Mysore
26
heavy intensity rain

Social Media

ಮಂಗಳವಾರ, 15 ಸೆಪ್ಟೆಂಬರ್ 2026
Light
Dark

Author: ಕೆಂಡಗಣ್ಣಸ್ವಾಮಿ

Home/ಕೆಂಡಗಣ್ಣಸ್ವಾಮಿ
ಕೆಂಡಗಣ್ಣಸ್ವಾಮಿ

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಅಪ್ಪನಿಂದಲೇ ಮಗನಿಗೆ ಸೋಲಾಗಿದೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಲೇವಡಿ ಮಾಡಿದ್ದಾರೆ. ಮೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರು, ನೂತನ …

ಹುಬ್ಬಳ್ಳಿ: ಹಣದ ಹೊಳೆ ಹರಿಸಿ ಕಾಂಗ್ರೆಸ್‌ ಗೆಲುವು ಸಾಧಿಸಿದೆ ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಉಪಚುನಾವಣೆಯಲ್ಲಿ ಶಿಗ್ಗಾಂವಿಯಲ್ಲಿ ಮಗನ ಸೋಲಿನ ಕುರಿತು ಮಾತನಾಡಿದ ಅವರು, ಕ್ಷೇತ್ರದ ಜನರ ತೀರ್ಪನ್ನು ನಾನು ಸ್ವಾಗತಿಸುತ್ತೇನೆ. ನಮಗೆ ಗೆಲ್ಲುವ ಎಲ್ಲಾ …

ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ಸಂಸದ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದು, ಸಿದ್ದರಾಮಯ್ಯ ಕರ್ನಾಟಕದ ಜನರ ಜೀವನವನ್ನು ನರಕ ಮಾಡಲು ಹೊರಟಿದ್ದಾರೆ ಎಂದು ಆರೋಪಿಸಿದ್ದಾರೆ. ರೇಷನ್‌ ಕಾರ್ಡ್‌ ರದ್ದಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸ್ಲಮ್‌ನಲ್ಲಿ ವಾಸಿಸಲು ಆಗದ ರೀತಿಯಲ್ಲಿ …

ಮಂಗಳೂರು: ಜನರಿಗೆ ಹೊರೆಯಾಗದಂತೆ ಆಸ್ಪತ್ರೆಗಳಲ್ಲಿ ಸೇವಾ ಶುಲ್ಕ ಪರಿಷ್ಕರಣೆ ಮಾಡಲಾಗುತ್ತದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ. ಈ ಕುರಿತು ಮಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಆರೋಗ್ಯ ಇಲಾಖೆ ವ್ಯಾಪ್ತಿಯ ಆಸ್ಪತ್ರೆಗಳಲ್ಲಿ ಸೇವಾ ಶುಲ್ಕ ಪರಿಷ್ಕರಣೆ ಇನ್ನೂ ಪ್ರಾಥಮಿಕ ಹಂತದ …

ಕೊಲ್ಲೂರು: ಅರ್ಹ ಬಿಪಿಎಲ್‌ ಕಾರ್ಡುದಾರರಿಗೆ ಅನ್ಯಾಯ ಆಗಲು ಬಿಡಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಸ್ಪಷ್ಟಪಡಿಸಿದ್ದಾರೆ. ಇಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಭೇಟಿ ನೀಡಿ ದೇವಿಗೆ ವಿಶೇಷ ಪೂಜೆ ಪ್ರಾರ್ಥನೆ ಸಲ್ಲಿಸಿದರು. ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ …

