Mysore
21
broken clouds

Social Media

ಮಂಗಳವಾರ, 25 ಆಗಸ್ಟ್ 2026
Light
Dark

Author: ಚಂದು ಸಿಎನ್

Home/ಚಂದು ಸಿಎನ್
ಚಂದು ಸಿಎನ್

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

ಮಂಡ್ಯ: ಜಿಲ್ಲಾಡಳಿತದ ವತಿಯಿಂದ ಮಳವಳ್ಳಿ ತಾಲ್ಲೂಕಿನಲ್ಲಿ ಗಗನಚುಕ್ಕಿ ಜಲಪಾತೋತ್ಸವವನ್ನು ಸೆಪ್ಟೆಂಬರ್ 14 ಮತ್ತು 15 ರಂದು ಆಯೋಜಿಸಲಾಗಿದೆ ಎಂದು ಮಳವಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಪಿ.ಎಂ‌.ನರೇಂದ್ರಸ್ವಾಮಿ  ತಿಳಿಸಿದರು. ಅವರು ಇಂದು ಶಿವನಸಮುದ್ರದ ಲಕ್ಷದ್ವೀಪ ಹೋಟೆಲ್ ನಲ್ಲಿ ಪತ್ರಿಗೋಷ್ಠಿ ನಡೆಸಿ ಮಾಹಿತಿ ನೀಡಿದರು.  …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಶುರುವಾಗಿದ್ದು, ಇಂದು ಅರಮನೆಗೆ ಗಜಪಡೆಯ 2ನೇ ತಂಡ ಆಗಮಿಸಿವೆ. ದಸರಾ ಜಂಬೂಸವಾರಿಯಲ್ಲಿ ಭಾಗಿಯಾಗಲು  ಅರಮನೆಗೆ 2ನೇ ತಂಡದ ಗಜಪಡೆ ಮೈಸೂರು ಅರಮನೆಗೆ ಆಗಮಿಸಿದ್ದು, ಅರಮನೆಯಲ್ಲಿ ಇಂದು ಸಂಜೆ ವೇಳೆಗೆ ಮಹೇಂದ್ರ ನೇತೃತ್ವದ …

ಮಂಡ್ಯ: ಸಮಾಜ ರೂಪುಗೊಳ್ಳುವಲ್ಲಿ ಉತ್ತಮ ಮನುಷ್ಯರ ಪಾತ್ರ ಅಪಾರ. ಹೀಗಾಗಿ, ಅಂತಹ ಉತ್ತಮರನ್ನು ರೂಪಿಸರುವ ಜವಾಬ್ದಾರಿ ಶಿಕ್ಷಕರ ಮೇಲಿದೆ ಎಂದು ಶಾಸಕ ಪಿ.ರವಿಕುಮಾರ್‌ ಹೇಳಿದರು. ಅವರು ಇಂದು ನಗರದ ಅಂಬೇಡ್ಕರ್ ಭವನದಲ್ಲಿ ನಡೆದ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ - 2024 …

ಕೈ- ಕೈ ಜೋಡಿಸಿ, ಪ್ರಜಾಪ್ರಭುತ್ವ ಗಟ್ಟಿಗೊಳಿಸಿ ಮೈಸೂರು:  "ಪ್ರಜಾಪ್ರಭುತ್ವಕ್ಕಾಗಿ ಕರ್ನಾಟಕದಲ್ಲಿ ಮಾನವ ಸರಪಳಿ" ಎಂಬ ಧ್ಯೇಯ ವಾಕ್ಯದೊಂದಿಗೆ ಸೆ. 15 ರಂದು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು, ಈ ಸಂಬಂಧ ಜಿಲ್ಲೆಯಾದ್ಯಂತ 60 ಕಿ.ಮೀ. ಮಾನವ ಸರಪಳಿ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗಿದೆ. …

ಸರ್ಕಾರಿ ಶಾಲೆಗಳಲ್ಲಿ ಉತ್ತಮ ಫಲಿತಾಂಶ ಬರಬೇಕು: ಜಿಟಿಡಿ ಮೈಸೂರು: ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸರ್ಕಾರಿ, ಖಾಸಗಿ ಶಾಲೆಗಳು ಎನ್ನುವ ತಾರತಮ್ಯ ಇಲ್ಲದೆ ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಿದ್ದೇನೆ. ಸರ್ಕಾರಿ ಶಾಲೆಗಳಿಗೆ ಸಂಬಂಧಿಸಿದ ಜಾಗವನ್ನು ಅಳತೆ ಮಾಡಿಸಿ ಖಾತೆ ಮಾಡಿಸಿಕೊಂಡು ಹದ್ದುಬಸ್ತಿನಲ್ಲಿಡಬೇಕು ಎಂದು ಶಾಸಕ …

