Mysore
23
overcast clouds

Social Media

ಸೋಮವಾರ, 27 ಜುಲೈ 2026
Light
Dark

Author: ಚಂದು ಸಿಎನ್

Home/ಚಂದು ಸಿಎನ್
ಚಂದು ಸಿಎನ್

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

ಮೈಸೂರು: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಮುಂದುವರೆದಿದೆ. ಬಹುತೇಕ ನದಿ, ಜಲಾಶಯಗಳು ಭರ್ತಿಯಾಗಿದೆ. ಕರಾವಳಿ ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಿಸಿದ್ದು. ಮೈಸೂರಿಗೆ ಯಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ದಕ್ಷಿಣ ಒಳನಾಡು ಪ್ರದೇಶವಾದ …

karnataka rains

ಚಿಕ್ಕಮಗಳೂರು: ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಹಲವು ಅವಾಂತರಗಳನ್ನು ಸೃಷ್ಠಿಸಿದೆ. ಅದರಲ್ಲೂ ಚಿಕ್ಕಮಗಳೂರು ಭಾಗಗಳಲ್ಲಿ ಭೂಕುಸಿತ, ಗುಡ್ಡಕುಸಿತವಾಗುತ್ತಿದೆ. ಹೀಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಚಿಕ್ಕಮಗಳೂರು ಜಿಲ್ಲಾ ಪ್ರವಾಸ ಮುಂದೂಡುವಂತೆ ಜಿಲ್ಲಾಡಳಿತ ಪ್ರವಾಸಿಗರಿಗೆ ಮನವಿ ಮಾಡಿದೆ. ಈಗಾಗಲೇ ನದಿ ತೀರ, …

ಹುಣಸೂರು: ತಾಲೂಕಿನಾದ್ಯಾಂತ ಭಾನುವಾರ(ಜು.14) ಸಂಜೆ ಗಾಳಿ ಸಮೇತ ಭಾರಿ ಮಳೆ ಸುರಿದಿದ್ದು, ಗಾಳಿ ಮಳೆ ಅಬ್ಬರಕ್ಕೆ ಮನೆ ಮೇಲೆ ತೆಂಗಿನ ಮರ ಉರುಳಿ ಬಿದ್ದಿದ್ದು, ಸದ್ಯ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ತಾಲೂಕಿನ ಕಲ್ಕುಣಿಕೆ ಗ್ರಾಮದ ನಿಂಗಣ್ಣ ಅವರ ಮನೆ ಬಳಿಯ ತೆಂಗಿನ …

ಮೈಸೂರು: ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ನೂತನ ಕಾರ್ಯಕಾರಿ ಸಮಿತಿ ಸದಸ್ಯರಾಗಿ 15 ಮಂದಿ ಆಯ್ಕೆಯಾಗಿದ್ದಾರೆ. ಪತ್ರಕರ್ತರ ಸಂಘದ ಅಧ್ಯಕ್ಷರು, ಉಪಾಧ್ಯಕ್ಷರು, ಕಾರ್ಯದರ್ಶಿ, ಖಜಾಂಜಿ, ಕಾರ್ಯಕಾರಿ ಸಮಿತಿ ಸದ್ಯಸರ ಆಯ್ಕೆಗೆ ಭಾನುವಾರ(ಜು.15) ಚುನಾವಣೆ ನಡೆದಿತ್ತು. ಬೆಳಿಗ್ಗೆ 8 ರಿಂದ ಮಧ್ಯಾಹ್ನ 2 …

ಮಂಡ್ಯ/ ಮೇಲುಕೋಟೆ: ಇಲ್ಲಿನ ಕಜ್ಜಿ ಕೊಪ್ಪಲು ಗ್ರಾಮದಲ್ಲಿ ಮಣ್ಣು ಕುಸಿದು ಹಾಳಾಗಿದ್ದ ನಾಲೆಯ ದುರಸ್ತಿ ಕಾಮಗಾರಿಗೆ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚೆಲುವರಾಯಸ್ವಾಮಿ ಭಾನುವಾರ(ಜು.14) ಗುದ್ದಲಿ ಪೂಜೆ ನೇರವೇರಿಸಿದರು. ನಂತರ ಮಾತನಾಡಿದ ಸಚಿವ ಎನ್ ಚಲುವರಾಯಸ್ವಾಮಿ, ಮೇಲುಕೋಟೆಯ ಕಜ್ಜಿಕೊಪ್ಪಲು ಗ್ರಾಮದಲ್ಲಿ ಕಾಲುವೆ …