ನವದೆಹಲಿ: ಲಂಚ ಪ್ರಕರಣದಲ್ಲಿ ಭಾರತದ ಖ್ಯಾತ ಉದ್ಯಮಿ ಗೌತಮ್‌ ಅದಾನಿ ವಿರುದ್ಧ ಅಮೆರಿಕಾದಲ್ಲಿ ಬಂಧನ ವಾರೆಂಟ್‌ ಜಾರಿಯಾದ ಹಿನ್ನೆಲೆಯಲ್ಲಿ ಕೇಂದ್ರದ ವಿರುದ್ಧ ರಾಹುಲ್‌ ಗಾಂಧಿ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು, ಗೌತಮ್‌ ಅದಾನಿಯನ್ನು ಕೂಡಲೇ ಬಂಧಿಸಬೇಕು ಎಂದು …

ನವದೆಹಲಿ: ನಬಾರ್ಡ್‌ನಿಂದ ರಾಜ್ಯದ ರೈತರಿಗೆ ಆಗಿರುವ ಸಾಲದ ಕೊರತೆಯನ್ನು ಸರಿಪಡಿಸಿ ಅನ್ಯಾಯ ಸರಿದೂಗಿಸುವಂತೆ ಒತ್ತಾಯಿಸಿ ಸಿಎಂ ಸಿದ್ದರಾಮಯ್ಯ ಅವರಿಂದು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ. ಈ ವೇಳೆ ಸಚಿವರಾದ ಭೈರತಿ ಸುರೇಶ್‌, ಚಲುವರಾಯಸ್ವಾಮಿ, ಸಿಎಂ ರಾಜಕೀಯ …

ನ್ಯೂಯಾರ್ಕ್‌: ಲಂಚ ಹಾಗೂ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೌತಮ್‌ ಅದಾನಿ ವಿರುದ್ಧ ಅಮೆರಿಕಾ ನ್ಯಾಯಾಲಯ ಬಂಧನ ವಾರೆಂಟ್‌ ಜಾರಿ ಮಾಡಿದೆ. ಗೌತಮ್‌ ಅದಾನಿ ಸೇರಿದಂತೆ ಎಂಟು ಮಂದಿ ವಿರುದ್ಧ ಹಲವು ವಂಚನೆ ಪ್ರಕರಣಗಳು ದಾಖಲಾಗಿವೆ. ಈ ಹಿನ್ನೆಲೆಯಲ್ಲಿ ಬಂಧನ ವಾರೆಂಟ್‌ ಹೊರಡಿಸಲಾಗಿದೆ …

ಉಡುಪಿ: ಕಾಡಿನಲ್ಲಿ ಅಡಗಿರುವ ನಕ್ಸಲರಿಗೆ ಆಂತರಿಕ ಭದ್ರತಾ ವಿಭಾಗದ ಡಿಜಿಪಿ ಪ್ರಣಬ್‌ ಮೊಹಂತಿ ಖಡಕ್‌ ಎಚ್ಚರಿಕೆ ನೀಡಿದ್ದಾರೆ. ಮೋಸ್ಟ್‌ ವಾಂಟೆಡ್‌ ನಕ್ಸಲ್‌ ವಿಕ್ರಂ ಗೌಡ ಎನ್‌ಕೌಂಟರ್‌ ನಡೆದ ಸ್ಥಳಕ್ಕೆ ಭೇಟಿ ನೀಡಿ ಫಟನೆ ಬಗ್ಗೆ ಪೂರ್ಣ ಮಾಹಿತಿ ಪಡೆದ ಅವರು, ನೀವು …

ಹಾವೇರಿ: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಚಿವ ಮನೋಹರ್‌ ತಹಶೀಲ್ದಾರ್ ವಿಧಿವಶರಾಗಿದ್ದಾರೆ. ಅವರಿಗೆ 80 ವರ್ಷ ವಯಸ್ಸಾಗಿತ್ತು. ಹಾನಗಲ್‌ ಕ್ಷೇತ್ರದ ಮಾಜಿ ಶಾಸಕರಾಗಿದ್ದ ಮನೋಹರ್‌ ತಹಶೀಲ್ದಾರ್‌ ಅವರು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮಧ್ಯರಾತ್ರಿ ವಿಧಿವಶರಾಗಿದ್ದಾರೆ. …

error: Content is protected !!