಾಗಿದೆ ಎಂದು  ಜವಳಿ ಖಾತೆಯ ಕೇಂದ್ರ ಸಚಿವ …

ವಾರ್ಧಾ(ಮಹಾರಾಷ್ಟ್ರ): ಕಾಂಗ್ರೆಸ್‌ ಪಕ್ಷಕ್ಕೆ ದ್ವೇಷದ ಭೂತ ಹೊಕ್ಕಿದೆ. ಇಂದಿನ ಕಾಂಗ್ರೆಸ್‌ನಲ್ಲಿ ದೇಶಪ್ರೇಮದ ಆತ್ಮ ಕೊನೆಯಿಸಿರೆಳೆದಿದೆ ಎಂದು ಪ್ರಧಾನಿ ಮೋದಿ ದೂರಿದ್ದಾರೆ. ಪಿಎಂ ವಿಶ್ವಕರ್ಮ ಯೋಜನೆಯೂ ಒಂದು ವರ್ಷ ಪೂರೈಸಿದ ಪ್ರಯುಕ್ತ ಮಹಾರಾಷ್ಟ್ರ ರಾಜ್ಯದ ವಾರ್ಧಾದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಅವರು …

ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದೆ. ಇಂದು ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿ ಪಿ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸಿದೆ ಎಂದು ಕೇಂದ್ರ ಸಚಿವ ಭಾರಿ ಕೈಗಾರಿಕೆ ಮತ್ತು ಉಕ್ಕು ಸಚಿವರಾದ ಎಚ್. …

ಕನ್ನಡದ ವಾತಾವರಣವನ್ನು ವಿಸ್ತರಿಸಲು, ಗಟ್ಟಿಗೊಳಿಸಲು ನಾವೆಲ್ಲಾ ಹೆಚ್ಚೆಚ್ಚು ಶ್ರಮಿಸೋಣ: ಸಿದ್ದರಾಮಯ್ಯ ಕರೆ ಕರ್ನಾಟಕ ಬಹುತ್ವದ ಬೀಡು: ಬಹುತ್ವದ ನಾಡು ಕಟ್ಟುವ ವಿಚಾರದಲ್ಲಿ ರಾಜಿಯೇ ಇಲ್ಲ: ಸಿ.ಎಂ.ಸಿದ್ದರಾಮಯ್ಯ ಸ್ಪಷ್ಟ ನುಡಿ ಮೈಸೂರು: ಕನ್ನಡದ ವಾತಾವರಣವನ್ನು ವಿಸ್ತರಿಸಲು, ಗಟ್ಟಿಗೊಳಿಸಲು ನಾವೆಲ್ಲಾ ಹೆಚ್ಚೆಚ್ಚು ಶ್ರಮಿಸೋಣ. ಕರ್ನಾಟಕ …

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು ದೇಶಂ ಪಕ್ಷ(ಟಿಡಿಪಿ) ಗುರುವಾರ ಹಿಂದಿನ ವೈಎಸ್‌ಆರ್‌ಸಿಪಿ ಸರ್ಕಾರದ ವಿರುದ್ಧ ಕಿಡಿಕಾರಿದೆ. ಗುಜರಾತ್‌ ಮೂಲದ ಜಾನುವಾರು ಹಾಗೂ ಆಹಾರ ಕುರಿತ ಪ್ರಯೋಗಾಲಯದ …

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ ಹಾಕಿದ್ದಾರೆ. ಈ ಸಂಬಂಧ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇತ್ತೀಚೆಗಷ್ಟೆ ಸಲ್ಮಾನ್‌ ಖಾನ್‌ ಅಪಾರ್ಟ್‌ಮೆಂಟ್‌ ಮೇಲೆ ಕಿಡಿಗೇಡಿಗಳು ಗುಂಡಿನ ದಾಳಿ …

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ ನ್ಯಾಯಾಲಯ ಷರತ್ತು ಬದ್ಧ ಜಾಮೀನು ನೀಡಿದೆ. 2 ಲಕ್ಷದ ಬಾಂಡ್, ಇಬ್ಬರು ಶ್ಯೂರಿಟಿ, ಸಾಕ್ಷ್ಯಾಧಾರ ನಾಶಪಡಿಸಬಾರದು, ಸಾಕ್ಷಿಗಳಿಗೆ ಬೆದರಿಕೆ ಹಾಕದಂತೆ, …

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಎಲ್ಲರನ್ನು ಆಹ್ವಾನಿಸಲು ಕನ್ನಡ ಜ್ಯೋತಿ ರಥ ಸಿದ್ಧವಾಗಿದೆ. ಇಂದು ಸಿದ್ಧವಾಗಿರುವ ಭುವನೇಶ್ವರಿ ರಥಕ್ಕೆ ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಎನ್ …

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ ಪುಷ್ಪ ಅಮರನಾಥ್ ಅವರು ಮೈಸೂರು ಕೇಂದ್ರಿಯ ಬಸ್ ನಿಲ್ದಾಣದಿಂದ ಮಂಡ್ಯವರೆಗೂ ಕೆಎಸ್ ಆರ್ ಟಿಸಿ ಬಸ್ ನಲ್ಲಿ ಪ್ರಯಾಣಿಸಿದರು. ಈ …

error: Content is protected !!