Mysore
28
overcast clouds

Social Media

ಭಾನುವಾರ, 13 ಸೆಪ್ಟೆಂಬರ್ 2026
Light
Dark

Author: ಕೆಂಡಗಣ್ಣಸ್ವಾಮಿ

Home/ಕೆಂಡಗಣ್ಣಸ್ವಾಮಿ
ಕೆಂಡಗಣ್ಣಸ್ವಾಮಿ

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

ಬೆಂಗಳೂರು: ಕೆಇಎ ಸೀಟುಗಳ ಬ್ಲಾಕಿಂಗ್‌ ಹಗರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಮಲ್ಲೇಶ್ವರಂ ಠಾಣೆ ಪೊಲೀಸರು 10 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಹಗರಣದ ಕಿಂಗ್‌ಪಿನ್‌ ಆಗಿರುವ ಹರ್ಷ, ರವಿಶಂಕರ್‌, ಶಶಿಕುಮಾರ್‌, ಪುನೀತ್‌, ಪ್ರಕಾಶ್‌, ಪುರುಷೋತ್ತಮ್‌, ಅವಿನಾಶ್‌ ಸೇರಿದಂತೆ 10 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಕೆಇಎ …

ಹಾಸನ: ಬ್ರಹ್ಮಗಂಟು ಧಾರಾವಾಹಿ ಖ್ಯಾತಿಯ ನಟಿ ಶೋಭಿತಾ ಹೈದರಾಬಾದ್‌ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದು, ಇಂದು ಸ್ವಗ್ರಾಮ ಹಾಸನದ ಹೇರೂರು ಗ್ರಾಮಕ್ಕೆ ಮೃತದೇಹವನ್ನು ತರಲಾಗಿದೆ. ಮಗಳ ಮೃತದೇಹ ನೋಡುತ್ತಿದ್ದಂತೆ ಪೋಷಕರು ಹಾಗೂ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಸಕಲೇಶಪುರ ತಾಲ್ಲೂಕಿನ ಹೇರೂರು ಗ್ರಾಮಕ್ಕೆ ಶೋಭಿತಾ ಮೃತದೇಹ …

ಮೈಸೂರು: ರಾಜ್ಯದಲ್ಲಿ ಫೆಂಗಲ್‌ ಚಂಡಮಾರುತದ ಆರ್ಭಟ ಜೋರಾಗಿದ್ದು, ಈ ಬೆನ್ನಲ್ಲೇ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಕಲ್ಲು ಬಂಡೆಗಳು ರಸ್ತೆಗೆ ಉರುಳಿ ಬಿದ್ದಿವೆ. ಫೆಂಗಲ್‌ ಚಂಡಮಾರುತದ ಪರಿಣಾಮ ಮೈಸೂರಿನಲ್ಲಿ ಧಾರಾಕಾರ ಮಳೆಯಾಗಿದ್ದು, ನಿರಂತರ ಮಳೆ ಸುರಿದ ಪರಿಣಾಮ ಚಾಮುಂಡಿಬೆಟ್ಟದಲ್ಲಿ ಕಲ್ಲು ಬಂಡೆಗಳು ರಸ್ತೆಗೆ ಉರುಳಿಬಿದ್ದಿವೆ. …

ಚೆನ್ನೈ: ತಮಿಳುನಾಡಿನ ತಿರುವಣ್ಣಾಮಲೈನಲ್ಲಿ ಎರಡನೇ ಭೂಕುಸಿತ ಸಂಭವಿಸಿದ್ದು, ಒಂದೇ ಕುಟುಂಬದ 7 ಮಂದಿ ಸಾವನ್ನಪ್ಪಿದ್ದಾರೆ. ಫೆಂಗಲ್‌ ಚಂಡಮಾರುತದ ಪರಿಣಾಮ ತಮಿಳುನಾಡಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಭಾರೀ ಮಳೆಯಿಂದಾಗಿ ಪ್ರಸಿದ್ಧ ಅಣ್ಣಾಮಲೈಯಾರ್‌ ಬೆಟ್ಟದ ಕೆಳಗಿನ ಇಳಿಜಾರುಗಳಲ್ಲಿ ಈ ದುರಂತ ಸಂಭವಿಸಿದೆ. ದುರಂತ …

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಬಿಡುಗಡೆಯಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ತಾತ್ಕಾಲಿಕ ವೇಳಾಪಟ್ಟಿ ಬಿಡುಗಡೆ ಮಾಡಿದೆ. ಪಿಯುಸಿ ಪರೀಕ್ಷೆ ಮಾರ್ಚ್‌.1ರಿಂದ 19ರವರೆಗೆ ನಡೆಯಲಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷೆಯು ಮಾರ್ಚ್‌.20ರಿಂದ ಏಪ್ರಿಲ್.‌2ರವರೆಗೆ ನಡೆಯಲಿದೆ ಎಂದು …