ಬೆಂಗಳೂರು: ಚಿತ್ರದುರ್ಗ ಮೂಲದ  ರೇಣುಕಸ್ವಾಮಿಗೆ ನಟ ದರ್ಶನ್‌,  ಪವಿತ್ರಾಗೌಡ ಮತ್ತು ಸಹಚರರು ಚಿತ್ರಹಿಂಸೆ ನೀಡಿ ಕೊಲೆ ಮಾಡಿರುವ ಫೋಟೊಗಳು ದತ್ತಾಂಶ ಮರು ಸಂಗ್ರಹದ ವೇಳೆ ಲಭ್ಯವಾಗಿವೆ. ಆರೋಪಿಗಳ ಕ್ರೌರ್ಯ ಅನಾವರಣವಾಗಿದೆ. ದೋಷಾರೋಪ ಪಟ್ಟಿ ಸಲ್ಲಿಕೆ ಬೆನ್ನಲ್ಲೇ ರೇಣುಕಸ್ವಾಮಿ ಕೈಮುಗಿದು ಬೇಡಿಕೊಳ್ಳುತ್ತಿರುವ ಹಾಗೂ …

ಮಡಿಕೇರಿ: ಸುಂಟಿಕೊಪ್ಪ ಸಮೀಪದ ಕಂಬಿಬಾಣೆಯಲ್ಲಿ ಇತ್ತೀಚಿಗೆ ಬೈಕ್ ಕಳವು ಮಾಡಿದ್ದ ಆರೋಪಿಯನ್ನು ಬಂಧಿಸಿ ಬೈಕ್ ಅನ್ನು ವಶಪಡಿಸಿಕೊಳ್ಳುವಲ್ಲಿ ಸುಂಟಿಕೊಪ್ಪ ಪೊಲೀಸರು ಯಶಸ್ವಿಯಾಗಿದ್ದಾರೆ. ಕಂಬಿಬಾಣೆಯ ಚಿರಾಗ್ ಎಂಬುವರ ಬೈಕ್ ಕಳ್ಳತನವಾಗಿತ್ತು. ಯುವಕನೊಬ್ಬ ಅದನ್ನು ಕದ್ದು ತಳ್ಳಿಕೊಂಡು ಹೋಗುತ್ತಿದ್ದುದು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿತ್ತು. ಪ್ರಕರಣ …

- ವಿದ್ಯುತ್‌ ಗುತ್ತಿಗೆದಾರರೊಂದಿಗೆ ಪೂರ್ವಭಾವಿ ಸಭೆ - 21 ದಿನಗಳ ದಿಪಾಲಂಕಾರ ಕುರಿತಂತೆ ಸಮಾಲೋಚನೆ ಮೈಸೂರು: ನಾಡಹಬ್ಬ ದಸರಾ ನಮ್ಮ ಹಬ್ಬ, ನಮ್ಮ ಮನೆಯ ಹಬ್ಬವೆಂಬ ಮನಸ್ಥಿತಿಯೊಂದಿಗೆ ದೀಪಾಲಂಕಾರ ಮಾಡಿ ದಸರಾ ಉತ್ಸವದ ಅಂದ ಹೆಚ್ಚಿಸಬೇಕು ಎಂದು ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು …

ವಿಜ್ಞಾನ ಓದಿ ಕರ್ಮಸಿದ್ಧಾಂತ ನಂಬಿದರೆ, ಮೌಡ್ಯಕ್ಕೆ ಜೋತು ಬಿದ್ದರೆ ಅಂಥಾ ಶಿಕ್ಷಣ ನಿರರ್ತಕ: ಸಿಎಂ ಬೆಂಗಳೂರು: ರೈತರು-ಶಿಕ್ಷಕರು-ಸೈನಿಕರು ದೇಶದ ನಿರ್ಮಾತೃಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಶಾಲಾ ಶಿಕ್ಷಣ ಮತ್ತು ಉನ್ನತ ಶಿಕ್ಷಣ ಇಲಾಖೆ ಬ್ಯಾಂಕ್ವೆಟ್ ಹಾಲ್ ನಲ್ಲಿ ಭಾರತ …

ಪ್ಯಾರಿಸ್:‌‌ ಪುರುಷರ ರಿಕರ್ವ್‌ ಆರ್ಚರಿಯ ವಿಭಾಗದಲ್ಲಿ ಭಾರತದ ಹರ್ವಿಂದರ್‌ ಸಿಂಗ್ ಬಧುವಾರ ಚಿನ್ನದ ಪದಕ ಗೆದ್ದಿದ್ದಾರೆ. ಈ ಮೂಲಕ ಪ್ಯಾರಾಲಿಂಪಿಕ್ಸ್ ಆರ್ಚರಿಯಲ್ಲಿ ಚಿನ್ನ ಗೆದ್ದ ಮೊದಲ ಭಾರತೀಯ ಎಂಬ ದಾಖಲೆಯನ್ನು ಹರ್ವಿಂದರ್ ಸಿಂಗ್ ಬರೆದಿದ್ದಾರೆ. ಹರ್ವಿಂದರ್‌ ಸಿಂಗ್‌ ಅವರು ಪುರುಷರ ವೈಯಕ್ತಿಕ ರಿಕರ್ವ್‌ …

error: Content is protected !!