ಬೆಂಗಳೂರು: ಒಳ್ಳೆ ಬುದ್ದಿ ಕಲಿತು, ಚೆನ್ನಾಗಿ ಓದಿ ಅಪ್ಪ ಅಮ್ಮನಿಗೆ ಒಳ್ಳೆ ಹೆಸರು ತನ್ನಿ. ಇನ್ಮೇಲೆ ಯಾವುದೇ ಕೆಟ್ಟ ಕೆಲಸ ಮಾಡದೇ, ಒಳ್ಳೆ ಪ್ರಜೆಯಾಗಿ ಬಾಳಿ. ಇದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಸರ್ಕಾರಿ …

ಮಂಡ್ಯ: ತಮಗೆ ಕೇಂದ್ರದಲ್ಲಿ ಕೃಷಿ ಖಾತೆ ಕೈತಪ್ಪಿದ್ದಕ್ಕೆ ಜೆಡಿಎಸ್‌ ರಾಜ್ಯಾದ್ಯಕ್ಷ ಎಚ್.ಡಿ ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ. ಭಾನುವಾರ(ಜು.15)ಪಾಂಡವಪುರದಲ್ಲಿ ನಡೆದ ಅಭಿನಂದನಾ ಸಭೆಯಲ್ಲಿ ಮಾತನಾಡಿದ ಎಚ್‌ ಡಿ ಕುಮಾರಸ್ವಾಮಿ ತಮಗೆ ಕೃಷಿ ಖಾತೆ ಸಿಗದೆ ಇರುವ ನೋವು ಹೊರಹಾಕಿ, ಕಾಂಗ್ರೆಸ್‌ ರಾಜ್ಯದಲ್ಲಿ ಅಧಿಕಾರಕ್ಕೆ …

ಬೆಂಗಳೂರು: ಕರ್ನಾಟಕ ವಿಧಾನಸಭೆಯ ಮುಂಗಾರು ಅಧಿವೇಶನ ಇಂದಿನಿಂದ ಜುಲೈ.26ರವರೆಗೆ ನಡೆಯಲಿದ್ದು, ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರವನ್ನು ಕಟ್ಟಿಹಾಕಲು ಪ್ರತಿಪಕ್ಷಗಳಾದ ಬಿಜೆಪಿ-ಜೆಡಿಎಸ್‌ ತಯಾರಿ ನಡೆಸಿವೆ. ಲೋಕಸಭೆ ಚುನಾವಣೆ ಮುಗಿದ ಬಳಿಕ ನಡೆಯುತ್ತಿರುವ ಮೊದಲ ಅಧಿವೇಶನ ಇದಾಗಿದೆ. ವಾಲ್ಮೀಕಿ ನಿಗಮ ಹಗರಣ, ವಕ್ಫ್‌ ಬೋರ್ಡ್‌ …

ಮಡಿಕೇರಿ: ರಾಜ್ಯದಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಅದರಲ್ಲೂ ಕರಾವಳಿ ಮಲೆನಾಡಿನಲ್ಲಿ ವರುಣ ಆರ್ಭಟ ಜೋರಾಗಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲೆಗಲ್ಲಿ ಭಾರಿ ಮಳೆ ಸುರಿಯುತ್ತಿದೆ. ಈ ಹಿನ್ನೆಲೆ ಇಂದು (ಜು.೧೫ ರಂದು)  ಉತ್ತರ …

ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮಂಡ್ಯದಲ್ಲಿ ಡಿಸೆಂಬರ್‌ 20, 21, 22 ರಂದು ನಡೆಯಲಿದ್ದು, ಅರ್ಥಪೂರ್ಣವಾಗಿ ಆಚರಿಸಲು ಜಿಲ್ಲಾಡಳಿತ ಸಿದ್ಧತೆ ಪ್ರಾರಂಭಿಸಿದೆ. ಭಾನುವಾರ(ಜು.14) ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರು ನೂತನ …

error: Content is protected !!