Mysore
28
overcast clouds

Social Media

ಸೋಮವಾರ, 27 ಜುಲೈ 2026
Light
Dark

Author: ಚಂದು ಸಿಎನ್

Home/ಚಂದು ಸಿಎನ್
ಚಂದು ಸಿಎನ್

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

ಬೆಂಗಳೂರು: ಮೈಸೂರು ಸಂಸದ ಯದುವೀರ್ ಕೃಷ್ಣದತ್ತ ಒಡೆಯರ್ ಅವರು ಇಂದು(ಜೂ.22) ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದರು. ಭೇಟಿ ವೇಳೆ ಸಂಸದರು ಹಾಗೂ ಮುಖ್ಯಮಂತ್ರಿಗಳು ಉಭಯ ಕುಶಲೋಪರ ವಿಚಾರಿಸಿದರು. ಈ ವೇಳೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ವಿಧಾನ …

ಮಂಡ್ಯ: ಪರಿಸರ ಸಂರಕ್ಷಣೆ ಎಂದರೆ ಗಿಡ ನೆಟ್ಟು ಆಚರಣೆ ಮಾಡುವುದಷ್ಟೇ ಅಲ್ಲದೆ, ಅವುಗಳನ್ನ ಪೋಷಣೆ ಮಾಡಬೇಕು ಆಗಷ್ಟೇ ಅದಕ್ಕೊಂದು ಪರಿಪೂರ್ಣತೆ ಸಿಕ್ಕಿ, ಪ್ರತಿಯೊಬ್ಬರಲ್ಲೂ ಪರಿಸರ ಪ್ರಜ್ಞೆಯು ಮೂಡುತ್ತದೆ ಎಂದು ಬೆಂಗಳೂರು ಆರ್ ಟಿ ಓ ಸಂಘದ ಅಧ್ಯಕ್ಷರಾದ ಮಲ್ಲಿಕಾರ್ಜುನ ಅವರು ಅಭಿಪ್ರಾಯಪಟ್ಟರು. …

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್‌ ಮತ್ತೊಮ್ಮೆ ಜೈಲು ಪಾಲಾಗಿದ್ದಾರೆ.  13 ವರ್ಷದ ಬಳಿಕ ಸಾರಥಿ ಮತ್ತೆ ಜೈಲುವಾಸಿಯಾಗಿದ್ದಾರೆ. ದರ್ಶನ್‌ ಸೇರಿದಂತೆ ಸಹಚರರ ಪೊಲೀಸ್‌ ಕಸ್ಟಡಿ ಇಂದು(ಜೂ.22) ಮುಗಿದ ಹಿನ್ನಲೆ ಕೋರ್ಟ್‌ ಮುಂದೆ ಹಾಜರು ಪಡಿಸಿದ್ದರು. ತನಿಖಾಧಿಕಾರಿ …

ಬೆಂಗಳೂರು: ಬೆಂಗಳೂರು ಕೃಷಿ ವಿಶ್ವವಿದ್ಯಾಲಯವೂ ಅಭಿವೃದ್ಧಿಪಡಿಸಿದ ವಿವಿಧ ತಾಂತ್ರಿಕತೆಗಳ ಉತ್ಪನ್ನ ಹಾಗೂ ಕೃಷಿ ಪರಿಕರಗಳ ʼಕೃಷಿ ವಿಶ್ವವಿದ್ಯಾನಿಲಯ ಉತ್ಪನ್ನಗಳ ಸಂತೆ' ಎಂಬ ವಿನೂತನ ಕಾರ್ಯಕ್ರಮಕ್ಕೆ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಇಂದು(ಜೂ.22) ಚಾಲನೆ ನೀಡಿದರು‌‌. ಕೃಷಿ ವಿವಿಯ ಜಿಕೆವಿಕೆ ಆವರಣದಲ್ಲಿ ಆಯೋಜಿಸಿದ್ದ …

ಹುಣಸೂರು: ಶುಂಠಿ ಬೆಳೆ ಮಧ್ಯೆ ಬೆಳೆಸಿದ್ದ ಗಾಂಜಾ ಗಿಡವನ್ನು ಅಬಕಾರಿ ಅಧಿಕಾರಿಗಳು ದಾಳಿ ನಡೆಸಿ ವಶಪಡಿಸಿಕೊಂಡ ಘಟನೆ ನಾಗರಹೊಳೆ ಉದ್ಯಾನದಂಚಿನ ಗ್ರಾಮದಲ್ಲಿ ನಡೆದಿದೆ. ಹನಗೋಡು ಹೋಬಳಿಯ ಕೋಣನಹೊಸಳ್ಳಿ ಗ್ರಾಮದ ಹೊಲದಲ್ಲಿ ಕದ್ದುಮುಚ್ಚಿ ಗಾಂಜಾ ಗಿಡ ಬೆಳೆಸಲಾಗಿತ್ತು. ಇದರ ಬಗ್ಗೆ ಖಚಿತ ಮಾಹಿತಿ …