ಮಂಡ್ಯ: ಮಂಡ್ಯ ಜಿಲ್ಲೆ ಕೆ.ಅರ್.ಪೇಟೆ ತಾಲ್ಲೂಕಿನಲ್ಲಿ ಜೋಡಿ ಆನೆಗಳ ಅಟ್ಟಹಾಸಕ್ಕೆ ಜನತೆ ಭಯಭೀತರಾಗಿದ್ದಾರೆ. ಕೆ.ಆರ್.ಪೇಟೆ ತಾಲ್ಲೂಕಿನ ಅಂಬಿಗರಹಳ್ಳಿಯಲ್ಲಿರುವ ಸಂಗಮದಲ್ಲಿ ಬೀಡು ಬಿಟ್ಟಿರುವ ಎರಡು ಕಾಡಾನೆಗಳು ರೈತರ ಜಮೀನುಗಳಿಗೆ ನುಗ್ಗಿ ದಾಂಧಲೆ ನಡೆಸಿವೆ. ನಿನ್ನೆಯಷ್ಟೇ ಕೆಆರ್‌ಎಸ್‌ ಹಿನ್ನೀರು ಪ್ರದೇಶದಲ್ಲಿ ಕಾಣಿಸಿಕೊಂಡಿದ್ದ ಈ ಆನೆಗಳು, …

ದೆಹಲಿ: ವಿಜಯೇಂದ್ರ ನಕಲಿ ನೊಟೀಸ್‌ ಮಾಡಿಸಿದ್ದಾನೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಕಿಡಿಕಾರಿದ್ದಾರೆ. ಸ್ವಪಕ್ಷದವರ ವಿರುದ್ಧ ಪದೇ ಪದೇ ವಾಗ್ದಾಳಿ ನಡೆಸುತ್ತಾ ಬಂದಿರುವ ಶಾಸಕ ಯತ್ನಾಳ್‌ ಅವರು, ತಮಗೆ ಶಿಸ್ತು ಸಮಿತಿ ನೋಟಿಸ್‌ ಬಂದಿರುವ ಬಗ್ಗೆ ಹೊಸ ವರಸೆ …

ತಿರುವನಂತಪುರಂ: ಫೆಂಗಲ್‌ ಚಂಡಮಾರುತದ ಪರಿಣಾಮ ದೇವರ ನಾಡು ಕೇರಳದಲ್ಲೂ ಭಾರೀ ಮಳೆಯಾಗುತ್ತಿದ್ದು, ಮಳೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಶಬರಿಮಲೆಗೆ ಅರಣ್ಯದ ದಾರಿ ಮೂಲಕ ಕಾಲ್ನಡಿಗೆಯಲ್ಲಿ ಬರುವ ಯಾತ್ರಿಕರಿಗೆ ತಾತ್ಕಾಲಿಕವಾಗಿ ನಿಷೇಧ ಹೇರಲಾಗಿದೆ. ಕರಿಮಲ, ಪುಲ್ಲುಮೇಡು ದಾರಿಯಲ್ಲಿ ಸಂಚಾರ ಮಾಡದಂತೆ …

ತುಮಕೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ತುಮಕೂರು ಜಿಲ್ಲೆಗೆ ಭೇಟಿ ನೀಡಿ, 9000 ಕೋಟಿ ರೂ. ವೆಚ್ಚದ 860ಕ್ಕೂ ಹೆಚ್ಚು ಕಾಮಗಾರಿಗಳಿಗೆ ಚಾಲನೆ ನೀಡಿದರು. ತುಮಕೂರು ಜಿಲ್ಲೆಯ ಸೋರಕುಂಟೆ ಬಳಿ ಇರುವ ಪಿ.ಗೊಲ್ಲಹಳ್ಳಿಯ 41 ಎಕರೆ ಜಾಗದಲ್ಲಿ 150 ಕೋಟಿ ರೂ. ವೆಚ್ಚದಲ್ಲಿ …

ಚಾಮರಾಜನಗರ: ರಾಜ್ಯದಲ್ಲಿ ಫೆಂಗಲ್‌ ಚಂಡಮಾರುತದ ಎಫೆಕ್ಟ್‌ನಿಂದಾಗಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಈ ಹಿನ್ನೆಲೆಯಲ್ಲಿ ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಮಳೆ ಬಿಟ್ಟು ಬಿಡದೇ ಸುರಿಯುತ್ತಿದ್ದು, ಮಳೆಗೆ ಚಳಿಯ ವಾತಾವರಣ ನಿರ್ಮಾಣವಾಗಿದೆ. ಕಳೆದ ತಡರಾತ್ರಿಯಿಂದಲೂ ಚಾಮರಾಜನಗರದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಭಾರೀ …

error: Content is protected !!