ಮೈಸೂರು: ಕಳೆದ ಮೂರ್ನಾಲ್ಕು ದಿನಗಳಿಂದ ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ 'ಮುಂಗಾರು ಪೂರ್ವ ಮಳೆಯು ವಾತಾವರಣವನ್ನು ತಂಪಾಗಿಸಿದ್ದರಿಂದ ರಣಬಿಸಿಲ ಬಿಸಿಗಾಳಿಯಿಂದ ಕಂಗೆಟ್ಟಿದ್ದ ಜನತೆ ನಿಟ್ಟುಸಿರು ಬಿಟ್ಟಿದ್ದು, ರೈತಾಪಿ ವರ್ಗ ಕೃಷಿ ಚಟುವಟಿಕೆಯನ್ನು ಚುರುಕುಗೊಳಿಸಿದೆ. ಉತ್ತಮ ಮಳೆಯಿಂದಾಗಿ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ರೈತರು ಟ್ರಾಕ್ಟರ್, …