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್‌ 13 ವರ್ಷಗಳ ಬಳಿಕ ಮತ್ತೆ ಜೈಲು ಸೇರಿದ್ದಾರೆ. ಪೊಲೀಸ್‌ ಕಸ್ಟಡಿ ವಿಚಾರಣೆ ಶನಿವಾರ(ಜೂ.22) ಮುಗಿದ ಹಿನ್ನೆಲೆ ದರ್ಶನ್‌ರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ವಿಚಾರಣೆ ನಡೆಸಿದ ನ್ಯಾಯಾಲಯ 13ದಿನಗಳ ನ್ಯಾಯಂಗ ಬಂಧನಕ್ಕೆ ಒಪ್ಪಿಸಿದೆ. ಹತ್ಯೆ ಪ್ರಕರಣದಲ್ಲಿ …

ಬೆಂಗಳೂರು: ಖ್ಯಾತ ಸಾಹಿತಿ, ಹಿರಿಯ ಲೇಖಕಿ ಕಮಲಾ ಹಂಪನಾ ಅವರ ನಿಧನಕ್ಕೆ ಡಿಸಿಎಂ ಡಿ.ಕೆ ಶಿವಕುಮಾರ್‌ ಸೇರಿಂದಂತೆ ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಕಮಲಾ ಹಂಪಲಾ ಅವರ ನಿಧನದ ಸುದ್ದಿ ಕೇಳಿ ನೋವಾಗಿದೆ. ಸುದೀರ್ಘ 6 ದಶಕಗಳ ಕಾಲ ಲೇಖನ, ಭಾಷಣ, …

ಬೆಂಗಳೂರು: ಹಿರಿಯ ಲೇಖಕಿ ಕಮಲಾ ಹಂಪನಾ(89) ಅವರು ಇಂದು(ಜೂ.22) ಬೆಳಗಿನ ಜಾವ ಹೃದಯಘಾತದಿಂದ ನಿಧನರಾಗಿದ್ದು, ಸಿಎಂ ಸಿದ್ದರಾಮಯ್ಯ ರವೀಂದ್ರ ಕಲಾಕ್ಷೇತ್ರದಲ್ಲಿ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು. ಅಂತಿಮ ದರ್ಶನ ಪಡೆದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, ಕನ್ನಡದ ಉತ್ತಮ ಸಾಹಿತಿಯನ್ನು …

ಪಾಟ್ನಾ: ಯುಜಿಸಿ-ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು, ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಪ್ರಕರಣ ಸಂಬಂಧ ಮತ್ತೆ ಐವರನ್ನು ಬಿಹಾರ ಪೊಲೀಸರು ಬಂಧಿಸಿದ್ದು, ಪ್ರಕರಣದಲ್ಲಿ ಬಂಧಿತರ ಸಂಖ್ಯೆ 18ಕ್ಕೆ ಏರಿಕೆಯಾಗಿದೆ. ಜಾರ್ಖಾಂಡ್‌ನ ದಿಯೋಘಾರ್‌ ಹಾಗೂ ರಾಂಚಿಯಲ್ಲಿ ಐವರನ್ನು ಬಂಧಿಸಿದ್ದು, ಬಂಧಿತ …

ನವದೆಹಲಿ: ಒಂದೆಡೆ ನೀಟ್‌ ಪ್ರವೇಶ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಆರೋಪ ಕೇಳಿ ಬಂದಿದೆ. ಮತ್ತೊಂದೆಡೆ ಯುಜಿಸಿ ನೆಟ್‌ ಪರೀಕ್ಷೆಯನ್ನು ಪರೀಕ್ಷೆ ನಡೆದ ಮರುದಿನವೇ ಕೇಂದ್ರ ಸರ್ಕಾರ ರದ್ದುಗೊಳಿಸಿದೆ. ಇದರ ವಿರುದ್ಧ ದೇಶದಾದ್ಯಂತ ಆಕ್ರೋಶ ಭುಗಿಲೆದ್ದಿದ್ದು, ಎನ್‌ಟಿಎ ಸಂಸ್ಥೆಯನ್ನು ರದ್ದುಗೊಳಿಸಬೇಕು ಎಂದು ವಿದ್ಯಾರ್ಥಿಗಳು …

error: Content is protected !!